ಇಟಲಿಯ ಕೃಷ್ಣ ಪ್ರಜ್ಞಾ, ಸನಾತನ ಧರ್ಮ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಇಟಲಿಯ ಸನಾತನ ಧರ್ಮ ಸಂಘ ಸೇರಿದಂತೆ ವಿವಿಧ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರಚಾರ ಮಾಡುವಲ್ಲಿ ಅವರು ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಇಟಲಿಯ ಕೃಷ್ಣ ಪ್ರಜ್ಞಾ, ಸನಾತನ ಧರ್ಮ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: ganapathi bhat

Updated on: Oct 30, 2021 | 3:21 PM

ದೆಹಲಿ: ಇಟಲಿ ಪ್ರವಾಸದಲ್ಲಿ ಇರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವಯುದ್ಧಗಳಲ್ಲಿ ಇಟಲಿಯಲ್ಲಿ ಹೋರಾಡಿದ ಭಾರತೀಯ ಸೈನಿಕರ ಸ್ಮರಣಾರ್ಥ ಸಿಖ್ ಸಮುದಾಯ ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಮೊದಲ ವಿಶ್ವ ಯುದ್ಧ ಮತ್ತು ಎರಡನೇ ವಿಶ್ವ ಯುದ್ಧದಲ್ಲಿ ಇಟಲಿಯಲ್ಲಿ ಹೋರಾಡಿದ ಸಿಖ್ ಸಮುದಾಯ ಮತ್ತು ಇತರೆ ಸಂಸ್ಥೆಗಳನ್ನೊಳಗೊಂಡ ವಿವಿಧ ಸಂಘಟನೆಗಳ ಸಮುದಾಯದ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಈ ಯುದ್ಧಗಳಲ್ಲಿ ಭಾರತೀಯ ಸೈನಿಕರ ಶೌರ್ಯಕ್ಕೆ ಪ್ರಧಾನಮಂತ್ರಿ ಗೌರವ ಸಮರ್ಪಿಸಿದರು.

ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ನರೇಂದ್ರ ಮೋದಿ ಕೃಷ್ಣ ಪ್ರಜ್ಞಾ ಸಭೆ [ಇಸ್ಕಾನ್] ನ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಇಟಲಿಯ ಸನಾತನ ಧರ್ಮ ಸಂಘ ಸೇರಿದಂತೆ ವಿವಿಧ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರಚಾರ ಮಾಡುವಲ್ಲಿ ಅವರು ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ವ್ಯಾಟಿಕನ್​ ಸಿಟಿಯಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ಪ್ರಧಾನಿ ಮೋದಿ ರೋಮ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ವ್ಯಾಟಿಕನ್ ನಗರಕ್ಕೆ ತೆರಳಿ, ಅಲ್ಲಿ ಕ್ರೈಸ್ತರ ಪರಮೋಚ್ಛ ಧರ್ಮಗುರು (ಕ್ಯಾಥೋಲಿಕ್​ ಚರ್ಚ್​ ಮುಖ್ಯಸ್ಥ) ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದರು. ಹಾಗೇ, ಭಾರತಕ್ಕೆ ಬರುವಂತೆ ಅವರಿಗೆ ಆಮಂತ್ರಣ ನೀಡಿದರು. ಇವರಿಬ್ಬರ ಮಧ್ಯೆ 20 ನಿಮಿಷಗಳ ಮಾತುಕತೆ ನಿಗದಿಯಾಗಿತ್ತು. ಆದರೆ ಸುಮಾರು 1 ತಾಸು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಸಂಜೆ ನರೇಂದ್ರ ಮೋದಿಯವರು ಟರ್ಮೆ ಡಿ ಡಿಯೊಕ್ಲೆಜಿಯಾನೊಗೆ ತೆರಳಲಿದ್ದಾರೆ. ಅದಾದ ಬಳಿಕ ಜಿ20 ನಾಯಕರೊಂದಿಗೆ ಔತಣಕೂಟ ನಡೆಯಲಿದೆ. ಜಿ20 ನಾಯಕರೊಂದಿಗೆ ನರೇಂದ್ರ ಮೋದಿ ಕೊವಿಡ್​ 19 ಸಾಂಕ್ರಾಮಿ, ಆರ್ಥಿಕ ಪರಿಸ್ಥಿತಿ, ಸುಸ್ಥಿರ ಅಭಿವೃದ್ಧಿ, ಹವಾಮಾನ ಬದಲಾವಣೆ ಮತ್ತಿತರ ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ. ಹಾಗೇ, ಫ್ರೆಂಚ್​ ಅಧ್ಯಕ್ಷ ಎಮ್ಯಾನುಯೆಲ್​ ಮ್ಯಾಕ್ರನ್​​ ಜತೆ ಸಭೆ ನಡೆಸಲಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೊರನ್ನು ಭೇಟಿಯಾಗುವರು. ಅದರೊಂದಿಗೆ ಸಿಂಗಪುರ ಪ್ರಧಾನಿ ಲೀ ಹೊಸೈನ್​​ ಲೂಂಗ್​​ರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ರೋಮ್​​ನಲ್ಲಿ ಶಿವ ಸ್ತೋತ್ರ ಪಠಿಸಿದ ಯುವತಿಯೆದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ; ಕೇಮ್​ ಚೋ ಎಂಬ ಪ್ರಶ್ನೆಗೆ ಸೂಪರ್​ ಉತ್ತರ

ಇದನ್ನೂ ಓದಿ: G20 Summit: ಇಟಾಲಿಯನ್ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್