ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುವಂತೆ ಉನ್ನತ ಮಟ್ಟದ ಸಭೆಯಲ್ಲಿ ಸೂಚನೆ ನೀಡಿದ ಪ್ರಧಾನಿ ಮೋದಿ
PM Narendra Modi on Covid 19: ವೈದ್ಯಕೀಯ ಆಮ್ಲಜನಕವನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ಕೆಲ ವಾರಗಳಿಂದ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟರು.
ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಕೊವಿಡ್ ಸೊಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ವೇಗವಾಗಿ ವಿತರಿಸುವ ಬಗೆ ಮತ್ತು ಅಗತ್ಯ ರೋಗಿಗಳಿಗೆ ಈ ಸೌಲಭ್ಯವನ್ನು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚಿಸಿದರು. ವೈದ್ಯಕೀಯ ಆಮ್ಲಜನಕವನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ಕೆಲ ವಾರಗಳಿಂದ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟರು.
ಪಿಎಂ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತಿತರ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ದೇಶದ ಆಸ್ಪತ್ರೆಗಳಿಗೆ ಶೀಘ್ರ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವೇಗವಾಗಿ ಆಕ್ಸಿಜನ್ ಪೂರೈಕೆ ಅಗತ್ಯವಾಗಿದೆ. ಮೆಡಿಕಲ್ ಆಕ್ಸಿಜನ್ಗಳ ಖಾಲಿ ಟ್ಯಾಂಕರ್ಗಳನ್ನು ಏರ್ ಲಿಫ್ಟ್ ಮೂಲಕ ಸಾಗಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಭೆಯಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ವೇಗವಾಗಿ ವಿತರಿಸುವ ಬಗೆ ಮತ್ತು ಅಗತ್ಯ ರೋಗಿಗಳಿಗೆ ಈ ಸೌಲಭ್ಯವನ್ನು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚಿಸಿದರು. 20 ರಾಜ್ಯಗಳು ಈಗಾಗಲೇ ಕೇಂದ್ರ ಸರ್ಕಾರವನ್ನು ಕೇಳಿಕೊಂಡಂತೆ ಪ್ರತಿದಿನ 6,785 ಮೆಟ್ರಿಕ್ ಟನ್ ಆಮ್ಲಜನಕದ ಬದಲು 6,822 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಲಾಗಿದೆ ಎಂದು ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು.
ಸರ್ಕಾರಿ ಮತ್ತು ಖಾಸಗಿ ಉತ್ಪಾದನಾ ಸಂಸ್ಥೆಗಳಿಂದ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಸದ್ಯ 3300 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ದೇಶದಲ್ಲಿ ಒಂದು ದಿನದಲ್ಲಿ ಉತ್ಪಾದಿಸಲಾಗುತ್ತಿದೆ ಎಂದು ಅಧಿಕಾರಿಗಳು ಪ್ರಧಾನಿ ಮೋದಿ ಅವರಿಗೆ ತಿಳಿಸಿದರು. ಸಭೆಯಲ್ಲಿ ರಾಜ್ಯಗಳಿಗೆ ಯಾವುದೇ ಅಸಹಕಾರ ನೀಡದಂತೆ ಅಗತ್ಯ ಪ್ರಮಾಣದ ವೈದ್ಯಕೀಯ ಆಮ್ಲಜನಕವನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಅಲ್ಲದೇ, ದೇಶದ ವಿವಿಧ ಪ್ರದೇಶಗಳಲ್ಲಿ ಒಟ್ಟು 162 ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಕಾರ್ಯಾರಂಭಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದರು.
ದೇಶದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಕುರಿತು ಗಂಭೀರ ನಿಲುವು ತಳೆದಿರುವ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ವೈದ್ಯಕೀಯ ಆಮ್ಲಜನಕ ಪೂರೈಕೆ ಕುರಿತು ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಮತ್ತು ನ್ಯಾಯಾಧೀಶರಾದ ಎಲ್,ನಾಗೇಶ್ವರ ರಾವ್, ಎಸ್.ರವೀಂದ್ರ ಭಟ್ ಅವರ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆಯ ಕುರಿತು ದೇಶದ ವಿವಿಧ ಹೈಕೋರ್ಟ್ಗಳಲ್ಲಿ ನಡೆಯುತ್ತಿರುವ ವಿಚಾರಣೆಗಳು ಸಹ ಸರ್ವೋಚ್ಛ ನ್ಯಾಯಾಲಕ್ಕೆ ರವಾನೆಯಾಗುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಪ್ರಕಾರ ದೇಶದ 6 ಹೈಕೋರ್ಟ್ಗಳಲ್ಲಿ ಇಂತಹುದೇ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ: ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್
Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
(PM Narendra Modi holds high level meeting on medical oxygen supply in nation)
Published On - 4:29 pm, Thu, 22 April 21