ಮೋದಿ ಸರ್ಕಾರದಿಂದ ನಾಳೆ ಲೋಕಸಭೆ ಕಲಾಪದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಡಿಸೆಂಬರ್ 12ರಂದು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ. ಮೋದಿ ಸರ್ಕಾರವು ಈಗಾಗಲೇ ಸಂಸದರಿಗೆ ಮಸೂದೆಯ ಪ್ರತಿಗಳನ್ನು ರವಾನಿಸಿದೆ. ಇದರಿಂದ ಅವರು ಅದನ್ನು ಅಧ್ಯಯನ ಮಾಡಲು ಸಹಾಯಕವಾಗಲಿದೆ. ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಕಾಲಕ್ಕೆ ಹಂತ ಹಂತವಾಗಿ ನಡೆಸಲು ಶಿಫಾರಸು ಮಾಡಿದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಳಮನೆಗೆ ಹಾಜರಾಗುವ ಸಾಧ್ಯತೆಯಿದೆ.

ಮೋದಿ ಸರ್ಕಾರದಿಂದ ನಾಳೆ ಲೋಕಸಭೆ ಕಲಾಪದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆ ಸಾಧ್ಯತೆ
ಅಧಿವೇಶನ
Follow us
ಸುಷ್ಮಾ ಚಕ್ರೆ
|

Updated on: Dec 16, 2024 | 8:59 PM

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈಗಾಗಲೇ ಕೇಂದ್ರ ಸಚಿವ ಸಂಪುಟ ಅನುಮೋದನೆ ಮಾಡಿದೆ. ಮೂಲಗಳ ಪ್ರಕಾರ, ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ನಾಳೆ (ಮಂಗಳವಾರ) ಲೋಕಸಭೆ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಲಿದ್ದಾರೆ. ಸರ್ಕಾರವು ಈಗಾಗಲೇ ಮಸೂದೆಯ ಪ್ರತಿಗಳನ್ನು ಸಂಸದರಿಗೆ ನೀಡಿದೆ. ಅದನ್ನು ಅಧ್ಯಯನ ಮಾಡಿ ಅವರು ಅಧಿವೇಶನಕ್ಕೆ ಆಗಮಿಸಬಹುದು.

ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಕೊನೆಗೊಳ್ಳುತ್ತಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲಿ ಮಂಡಿಸಲು ಸರ್ಕಾರಕ್ಕೆ ಕೇವಲ 4 ದಿನಗಳು ಉಳಿದಿವೆ.

ಮೋದಿ ಸಂಪುಟ ಅನುಮೋದನೆ:

ಕೇಂದ್ರ ಸಚಿವ ಸಂಪುಟವು ಡಿಸೆಂಬರ್ 12ರಂದು ಮಹತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿದ್ದು, ಇದು ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿತ್ತು. ಮೂಲಗಳ ಪ್ರಕಾರ, ಸಂಪುಟದ ಅನುಮೋದನೆಯು ಪ್ರಸ್ತುತ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡಲಿದೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಎಂದರೇನು?; ಈ ಹಿಂದೆ ಏಕಕಾಲಿಕ ಮತದಾನ ನಡೆದಿತ್ತಾ?

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಶಾಸಕರು ಮತ್ತು ಸಾರ್ವಜನಿಕರೊಂದಿಗೆ ವ್ಯಾಪಕ ಸಮಾಲೋಚನೆ ಅಗತ್ಯವಿರುವುದರಿಂದ ಅದನ್ನು ಜಂಟಿ ಸಮಿತಿಗೆ ಕಳುಹಿಸಬೇಕು ಎಂದು ಕೇಂದ್ರ ಸಚಿವ ಮೇಘವಾಲ್ ಕೆಳಮನೆಗೆ ತಿಳಿಸಬಹುದು. ಸ್ಪೀಕರ್ ಅದೇ ದಿನ ಪಕ್ಷಗಳಿಂದ ಪ್ರಸ್ತಾವಿತ ಸಮಿತಿಗೆ ಸದಸ್ಯರ ಹೆಸರನ್ನು ಕೇಳುತ್ತಾರೆ. ಸಮಿತಿಗೆ ಕಳುಹಿಸಲು ಬಯಸುವ ಸದಸ್ಯರ ಬಗ್ಗೆ ಪಕ್ಷಗಳು ಸ್ಪೀಕರ್‌ಗೆ ತಿಳಿಸದಿದ್ದರೆ, ನಿಯಮಗಳ ಪ್ರಕಾರ, ಅವರು ಸದಸ್ಯತ್ವವನ್ನು ಕಳೆದುಕೊಳ್ಳಬಹುದು. ವಿಧೇಯಕ ಮಂಡಿಸಿದ ದಿನ ಸಂಜೆ ವೇಳೆಗೆ ಸಮಿತಿಯ ರಚನೆಯನ್ನು ಸ್ಪೀಕರ್ ಪ್ರಕಟಿಸಲಿದ್ದಾರೆ.

ಈ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬುದು ಭಾರತದಲ್ಲಿ ಹೊಸ ಪರಿಕಲ್ಪನೆಯಲ್ಲ. 1950ರಲ್ಲಿ ಸಂವಿಧಾನದ ಅಂಗೀಕಾರದ ನಂತರ, 1951ರಿಂದ 1967ರ ನಡುವೆ ಪ್ರತಿ 5 ವರ್ಷಗಳಿಗೊಮ್ಮೆ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲಾಗಿತ್ತು. 1952, 1957, 1962 ಮತ್ತು 1967ರಲ್ಲಿ ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಹೊಸ ರಾಜ್ಯಗಳು ರಚನೆಯಾಗಲು ಪ್ರಾರಂಭಿಸಿದಾಗ ಈ ಪದ್ಧತಿ ಕೊನೆಗೊಂಡಿತು. 1968-1969ರಲ್ಲಿ ವಿವಿಧ ಶಾಸಕಾಂಗ ಸಭೆಗಳ ವಿಸರ್ಜನೆಯ ನಂತರ ಈ ಪದ್ಧತಿಯನ್ನು ಸಂಪೂರ್ಣವಾಗಿ ಕೈಬಿಡಲಾಯಿತು.

ಇದನ್ನೂ ಓದಿ: One Nation One Election: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ಸಂಸದೀಯ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಎರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. “ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತು ಸಮಾಲೋಚನೆ ಪ್ರಕ್ರಿಯೆಯಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ 32 ಪಕ್ಷಗಳು ಈ ಕಲ್ಪನೆಯನ್ನು ಬೆಂಬಲಿಸಿದರೆ, 15 ಪಕ್ಷಗಳು ಬೆಂಬಲಿಸಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!