AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಕ್ಸ್ ಶೃಂಗಸಭೆಯಲ್ಲಿ ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಬ್ರಿಕ್ಸ್ ಶೃಂಗಸಭೆಯಲ್ಲಿ ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಸುಷ್ಮಾ ಚಕ್ರೆ
|

Updated on: Sep 12, 2026 | 3:14 PM

Share

ದೆಹಲಿಯಲ್ಲಿ ಇಂದಿನಿಂದ ನಡೆಯುತ್ತಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ 'ವ್ಯಾಪಕ ಆಕಾಂಕ್ಷೆಯ ಕಾರ್ಯತಂತ್ರದ ಪಾಲುದಾರಿಕೆ'ಯನ್ನು ಮತ್ತಷ್ಟು ಬಲಪಡಿಸುವ ಕುರಿತು ಉನ್ನತ ಮಟ್ಟದ ಚರ್ಚೆಗಳು ನಡೆದವು. ಅದರಲ್ಲೂ ವಿಶೇಷವಾಗಿ ವ್ಯಾಪಾರ, ಹೂಡಿಕೆ ಮತ್ತು ಇಂಧನ ಭದ್ರತೆ ವಲಯಗಳಲ್ಲಿ ಭಾರತ ಮತ್ತು ಯುಎಇ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಭೇಟಿ ಪ್ರಮುಖ ಮೈಲಿಗಲ್ಲಾಗಿದೆ.

ನವದೆಹಲಿ, ಸೆಪ್ಟೆಂಬರ್ 12: ನವದೆಹಲಿಯಲ್ಲಿ ಇಂದಿನಿಂದ ನಡೆಯುತ್ತಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ‘ವ್ಯಾಪಕ ಆಕಾಂಕ್ಷೆಯ ಕಾರ್ಯತಂತ್ರದ ಪಾಲುದಾರಿಕೆ’ಯನ್ನು ಮತ್ತಷ್ಟು ಬಲಪಡಿಸುವ ಕುರಿತು ಉನ್ನತ ಮಟ್ಟದ ಚರ್ಚೆಗಳು ನಡೆದವು. ಅದರಲ್ಲೂ ವಿಶೇಷವಾಗಿ ವ್ಯಾಪಾರ, ಹೂಡಿಕೆ ಮತ್ತು ಇಂಧನ ಭದ್ರತೆ ವಲಯಗಳಲ್ಲಿ ಭಾರತ ಮತ್ತು ಯುಎಇ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಭೇಟಿ ಪ್ರಮುಖ ಮೈಲಿಗಲ್ಲಾಗಿದೆ.

ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಹಾಗೂ ಇಥಿಯೋಪಿಯಾದ ಪ್ರಧಾನಿ ಅಭಿಯ್ ಅಹಮದ್ ಅಲಿ ಅವರೊಂದಿಗೂ ಪ್ರತ್ಯೇಕವಾಗಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us