ಅಫ್ಘಾನಿಸ್ತಾನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತುಕತೆ
ಭಾರತವು ತಾಲಿಬಾನ್ ವಶಪಡಿಸಿಕೊಂಡಿರುವ ಅಫ್ಘಾನಿಸ್ತಾನದಿಂದ ತನ್ನ ರಾಯಭಾರಿ ಕಚೇರಿಯನ್ನು ತೆರವುಗೊಳಿಸಿದೆ. ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಆದರೆ, ರಷ್ಯಾ ತನ್ನ ಕಚೇರಿಯನ್ನು ಅಫ್ಘಾನಿಸ್ತಾನದಲ್ಲಿ ಮುಂದುವರಿಸಿದೆ.
ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಜೊತೆ ಅಫ್ಘಾನಿಸ್ತಾನದ (Afghanistan) ಕುರಿತಾಗಿ ಮಾತುಕತೆ ನಡೆಸಿದರು. ಅಫ್ಘಾನಿಸ್ತಾನವನ್ನು ತಾಲಿಬಾನಿಗಳು (Taliban) ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವದ ಎರಡು ಬಲಿಷ್ಠ ರಾಷ್ಟ್ರಗಳು ಇಂದು ಮಾತುಕತೆ ನಡೆಸಿವೆ. ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಹಾಗೂ ಭಾರತ- ರಷ್ಯಾ ಪರಸ್ಪರ ಸಂಬಂಧಗಳ ಬಗ್ಗೆ ಮಾತನಾಡಿರುವದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಇತ್ತೀಚೆಗಿನ ಬೆಳವಣಿಗೆಗಳ ಬಗ್ಗೆ ಸವಿವರವಾದ ಮತ್ತು ಉಪಯುಕ್ತವಾದ ಯೋಚನೆಗಳನ್ನು ನನ್ನ ಗೆಳೆಯ ಅಧ್ಯಕ್ಷ ಪುಟಿನ್ ಜೊತೆಗೆ ಹಂಚಿಕೊಂಡೆ. ಅಷ್ಟೇ ಅಲ್ಲದೆ, ಕೊರೊನಾ ಪ್ರಕರಣದಲ್ಲಿ ಭಾರತ- ರಷ್ಯಾ ರಾಷ್ಟ್ರದ ನೀತಿ ಬಗ್ಗೆಯೂ ಮಾತನಾಡಿದ್ದೇವೆ. ಪ್ರಮುಖ ವಿಷಯಗಳ ಬಗ್ಗೆ ಆಪ್ತ ಸಂವಹನ ನಡೆಸುವುದಕ್ಕೆ ನಾವು ಒಪ್ಪಿಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಭಾರತವು ತಾಲಿಬಾನ್ ವಶಪಡಿಸಿಕೊಂಡಿರುವ ಅಫ್ಘಾನಿಸ್ತಾನದಿಂದ ತನ್ನ ರಾಯಭಾರಿ ಕಚೇರಿಯನ್ನು ತೆರವುಗೊಳಿಸಿದೆ. ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಆದರೆ, ರಷ್ಯಾ ತನ್ನ ಕಚೇರಿಯನ್ನು ಅಫ್ಘಾನಿಸ್ತಾನದಲ್ಲಿ ಮುಂದುವರಿಸಿದೆ. ಹಾಗೂ ತಾಲಿಬಾನ್ಗಳ ಜೊತೆ ಸಂವಹನ ಮಾರ್ಗ ತೆರೆದು ಇರಿಸಿಕೊಂಡಿದ್ದಾರೆ.
Had a detailed and useful exchange of views with my friend President Putin on recent developments in Afghanistan. We also discussed issues on the bilateral agenda, including India-Russia cooperation against COVID-19. We agreed to continue close consultations on important issues.
— Narendra Modi (@narendramodi) August 24, 2021
ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ತಾನದ ವಿರುದ್ಧ ನೀತಿ ಕೈಗೊಳ್ಳಲು ರಷ್ಯಾ ತಾನು ಅವಸರವಾಗಿಲ್ಲ ಎಂದು ಹೇಳಿತ್ತು, ಇತ್ತ ಭಾರತ, ತೀವ್ರಗಾಮಿ ದೇಶಗಳು ವರ್ತಿಸುತ್ತವೆ ಎಂದು ನೋಡಿ ಹಾಗೂ ಇತರ ಪ್ರಜಾಪ್ರಭುತ್ವ ದೇಶಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂದು ತಿಳಿದು ಬಳಿಕ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ಹೇಳಿತ್ತು. ಕಾದು ನೋಡುವ ತಂತ್ರವನ್ನು ಅನುಸರಿಸಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ
(PM Narendra Modi held meeting with Russia President Vladimir Putin over Afghanistan Developments)
Published On - 4:19 pm, Tue, 24 August 21