ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 92ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ. 2004 ಮತ್ತು 2014ರ ನಡುವೆ ಭಾರತದ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಪಂಜಾಬ್ನಲ್ಲಿ ಜನಿಸಿದರು.
“ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹೊಂದಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ
ಮೋದಿಯವರು ಮಾತ್ರವಲ್ಲದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮನಮೋಹನ್ ಸಿಂಗ್ ಅವರನ್ನು ಅಭಿನಂದಿಸಿದರು. “ರಾಜಕೀಯ ಕ್ಷೇತ್ರದಲ್ಲಿ ಸರಳತೆ, ಘನತೆ ಮತ್ತು ಜಾಣ್ಮೆಯ ಅಪರೂಪದ ಸಾಕಾರ”ವಾದ ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Birthday greetings to former PM Dr. Manmohan Singh Ji. I pray that he is blessed with a long and healthy life.
— Narendra Modi (@narendramodi) September 26, 2024
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರಿಗೆ ಶುಭ ಹಾರೈಸಿದ್ದಾರೆ. “ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ನಿಮ್ಮ ನಮ್ರತೆ, ಬುದ್ಧಿವಂತಿಕೆ ಮತ್ತು ನಿಸ್ವಾರ್ಥ ಸೇವೆಯು ನನಗೆ ಮತ್ತು ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿ ನೀಡುತ್ತಿದೆ. ನಿಮಗೆ ಯಾವಾಗಲೂ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ!” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್: ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿ.ವಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿದ್ದರು. ಅವರು 1991ರಿಂದ 2024ರವರೆಗೆ ರಾಜ್ಯಸಭೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಅಲ್ಲಿ ಅವರು 1998 ಮತ್ತು 2004ರ ನಡುವೆ ವಿರೋಧ ಪಕ್ಷದ ನಾಯಕರಾಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ