ಪ್ರಧಾನಿ ಮೋದಿ 2 ಕೋಟಿ ಉದ್ಯೋಗದ ಭರವಸೆ ನೀಡಿ 8 ವರ್ಷವಾಯಿತು; ಗುಜರಾತ್​​ನಲ್ಲಿ ಓವೈಸಿ ವಾಗ್ದಾಳಿ

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ 14 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಇದಕ್ಕಾಗಿ 14 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಪ್ರಧಾನಿ ಮೋದಿ 2 ಕೋಟಿ ಉದ್ಯೋಗದ ಭರವಸೆ ನೀಡಿ 8 ವರ್ಷವಾಯಿತು; ಗುಜರಾತ್​​ನಲ್ಲಿ ಓವೈಸಿ ವಾಗ್ದಾಳಿ
ಅಸಾದುದ್ದೀನ್ ಓವೈಸಿ
Follow us
| Updated By: ಸುಷ್ಮಾ ಚಕ್ರೆ

Updated on: Nov 24, 2022 | 2:24 PM

ಅಹಮದಾಬಾದ್: ದೇಶದ ನಿರೊದ್ಯೋಗದ ಸಮಸ್ಯೆ ಬಗ್ಗೆ ಗುಜರಾತ್​ನಲ್ಲಿ (Gujarat) ಟೀಕಾ ಪ್ರಹಾರ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), 8 ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ (PM Narendra Modi) 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆ ಭರವಸೆ ಏನಾಯಿತು? ದೇಶದಲ್ಲಿ ಸರ್ಕಾರಿ ಉದ್ಯೋಗಳನ್ನು ನೀಡುವುದಾಗಿ ಇನ್ನೂ ಜನರನ್ನು ನಂಬಿಸುತ್ತಲೇ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು 2014ರಲ್ಲಿ 2 ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅದಾಗಿ 8 ವರ್ಷಗಳಾಗಿವೆ. ಈಗ ಅವರು 2024ರವರೆಗೆ 10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಹೇಳುತ್ತಿದ್ದಾರೆ. ಇದುವರೆಗೆ 16 ಕೋಟಿ ಉದ್ಯೋಗಗಳನ್ನು ನೀಡಬೇಕಾಗಿತ್ತು. ಆದರೆ, ಈಗ ಅವರು ಅದನ್ನು 10 ಲಕ್ಷ ಉದ್ಯೋಗಗಳಿಗೆ ಇಳಿಸಿದ್ದಾರೆ ಎಂದು ಓವೈಸಿ ಟೀಕಿಸಿದ್ದಾರೆ.

ನಾನು ಮದುವೆಯಾಗಲು ಬಯಸುವ ಹುಡುಗನ ಬಳಿ ಹುಡುಗಿಯೊಬ್ಬಳು “ನಿಮಗೆ ಸರ್ಕಾರಿ ಕೆಲಸ ಯಾವಾಗ ಸಿಗುತ್ತದೆ? ನನ್ನ ತಂದೆ ನನಗೆ ವರನನ್ನು ಹುಡುಕುತ್ತಿದ್ದಾರೆ” ಎಂದು ಯುವಕನ ಬಳಿ ಹೇಳಿದ್ದಳು. ಅದಕ್ಕೆ ನಾನು ನೀವಿಬ್ಬರೂ ಸುಮ್ಮನೆ ಮೋದಿಯ ಮಾತು ನಂಬಿ ಕುಳಿತುಕೊಳ್ಳಬೇಡಿ. ಬೇಗ ಮದುವೆಯಾಗಿಬಿಡಿ ಎಂದು ಹೇಳಿದ್ದಾಗಿ ಓವೈಸಿ ತಮಾಷೆಯಾಗಿ ಹಿಂದಿನ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಲ್ಲಿ ಮೇಧಾ ಪಾಟ್ಕರ್ ಜತೆ ರಾಹುಲ್ ನಡಿಗೆ; ಟೀಕಾ ಪ್ರಹಾರ ಮಾಡಿದ ಮೋದಿ

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ 14 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಇದಕ್ಕಾಗಿ 14 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ನಿರುದ್ಯೋಗ ಮತ್ತು 130ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಇತ್ತೀಚಿನ ಮೋರ್ಬಿ ಸೇತುವೆಯ ಕುಸಿತದ ಘಟನೆಯ ಬಗ್ಗೆ ವಿಪಕ್ಷಗಳು ಸರ್ಕಾರದ ಮೇಲೆ ದಾಳಿ ಮಾಡುತ್ತಿದೆ.

ಮೋರ್ಬಿ ಸೇತುವೆ ಅಪಘಾತಕ್ಕೆ ಆಡಳಿತ ಪಕ್ಷದ ಹೊಣೆಗಾರಿಕೆಯನ್ನು ಕೋರಿ ಓವೈಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಗುಜರಾತ್ ಅಭಿವೃದ್ಧಿ ಮಾಡಿದ ಬಗ್ಗೆ ಜಂಭದಿಂದ ಬಿಜೆಪಿ ಕೊಚ್ಚಿಕೊಳ್ಳುತ್ತಿದೆ. ಹಾಗಾದರೆ, ಸೇತುವೆ ಕುಸಿದು 140 ಜನರು ಸಾವನ್ನಪ್ಪಿದ ಮೋರ್ಬಿ ಸೇತುವೆಯ ದುರಂತದ ಹೊಣೆಯನ್ನು ಯಾರು ಹೊರುತ್ತಾರೆ? ಆ ಕಂಪನಿಯ ಮಾಲೀಕರು ಇನ್ನೂ ಸಿಕ್ಕಿಲ್ಲ. ಪ್ರಧಾನಿ ಮೋದಿಯವರೇ, ನೀವು ಶ್ರೀಮಂತರನ್ನು ಏಕೆ ಪ್ರೀತಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮುನ್ನ ಸೋಮನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ ಮೋದಿ

ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ವಾರಗಳ ಮುಂಚೆಯೇ ಮೊರ್ಬಿ ಘಟನೆ ನಡೆದಿದ್ದು, ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ರಾಜಕೀಯ ಹಿನ್ನಡೆಗೆ ಕಾರಣವಾಗಬಹುದು ಎನ್ನಲಾಗುತ್ತಿದೆ. 182 ಸದಸ್ಯ ಬಲದ ಗುಜರಾತ್ ರಾಜ್ಯ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8ರಂದು ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ