AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡೆನ್‌ನಂತೆ ಪ್ರಧಾನಿ ಮೋದಿಗೂ ನೆನಪಿನ ಶಕ್ತಿಯ ಸಮಸ್ಯೆಯಿದೆ; ರಾಹುಲ್ ಗಾಂಧಿ ಟೀಕೆ

ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್​ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಹೋಲಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜೋ ಬೈಡೆನ್ ರೀತಿಯಲ್ಲೇ ನರೇಂದ್ರ ಮೋದಿಯವರಿಗೂ ನೆನಪಿನ ಶಕ್ತಿಯ ಕೊರತೆಯಿದೆ ಎಂದು ಲೇವಡಿ ಮಾಡಿದ್ದಾರೆ.

ಜೋ ಬೈಡೆನ್‌ನಂತೆ ಪ್ರಧಾನಿ ಮೋದಿಗೂ ನೆನಪಿನ ಶಕ್ತಿಯ ಸಮಸ್ಯೆಯಿದೆ; ರಾಹುಲ್ ಗಾಂಧಿ ಟೀಕೆ
ರಾಹುಲ್ ಗಾಂಧಿ
ಸುಷ್ಮಾ ಚಕ್ರೆ
|

Updated on:Nov 16, 2024 | 6:36 PM

Share

ಮುಂಬೈ: ಮಹಾರಾಷ್ಟ್ರದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪಿಎಂ ಮೋದಿ ‘ಸ್ಮರಣ ಶಕ್ತಿ ಕಳೆದುಕೊಂಡಿದ್ದಾರೆ’ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಲ್ಲದೆ, ಮೋದಿಯವರನ್ನು ಯುಎಸ್ ಅಧ್ಯಕ್ಷ ಜೋ ಬೈಡೆನ್‌ಗೆ ಹೋಲಿಸಿದ್ದಾರೆ. ಹಾಗೇ, ಮೀಸಲಾತಿ ಮತ್ತು ಜಾತಿ ಗಣತಿಯಲ್ಲಿ ಮೋದಿಯವರ ನಿಲುವನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು “ಸ್ಮರಣ ಶಕ್ತಿ ಕಳೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಮೀಸಲಾತಿ ಮತ್ತು ಜಾತಿ ಗಣತಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಕಾಂಗ್ರೆಸ್ ಹೇಳಿಕೆಗಳನ್ನು ಪುನರಾವರ್ತಿಸುತ್ತಿದ್ದಾರೆ ಮತ್ತು ಸತ್ಯಗಳನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ಬೆಂಬಲಿಸಲು ಅಮೆರಿಕಾದ ರಾಜಕೀಯದಲ್ಲಿನ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಭಯೋತ್ಪಾದಕರು ಈಗ ತಮ್ಮ ಮನೆಗಳಲ್ಲಿ ಅಸುರಕ್ಷಿತರಾಗಿದ್ದಾರೆ’; ಪ್ರಧಾನಿ ಮೋದಿ

ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ “ನೆನಪಿನ ಶಕ್ತಿಯ ಸಮಸ್ಯೆ” ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ನನ್ನ ಸಹೋದರಿ ಪ್ರಿಯಾಂಕಾ ಗಾಂಧಿ ತಾನು ನರೇಂದ್ರ ಮೋದಿಯವರ ಭಾಷಣವನ್ನು ಕೇಳುತ್ತಿದ್ದೇನೆ ಎಂದು ಹೇಳುತ್ತಿದ್ದಳು. ಈ ದಿನಗಳಲ್ಲಿ ಮೋದಿಯವರು ನಾವು ಏನು ಹೇಳಿದರೂ ಅದನ್ನು ಪುನರಾವರ್ತಿಸುತ್ತಿದ್ದಾರೆ ಎಂದು ಆಕೆ ಹೇಳಿದ್ದಳು. ಬಹುಶಃ ಮೋದಿ ಕೂಡ ಅಮೆರಿಕದ ಅಧ್ಯಕ್ಷರಂತೆ ನೆನಪಿನ ಶಕ್ತಿ ಕಳೆದುಕೊಂಡಿರಬಹುದು. ಅವರು ವಿಷಯಗಳನ್ನು ಮರೆತುಬಿಡುತ್ತಿದ್ದರು ಎನಿಸುತ್ತದೆ. ಏನು ಹೇಳಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಅವರು ನೆನಪಿಸಿಕೊಳ್ಳಬೇಕು” ಎಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 16 November 24