AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ

ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ
ಪ್ರಧಾನಿ ಮೋದಿ
TV9 Web
| Edited By: |

Updated on:Dec 19, 2021 | 4:56 PM

Share

ಗೋವಾ ವಿಮೋಚನಾ ದಿನ(Goa Liberation Day 2021) ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಹಾಗೇ, ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮಾರಕಕ್ಕೆ ಆಜಾದ್ ಮೈದಾನಲ್ಲಿ ಪುಷ್ಪನಮನ ಸಲ್ಲಿಸಿದರು.  1961ರ ಡಿಸೆಂಬರ್​ 19ರಂದು ಗೋವಾ ಪೋರ್ಚುಗೀಸರ ಆಡಳಿತದಿಂದ ಮುಕ್ತವಾಗಿದೆ. ಹೀಗಾಗಿ ಇಲ್ಲಿ ಪ್ರತಿವರ್ಷವೂ ಡಿಸೆಂಬರ್​ 19ರಂದು ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ 60ನೇ ವರ್ಷದ ಸ್ವಾತಂತ್ರ್ಯ ದಿನ ನಡೆಯುತ್ತಿದ್ದು, ಮಧ್ಯಾಹ್ನದ ಹೊತ್ತಿಗೆ ಪ್ರಧಾಗಿ ಮೋದಿ ಗೋವಾ ತಲುಪಿ, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ದೃಷ್ಟಿಯಿಂದ, ಪ್ರಧಾನಿ ಮೋದಿಯವರ ಈ ಭೇಟಿ ಮಹತ್ವದ್ದಾಗಿದೆ.

ಇಂದು ಮಧ್ಯಾಹ್ನ 1.30ರ ಹೊತ್ತಿಗೆ ತಲುಪಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬರಮಾಡಿಕೊಂಡರು. ಅಲ್ಲಿಂದಲೇ ಪಣಜಿಯ ಆಜಾದ್ ಮೈದಾನಕ್ಕೆ ತೆರಳಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದರು. ಅಲ್ಲಿಂದ ಮಿರಾಮರ್ ಬೀಚ್​​ಗೆ ತೆರಳಿ, ಸೇಲ್ ಪರೇಡ್​ ಮತ್ತು ಫ್ಲೈಪಾಸ್ಟ್ (ಏರ್​ಕ್ರಾಫ್ಟ್ ಗೌರವಾನ್ವಿತ ಹಾರಾಟ) ಗೌರವ ಪಡೆದರು. ಅಲ್ಲಿಂದ, ಗೋವಾ ವಿಮೋಚನಾ ದಿನದ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂಗೆ ತೆರಳಿದ್ದಾರೆ.   ಇಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಹಾಗೇ, ನಬಾರ್ಡ್​, ಎನ್​ಜಿಒಗಳ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ಮಾಡಿದರು.

ಐದು ಯೋಜನೆಗಳಿಗೆ ಚಾಲನೆ ಹಾಗೇ, ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ. ನವೀಕರಿಸಲಾದ ಫೋರ್ಟ್ ಅಗುಡಾ ಜೈಲ್​ ಮ್ಯೂಸಿಯಂ, ಗೋವಾ ಮೆಡಿಕಲ್​ ಕಾಲೇಜಿನ ಸೂಪರ್ ಸ್ಪೆಶಾಲಿಟಿ ಬ್ಲಾಕ್​, ದಕ್ಷಿಣ ಗೋವಾ ಜಿಲ್ಲಾ ಹೊಸದಾದ ಆಸ್ಪತ್ರೆ, ಮೋಪಾ ಏರ್​ಪೋರ್ಟ್​ನಲ್ಲಿ  ನಿರ್ಮಾಣವಾಗಿರುವ  ವಿಮಾನಯಾನ ಕೌಶಲಾಭಿವೃದ್ಧಿ ಕೇಂದ್ರ ಮತ್ತು ಮಾರ್ಗೋದ ಡಬೋಲಿಮ್​ ನವೇಲಿಮ್​​ನಲ್ಲಿ ​ಗ್ಯಾಸ್ ಇನ್ಸುಲೇಟೆಡ್ ಸಬ್ ಸ್ಟೇಷಬನ್​ಗಳನ್ನು ಮೋದಿಯವರು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: ಭಾರೀ ಮೊತ್ತಕ್ಕೆ ಹರಾಜಾದ ಸೂಪರ್​ ಮ್ಯಾನ್​ #1 ಕಾಮಿಕ್​ ಪುಸ್ತಕ: ಇಲ್ಲಿದೆ ಮಾಹಿತಿ

ಗೋವಾ ವಿಮೋಚನಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗಿ; 650 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ

Published On - 4:55 pm, Sun, 19 December 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ