ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಸರ್ಕಾರ ರಚನೆಯ ಕುರಿತು ತಮ್ಮ ನಿವಾಸದಲ್ಲಿ ಸಭೆ ಕರೆದ ಪ್ರಧಾನಿ ಮೋದಿ

ಉತ್ತರ ಪ್ರದೇಶ, ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದಾರೆ.

ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಸರ್ಕಾರ ರಚನೆಯ ಕುರಿತು ತಮ್ಮ ನಿವಾಸದಲ್ಲಿ ಸಭೆ ಕರೆದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 20, 2022 | 7:54 PM

ದೆಹಲಿ: ಉತ್ತರ ಪ್ರದೇಶ, ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧಿಕೃತ ನಿವಾಸದಲ್ಲಿ ಸಭೆ ಪ್ರಗತಿಯಲ್ಲಿದೆ.  ಪಕ್ಷದ ಉನ್ನತ ನಾಯಕತ್ವವು ರಾಜ್ಯ ನಾಯಕರೊಂದಿಗೆ ಸಮಾಲೋಚಿಸಿ ಕೈಗೊಂಡ ನಿರ್ಧಾರಗಳ ಬಗ್ಗೆ ಪ್ರಧಾನಿ ಅವರಿಗೆ ವಿವರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ (Amit Shah) ಮತ್ತು ರಾಜನಾಥ್ ಸಿಂಗ್ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ(JP Nadda) ಉಪಸ್ಥಿತರಿದ್ದರು. ಪಕ್ಷದ ಕೇಂದ್ರ ವೀಕ್ಷಕರು ನಾಳೆ ರಾಜ್ಯಗಳಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಪಕ್ಷವು ಭಾರಿ ಗೆಲುವು ಸಾಧಿಸಿದ ನಂತರ, ಪಕ್ಷವು ರಾಜ್ಯ ನಾಯಕರ “ಆಂತರಿಕ ನಿರೀಕ್ಷೆಗಳನ್ನು” ನಿರ್ವಹಿಸುವ ಸಮತೋಲನ ಕಾರ್ಯವನ್ನು ಮಾಡುತ್ತಿದೆ ಎಂದು ಮೂಲಗಳು ಸೂಚಿಸಿವೆ. ಗೋವಾ ಮತ್ತು ಮಣಿಪುರದಂತಹ ರಾಜ್ಯಗಳಲ್ಲಿ ಅದು ಗುಂಪುಗಾರಿಕೆಯಾಗಿ ಬೆಳೆದಿದ್ದು ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆದಿದೆ. ಭಾನುವಾರ ಎನ್ ಬಿರೇನ್ ಸಿಂಗ್ ಅವರು ಮಣಿಪುರದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಘೋಷಿಸಿತು. ಸಿಂಗ್ ಅವರು ಇತರ ಸ್ಪರ್ಧಿಗಳಾದ ಬಿಸ್ವಜಿತ್ ಸಿಂಗ್ ಮತ್ತು ಯುಮ್ನಮ್ ಖೇಮ್‌ಚಂದ್ ಅವರೊಂದಿಗೆ ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.

ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ನಡುವೆ ಪೈಪೋಟಿ ನಡೆಯುತ್ತಿರುವ ಗೋವಾದಲ್ಲಿ ಉನ್ನತ ಹುದ್ದೆಯ ಬಗ್ಗೆಯೂ ಸಸ್ಪೆನ್ಸ್ ಇದೆ. ಈ ವಾರದ ಆರಂಭದಲ್ಲಿ ಸಾವಂತ್ ಅವರು ಎರಡನೇ ಬಾರಿ ಮುಖ್ಯಮಂತ್ರಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನ ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಈ ವಾರದ ಆರಂಭದಲ್ಲಿ ತಿಳಿಸಿದೆ. ಆದರೆ ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ. ಕಳೆದ ಅವಧಿಯಲ್ಲಿ ಯೋಗಿ ಆದಿತ್ಯನಾಥ ಅವರ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಅವರನ್ನು ಸೇರಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದು ಪ್ರಮುಖ ಪ್ರಶ್ನೆಯಾಗಿ ಉಳಿದಿದೆ. ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅಪ್ನಾ ದಳ (ಕಾಮೆರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ವಿರುದ್ಧ ಮೌರ್ಯ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಹಿರಿಯ ನಾಯಕ ಎಕೆ ಶರ್ಮಾ ಅವರು ಈ ಹುದ್ದೆಗೆ ಸ್ಪರ್ಧಿಯಾಗಿದ್ದಾರೆ ಎಂದು ಮೂಲಗಳು ಸೂಚಿಸಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಯೋಗಿ ಆದಿತ್ಯನಾಥ ಅವರು ತಮ್ಮ ಸಂಪುಟದ ಅಭ್ಯರ್ಥಿಗಳ ಕುರಿತು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಕೇಂದ್ರ ನಾಯಕತ್ವದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 403 ವಿಧಾನಸಭಾ ಸ್ಥಾನಗಳಲ್ಲಿ 255 ಸ್ಥಾನಗಳನ್ನು ಗಳಿಸುವ ಮೂಲಕ ದಾಖಲೆಯ ಗೆಲುವು ಸಾಧಿಸಿತು. ಅದರ ಮಿತ್ರಪಕ್ಷಗಳು 18  ಸ್ಥಾನಗಳನ್ನು ಗೆದ್ದವು.

ಇದನ್ನೂ ಓದಿ: ಎರಡನೇ ಬಾರಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಎನ್ ಬಿರೇನ್ ಸಿಂಗ್​​ ಆಯ್ಕೆ ಮಾಡಿದ ಬಿಜೆಪಿ

Published On - 6:58 pm, Sun, 20 March 22