Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ, ವ್ಯಾಪಾರ ಸಂಬಂಧ ಗಟ್ಟಿಗೊಳಿಸಲು ಒಪ್ಪಿಗೆ; ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಜೊತೆ ಮೋದಿ ಮಾತುಕತೆ

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭಾನುವಾರ (ಜನವರಿ 26) ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹೀಗಾಗಿ, ಈಗಾಗಲೇ ಅವರು ದೆಹಲಿಗೆ ಆಗಮಿಸಿದ್ದಾರೆ. ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಜೊತೆ ನಡೆಸಿದ ಸಭೆಯಲ್ಲಿ ಭಾರತದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಕ್ಷಣಾ, ವ್ಯಾಪಾರ ಸಂಬಂಧ ಗಟ್ಟಿಗೊಳಿಸಲು ಒಪ್ಪಿಗೆ; ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಜೊತೆ ಮೋದಿ ಮಾತುಕತೆ
Modi With Indonesian President Subianto
Follow us
ಸುಷ್ಮಾ ಚಕ್ರೆ
|

Updated on: Jan 25, 2025 | 3:30 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಹೈದರಾಬಾದ್ ಹೌಸ್‌ನಲ್ಲಿ ಪ್ರಬೋವೊ ಸುಬಿಯಾಂಟೊ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಅವರು ಇಬ್ಬರು ನಾಯಕರ ನಡುವಿನ ಚರ್ಚೆಗಳು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ತಮ್ಮ ಮೊದಲ ಭೇಟಿಯಲ್ಲಿರುವ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಇಬ್ಬರೂ ನಾಯಕರು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಈ ಸಭೆಯ ನಂತರ ಭಾರತದ ಮೊದಲ ಗಣರಾಜ್ಯೋತ್ಸವದಂದು ಇಂಡೋನೇಷ್ಯಾ ಮುಖ್ಯ ಅತಿಥಿ ರಾಷ್ಟ್ರವಾಗಿತ್ತು. ಭಾರತ ದೇಶವು ಗಣರಾಜ್ಯಗೊಂಡು 75 ವರ್ಷಗಳನ್ನು ಪೂರೈಸುತ್ತಿರುವುದರಿಂದ ಇಂಡೋನೇಷ್ಯಾ ಮತ್ತೊಮ್ಮೆ ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಕ್ರೀಡಾ ಕೇಂದ್ರವಾಗಿ ಬದಲಾದ ಫ್ಲೈ ಓವರ್ ಕೆಳಗಿನ ಜಾಗ; ಇದು ಪ್ರಧಾನಿ ಮೋದಿ ಐಡಿಯಾ

ಈ ಮಾತುಕತೆಯ ನಂತರ ಫಿನ್‌ಟೆಕ್, ಕೃತಕ ಬುದ್ಧಿಮತ್ತೆ (ಎಐ), ಇಂಟರ್ನೆಟ್ ಆಫ್ ಥಿಂಗ್ಸ್ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸಲು ಎರಡೂ ದೇಶಗಳು ಭಾರತ ಮತ್ತು ಇಂಡೋನೇಷ್ಯಾ ನಡುವೆ ಒಪ್ಪಂದಗಳನ್ನು ಹಂಚಿಕೊಳ್ಳಲಾಯಿತು.

ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ, ಪ್ರಧಾನಿ ಮೋದಿ ಅವರೊಂದಿಗೆ ಬಹಳ ಉತ್ತಮವಾದ ಮತ್ತು ಅತ್ಯಂತ ಸ್ಪಷ್ಟವಾದ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ. ಇಂಡೋನೇಷ್ಯಾ ಆರ್ಥಿಕ ಕ್ಷೇತ್ರದಲ್ಲಿ ಸಹಕಾರದ ಮಟ್ಟವನ್ನು ವೇಗಗೊಳಿಸಲು ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ