ದೇಶದಲ್ಲಿನ ಕೊವಿಡ್ ಪರಿಸ್ಥಿತಿ ಬಗ್ಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ

Narendra Modi Interact with CMs: ಕೊವಿಡ್  ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿಯವರ ಜತೆ ಮಾತನಾಡಿದ ಅರವಿಂದ ಕೇಜ್ರಿವಾಲ್ ರಾಜ್ಯ ಸರ್ಕಾರಗಳಿಗೂ ಕೇಂದ್ರ ಸರ್ಕಾರಕ್ಕೆ ಲಭ್ಯವಾಗುವ ದರದಲ್ಲಿಯೇ ಕೊವಿಡ್ ಲಸಿಕೆ ಲಭ್ಯವಾಗುವಂತಿರಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿನ ಕೊವಿಡ್ ಪರಿಸ್ಥಿತಿ ಬಗ್ಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 23, 2021 | 1:10 PM

ದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಬೆಳಿಗ್ಗೆ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊವಿಡ್ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶ ,ಕೇರಳ, ಛತ್ತೀಸಗಡ, ಮಧ್ಯಪ್ರದೇಶ ಮತ್ತೆ ದೆಹಲಿಯ ಮುಖ್ಯಮಂತ್ರಿ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ .

ಕೊವಿಡ್  ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿಯವರ ಜತೆ ಮಾತನಾಡಿದ ಅರವಿಂದ ಕೇಜ್ರಿವಾಲ್ ರಾಜ್ಯ ಸರ್ಕಾರಗಳಿಗೂ ಕೇಂದ್ರ ಸರ್ಕಾರಕ್ಕೆ ಲಭ್ಯವಾಗುವ ದರದಲ್ಲಿಯೇ ಕೊವಿಡ್ ಲಸಿಕೆ ಲಭ್ಯವಾಗುವಂತಿರಬೇಕು ಎಂದು ಹೇಳಿದ್ದಾರೆ. ದೆಹಲಿಗೆ ಬರುವ ಆಕ್ಸಿಜನ್ ಟ್ಯಾಂಕರ್​ಗಳು ಅಡಚಣೆ ಇಲ್ಲದ ಬರುವುದಕ್ಕಾಗಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಸಹಾಯ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿ ಎಂದು ನಾನು ಕೈಮುಗಿದು ಕೇಳಿಕೊಳ್ಳುತ್ತಿದ್ದೇನೆ.

ಆಕ್ಸಿಜನ್ ಕೊರತೆಯಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಆಕ್ಸಿಜನ್ ಕೊರತೆಯಿಂದ ದುರುಂತವೇನಾದರೂ ಸಂಭವಿಸಿದರೆ ಎಂಬ ಆತಂಕದಲ್ಲಿ ನಾವಿದ್ದೇವೆ. ಇದಕ್ಕಾಗಿ ರಾಷ್ಟ್ರೀಯ ಯೋಜನೆ ಮಾಡಬೇಕಿದೆ. ಒಡಿಶಾ, ಪಶ್ಚಿಮಬಂಗಾಳದಿಂದ ದೆಹಲಿಗೆ ಆಕ್ಸಿಜನ್ ಬರುವುದಿದೆ. ಇದನ್ನು ಆಕ್ಸಿಜನ್ ಎಕ್ಸ್​ಪ್ರೆಸ್ ಅಥವಾ ಏರ್ ಲಿಫ್ಟ್ ಮಾಡಿ ಕಳಿಸಬೇಕು ಎಂದು  ಹೇಳಿದ್ದಾರೆ.

ಅನೇಕ ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯ ಮಧ್ಯೆ, ಉತ್ಪಾದನೆಯನ್ನು ಹೆಚ್ಚಿಸಲು, ವಿತರಣೆಯನ್ನು ವೇಗಗೊಳಿಸಲು ಮತ್ತು ಆರೋಗ್ಯ ಸೌಲಭ್ಯಗಳಿಗೆ ಆಮ್ಲಜನಕದ ಬೆಂಬಲವನ್ನು ಒದಗಿಸಲು ಹೊಸ ವಿಧಾನಗಳನ್ನು ಬಳಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಗುರುವಾರ ಅಧಿಕಾರಿಗಳಿಗೆ ಹೇಳಿದ್ದಾರೆ.

ಉತ್ಪಾದನೆ ಮತ್ತು ಪೂರೈಕೆಯನ್ನು ಸರಿದೂಗಿಸಿದ ನಂತರ ರಾಜ್ಯಗಳಿಗೆ ಆಮ್ಲಜನಕದ ಪೂರೈಕೆ ಸುಗಮವಾಗಿ, ಅಡೆತಡೆಯಿಲ್ಲದೆ ನಡೆಯುವಂತೆ ನೋಡಿಕೊಳ್ಳುವಂತೆ ಪ್ರಧಾನಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಲಿ: ಈ ಬಗ್ಗೆ ಪ್ರಕಾಶ್ ಅಮ್ಮಣ್ಣಾಯ ಹೇಳೋದೇನು?

(PM Narendra Modi holds meeting with Chief Ministers of 10 states over Covid situation)