ಉತ್ತರಾಖಂಡದ ರುದ್ರಪುರದಲ್ಲಿ ಪಿಎಂ ರೋಡ್ ಶೋ; 3ನೇ ಅವಧಿಯಲ್ಲಿ ಭ್ರಷ್ಟರ ವಿರುದ್ಧ ತೀವ್ರ ಕ್ರಮ: ಮೋದಿ

ಎರಡು ಗುಂಪುಗಳಿವೆ. ಒಂದು ಕಡೆ ನಾವು- ಪ್ರಾಮಾಣಿಕ ಮತ್ತು ಪಾರದರ್ಶಕ. ಇನ್ನೊಂದು ಕಡೆ ಭ್ರಷ್ಟರು, ಕುಟುಂಬ ರಾಜಕಾರಣದವರು ಜಮಾಯಿಸಿದ್ದಾರೆ. ಮೋದಿಯವರನ್ನು ಅವಮಾನಿಸಿ ಬೆದರಿಕೆ ಹಾಕುತ್ತಿದ್ದಾರೆ. ಭ್ರಷ್ಟಾಚಾರ ತೊಲಗಿ ಎಂದು ನಾವು ಹೇಳುತ್ತಿದ್ದೇವೆ. ಭ್ರಷ್ಟರನ್ನು ಉಳಿಸಿ ಎಂದು ಅವರು ಹೇಳುತ್ತಿದ್ದಾರೆ. ಆದರೆ ದೇಶದ ಜನರ ಕರೆಗೆ ನಾನು ಓಗೊಟ್ಟಿದ್ದೇನೆ ಎಂದು ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದಾರೆ.

ಉತ್ತರಾಖಂಡದ ರುದ್ರಪುರದಲ್ಲಿ ಪಿಎಂ ರೋಡ್ ಶೋ; 3ನೇ ಅವಧಿಯಲ್ಲಿ ಭ್ರಷ್ಟರ ವಿರುದ್ಧ ತೀವ್ರ ಕ್ರಮ: ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 02, 2024 | 5:13 PM

ರುದ್ರಪುರ ಏಪ್ರಿಲ್ 02: ಉತ್ತರಾಖಂಡದ (Uttarakhand) ರುದ್ರಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಮಂಗಳವಾರ) ರೋಡ್ ಶೋ (Road Show) ನಡೆಸಿದ್ದಾರೆ. ರೋಡ್ ಶೋ ನಂತರ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಮೂರನೇ ಅವಧಿಯಲ್ಲಿ ಭ್ರಷ್ಟರ ವಿರುದ್ಧ ಕ್ರಮವನ್ನು ತೀವ್ರಗೊಳಿಸಲಾಗುವುದು. ಪ್ರತಿಪಕ್ಷಗಳ “ಬೆದರಿಕೆ ಮತ್ತು ಅವಮಾನ”ಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಉತ್ತರಾಖಂಡದ ಕುಮಾನ್ ಪ್ರದೇಶದ ರುದ್ರಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಾಮಾಣಿಕರು ಮತ್ತು ಭ್ರಷ್ಟರ ನಡುವೆ ಮತ್ತು ಪಾರದರ್ಶಕ ಮತ್ತು ಕುಟುಂಬ ರಾಜಕಾರಣದ ನಡುವೆ ಹೋರಾಟ ನಡೆಯಲಿದೆ ಎಂದಿದ್ದಾರೆ.

ಎರಡು ಗುಂಪುಗಳಿವೆ. ಒಂದು ಕಡೆ ನಾವು- ಪ್ರಾಮಾಣಿಕ ಮತ್ತು ಪಾರದರ್ಶಕ. ಇನ್ನೊಂದು ಕಡೆ ಭ್ರಷ್ಟರು, ಕುಟುಂಬ ರಾಜಕಾರಣದವರು ಜಮಾಯಿಸಿದ್ದಾರೆ. ಮೋದಿಯವರನ್ನು ಅವಮಾನಿಸಿ ಬೆದರಿಕೆ ಹಾಕುತ್ತಿದ್ದಾರೆ. ಭ್ರಷ್ಟಾಚಾರ ತೊಲಗಿ ಎಂದು ನಾವು ಹೇಳುತ್ತಿದ್ದೇವೆ. ಭ್ರಷ್ಟರನ್ನು ಉಳಿಸಿ ಎಂದು ಅವರು ಹೇಳುತ್ತಿದ್ದಾರೆ. ಆದರೆ ದೇಶದ ಜನರ ಕರೆಗೆ ನಾನು ಓಗೊಟ್ಟಿದ್ದೇನೆ. ವಿಪಕ್ಷಗಳ ಅವಮಾನ ಮತ್ತು ಬೆದರಿಕೆಗಳಿಗೆ ಮೋದಿ ಹೆದರುವುದಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಮುಂದುವರಿಯಲಿದೆ. ಮೂರನೇ ಅವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮವನ್ನು ತೀವ್ರಗೊಳಿಸಲಾಗುವುದು. ಭ್ರಷ್ಟಾಚಾರ ಜನರ ಮೇಲೆ ಪರಿಣಾಮ ಬೀರುತ್ತದೆ. ನಾನು ಅದನ್ನು ಅನುಮತಿಸುವುದಿಲ್ಲ. ಇದು ಮೋದಿಯವರ ಗ್ಯಾರಂಟಿ ಎಂದು ಪ್ರಧಾನಿ ಹೇಳಿದರು.

ಮೋದಿ ರೋಡ್ ಶೋ

ಕಾಂಗ್ರೆಸ್ ಜನರನ್ನು ಪ್ರಚೋದಿಸುತ್ತಿದೆ. ದೇಶವನ್ನು ಅಸ್ಥಿರತೆ ಮತ್ತು ಅರಾಜಕತೆಗೆ ತಳ್ಳುತ್ತಿದೆ ಎಂದು ಮೋದಿ ಆರೋಪಿಸಿದ್ದು ದೇಶವನ್ನು ಒಡೆಯಲು ಬಯಸುವವರನ್ನು ಶಿಕ್ಷಿಸಬೇಕೆಂದು ಜನರನ್ನು ಒತ್ತಾಯಿಸಿದರು.

“ದೇಶವು ಮೂರನೇ ಅವಧಿಗೆ ಮೋದಿ ಸರ್ಕಾರವನ್ನು ಆರಿಸಿದರೆ ದೇಶದಲ್ಲಿ ಬೆಂಕಿ ಹತ್ತಿಕೊಳ್ಳುತ್ತದೆ ಎಂದು ಅವರು (ಕಾಂಗ್ರೆಸ್) ಹೇಳುತ್ತಿದ್ದಾರೆ. ನೀವು ಇದನ್ನು ಒಪ್ಪುತ್ತೀರಾ? ನೀವು ಇದನ್ನು ಅನುಮತಿಸುತ್ತೀರಾ? ಇದು ಪ್ರಜಾಪ್ರಭುತ್ವದ ಭಾಷೆಯೇ? ಅವುಗಳನ್ನು ಒಂದೊಂದಾಗಿ ತೆರವುಗೊಳಿಸಿ, ಕ್ಷೇತ್ರದಲ್ಲಿ ಉಳಿಯಲು ಬಿಡಬೇಡಿ. ಕಾಂಗ್ರೆಸ್ ಈಗ ಜನರನ್ನು ಪ್ರಚೋದಿಸುತ್ತಿದೆ. ಇದು ದೇಶವನ್ನು ಅಸ್ಥಿರತೆ ಮತ್ತು ಅರಾಜಕತೆಗೆ ತಳ್ಳುತ್ತಿದೆ. ಈ ದೇಶವನ್ನು ಒಡೆಯಲು ಬಯಸುವವರಿಗೆ ಶಿಕ್ಷೆಯಾಗಬೇಕಲ್ಲವೇ? ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ’ ಎಂಬ ರಾಹುಲ್ ಹೇಳಿಕೆ ವಿರುದ್ಧ ಮೋದಿ ಕಿಡಿ; ಇದು ಪ್ರಜಾಪ್ರಭುತ್ವದ ಭಾಷೆಯೇ?ಎಂದು ಕೇಳಿದ ಪ್ರಧಾನಿ

ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಭಾನುವಾರ ವಿರೋಧ ಪಕ್ಷಗಳು ರಾಮಲೀಲಾ ಮೈದಾನದಲ್ಲಿ ನಡೆಸಿದ ಬೃಹತ್ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಚುನಾವಣೆಯ ಪಂದ್ಯವನ್ನು ಫಿಕ್ಸ್ ಮಾಡಿದ್ದಾರೆ. ಚುನಾವಣೆಗೆ ಮುನ್ನ ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಹೇಳಿದರು. ಈ ನಿಗದಿತ ಚುನಾವಣೆಗಳಲ್ಲಿ ಬಿಜೆಪಿ ಗೆದ್ದು ಸಂವಿಧಾನವನ್ನು ಬದಲಾಯಿಸಿದರೆ ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ, ಇದನ್ನು ನೆನಪಿಡಿ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ