ಗೋವಾ ವಿಮೋಚನಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗಿ; 650 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ

| Updated By: ಸುಷ್ಮಾ ಚಕ್ರೆ

Updated on: Dec 19, 2021 | 7:46 AM

Goa Liberation Day: ಪ್ರಧಾನಿ ಮೋದಿ ಗೋವಾದ ಸ್ವಾತಂತ್ರ್ಯ ಹೋರಾಟಗಾರರು ಮತ್ತು 'ಆಪರೇಷನ್ ವಿಜಯ್' ನ ಹಿರಿಯ ಯೋಧರನ್ನು ಸನ್ಮಾನಿಸಲಿದ್ದಾರೆ. ಗೋವಾದಲ್ಲಿ 650 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಗೋವಾ ವಿಮೋಚನಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗಿ; 650 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ
Follow us on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗೋವಾಗೆ ಭೇಟಿ ನೀಡಲಿದ್ದು, ಗೋವಾ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 650 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 1961 ಡಿಸೆಂಬರ್ 19ರಂದು ಗೋವಾ ಪೋರ್ಚುಗೀಸರ ಆಳ್ವಿಕೆಯಿಂದ ಮುಕ್ತವಾದ ದಿನ. ಗೋವಾವನ್ನು ಪೋರ್ಚುಗೀಸರ ಆಳ್ವಿಕೆಯಿಂದ ಮುಕ್ತಗೊಳಿಸಿದ ಭಾರತೀಯ ಸೇನಾ ಪಡೆಗಳು ನಡೆಸಿದ ಆಪರೇಷನ್ ವಿಜಯ್ ಯಶಸ್ಸನ್ನು ಸ್ಮರಿಸಲು ಪ್ರತಿ ವರ್ಷ ಡಿ. 19ರಂದು ಗೋವಾ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಗೋವಾದ ಸ್ವಾತಂತ್ರ್ಯಕ್ಕಾಗಿ ಭಾರತೀಯ ಸೇನೆಯು ಡಿಸೆಂಬರ್ 2ರಂದು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು. ಇದರ ನಂತರ, ಪೋರ್ಚುಗೀಸ್ ಗವರ್ನರ್ ಮನು ವಾಸ್ಲೋ ಡಾ ಸಿಲ್ವಾ ಶರಣಾದರು. ಹೀಗೆ 451 ವರ್ಷಗಳ ವಸಾಹತುಶಾಹಿ ಆಳ್ವಿಕೆ ಕೊನೆಗೊಂಡಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಹಿನ್ನೆಲೆಯಲ್ಲಿ ಇಂದು (ಡಿಸೆಂಬರ್ 19) ಗೋವಾಕ್ಕೆ ಭೇಟಿ ನೀಡಲಿದ್ದು, ಗೋವಾ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಗೋವಾದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ನ ಹಿರಿಯ ಯೋಧರನ್ನು ಸನ್ಮಾನಿಸಲಿದ್ದಾರೆ. ಗೋವಾದಲ್ಲಿ 650 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಗೋವಾಕ್ಕೆ ತೆರಳಲಿದ್ದಾರೆ. ಗೋವಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ವಿಮೋಚನಾ ದಿನಾಚರಣೆ ನಡೆಯಲಿದೆ. ಈ ವೇಳೆ ಗೋವಾದಲ್ಲಿ ಬಹುಕೋಟಿ ವೆಚ್ಚದ ಹಲವು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಗೋವಾದಲ್ಲಿನ ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ​​ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಮತ್ತು ದಬೋಲಿಮ್-ನವೇಲಿಮ್, ಮರ್ಗೋವ್‌ನಲ್ಲಿ ಗ್ಯಾಸ್-ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಹಾಗೇ, ಗೋವಾದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್‌ನ ಇಂಡಿಯಾ ಇಂಟರ್​ ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಮತ್ತು ರಿಸರ್ಚ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಯೋಜನೆಯಡಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಅನ್ನು 380 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಇಡೀ ಗೋವಾ ರಾಜ್ಯದ ಏಕೈಕ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಉನ್ನತ ಮಟ್ಟದ ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸುತ್ತದೆ.

ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆಯು ಸುಮಾರು ರೂ.220 ಕೋಟಿ ವೆಚ್ಚದಲ್ಲಿ ನಿರ್ಮಿಸಲ್ಪಟ್ಟಿದೆ. 33 ವಿಶೇಷತೆಗಳಲ್ಲಿ OPD ಸೇವೆಗಳು, ಇತ್ತೀಚಿನ ರೋಗನಿರ್ಣಯ ಮತ್ತು ಪ್ರಯೋಗಾಲಯ ಸೌಲಭ್ಯಗಳು ಮತ್ತು ಫಿಸಿಯೋಥೆರಪಿ, ಆಡಿಯೊಮೆಟ್ರಿ ಮುಂತಾದ ಸೇವೆಗಳು ಸೇರಿದಂತೆ ಆಧುನಿಕ ವೈದ್ಯಕೀಯ ಮೂಲಸೌಕರ್ಯಗಳನ್ನು ಇದು ಹೊಂದಿದೆ. ಆಸ್ಪತ್ರೆಯಲ್ಲಿ 500 ಆಮ್ಲಜನಕದ ವ್ಯವಸ್ಥೆಯಿದೆ.

ಇದನ್ನೂ ಓದಿ: ಲೈಂಗಿಕ ಹಗರಣ ಆರೋಪ: ಗೋವಾ ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ

ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಲು ಸಾಲು ಭೇಟಿ; ಮುಂದಿನ 15 ದಿನದಲ್ಲಿ 4 ಬಾರಿ ಪ್ರವಾಸ

Published On - 7:46 am, Sun, 19 December 21