AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಕುರಿತು ಏಪ್ರಿಲ್27ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ಕೊರೊನಾ ಏರಿಕೆ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಎಲ್ಲಾ ಸಿಎಂಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿಯ ಮಾಹಿತಿ ಪಡೆಯಲಿದ್ದಾರೆ.

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಕುರಿತು ಏಪ್ರಿಲ್27ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ
ನರೇಂದ್ರ ಮೋದಿ
TV9 Web
| Updated By: ಆಯೇಷಾ ಬಾನು|

Updated on: Apr 25, 2022 | 9:00 AM

Share

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಭಾರತದಲ್ಲಿ ಒಟ್ಟು 2,593 ಮಂದಿಯಲ್ಲಿ ಹೊಸದಾಗಿ ಸೋಂಕು ವರದಿಯಾಗಿದ್ದು, 44 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 15,873 ಸಕ್ರಿಯ ಪ್ರಕರಣಗಳಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,30,57,545ಕ್ಕೆ ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ ದೇಶದಲ್ಲಿ ಕೊರೊನಾ ಪ್ರಮಾಣ ಏರಿಕೆ ಹಿನ್ನೆಲೆ ಏಪ್ರಿಲ್27 ರ ಬುಧವಾರದಂದು ದೇಶದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ಸಭೆ ನಡೆಸಲು ಮುಂದಾಗಿದ್ದಾರೆ.

ಕೊರೊನಾ ಏರಿಕೆ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಎಲ್ಲಾ ಸಿಎಂಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿಯ ಮಾಹಿತಿ ಪಡೆಯಲಿದ್ದಾರೆ. ಇದಕ್ಕೂ ಮೊದಲು ಜನವರಿ 13 ರಂದು, ಮೋದಿ ಅವರು ಒಮಿಕ್ರಾನ್ ರೂಪಾಂತರದಿಂದಾಗಿ ಕೊರೊನಾವೈರಸ್ ಪ್ರಕರಣಗಳ ಹೆಚ್ಚಳದ ಬಗ್ಗೆ ದೇಶದಲ್ಲಿನ COVID-19 ಪರಿಸ್ಥಿತಿಯ ಕುರಿತು ವೀಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದರು.

ಇಂದು ಸಿಎಂ ಬೊಮ್ಮಾಯಿ ಸಭೆ ಪ್ರಧಾನಿ ನರೇಂದ್ರ ಮೋದಿ ಸಭೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲು ಮುಂದಾಗಿದ್ದಾರೆ. ಇಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ಏರಿಕೆ ಪ್ರಮಾಣ, ಕೋವಿಡ್ ನಿಯಮಗಳ ಜಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಕ್ರಮ, ವ್ಯಾಕ್ಸಿನೇಷನ್‌ ಬಗ್ಗೆ ತಜ್ಞರಿಂದ ಸಿಎಂಗೆ ಮಾಹಿತಿ ಹೋಗಲಿದೆ. ತಜ್ಞರ ಮಾಹಿತಿ ಆಧಾರದ ಮೇಲೆ ಪ್ರಧಾನಿ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

ಸಿಎಂಗೆ ತಜ್ಞರು ನೀಡಲಿರುವ ಸಲಹೆ -ನಾಲ್ಕನೇ ಅಲೆಯ ಆರಂಭ ಆಗಲಿದೆ. ಮೇ ತಿಂಗಳ ಆರಂಭದಿಂದ ಕೋವಿಡ್ ಹೆಚ್ಚಳ ಆಗಲಿರುವ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ. -ಮಾಸ್ಕ್ ಕಡ್ಡಾಯಗೊಳಿಸಲು ಸಲಹೆ ನೀಡಲಿದ್ದಾರೆ. -ಸಾಮಾಜಿಕ ಅಂತರಕ್ಕೆ ಕ್ರಮ ತೆಗೆದುಕೊಳ್ಳಲು ಸಲಹೆ. -ವ್ಯಾಕ್ಸಿನೇಷನ್‌, ಬೂಸ್ಟರ್ ಡೋಸ್ ಹೆಚ್ಚಳಕ್ಕೆ ಸಲಹೆ -ಕೋವಿಡ್ ಟೆಸ್ಟಿಂಗ್ ಪ್ರಕ್ರಿಯೆ ಆರಂಭ ಮಾಡಲು ಸೂಚನೆ. -ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸಲಹೆ ನೀಡಲಿದ್ದಾರೆ

ಇದನ್ನೂ ಓದಿ: ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್

Coronavirus: ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ಪರಿಶೀಲನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ