PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ

PM-KISAN Scheme: ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM-KISAN ಯೋಜನೆಗೆ 2 ವರ್ಷ: ರೈತರ ಆದಾಯ ದ್ವಿಗುಣಕ್ಕೆ ಸರ್ಕಾರದ ಪರಿಶ್ರಮ ಎಂದ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: ganapathi bhat

Updated on:Apr 06, 2022 | 7:43 PM

ದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಾಧ್ಯವಿರುವ ಎಲ್ಲಾ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (PM Kisan) ಎರಡನೇ ವರ್ಷಾಚರಣೆಯ ಪ್ರಯುಕ್ತ ಇಂದು (ಫೆ.24) ಮೋದಿ ಸರಣಿ ಟ್ವೀಟ್ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಗೊಳಿಸಲು ಸರ್ಕಾರ ಶ್ರಮಿಸಿದೆ. ಕೃಷಿ ವಲಯದಲ್ಲಿ ಬದಲಾವಣೆಗಳನ್ನು ತರಲು ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉತ್ತಮ ನೀರಾವರಿ, ಉತ್ತಮ ತಂತ್ರಜ್ಞಾನ, ಬೆಳೆವಿಮೆ, ಮಣ್ಣಿನ ಫಲವತ್ತತೆ ವಿಚಾರದಲ್ಲಿ ಕೇಂದ್ರ ಶ್ರಮಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಎರಡು ವರ್ಷದ ಹಿಂದೆ ಇದೇ ದಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ಬಂತು. ದೇಶದ ಜನತೆಗೆ ಆಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುವ ರೈತರಿಗೆ ಗೌರವಯುತ ಮತ್ತು ಸಮೃದ್ಧಿಯ ಬದುಕು ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಯಿತು. ರೈತರ ಉತ್ಸಾಹ ನಿಜವಾಗಿಯೂ ಸ್ಫೂರ್ತಿ ತುಂಬುವಂಥದ್ದು ಎಂದು ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯು ಸಣ್ಣ ಮತ್ತು ಮಧ್ಯಮ ವಲಯದ ರೈತರಿಗೆ ನಿಗದಿತ ಹಣ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕ 6,000 ರೂಪಾಯಿ ಮೊತ್ತವನ್ನು ರೈತರಿಗೆ ನೀಡಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ರೈತರು 2,000 ರೂಪಾಯಿ ಪಡೆಯುತ್ತಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಫೆಬ್ರವರಿ 24, 2019ರಂದು ಜಾರಿಗೆ ಬಂತು. ಈ ಯೋಜನೆಯಂತೆ ರೈತರು ವಾರ್ಷಿಕ ₹ 6,000 ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವೆಬ್​ಸೈಟ್​ನ ಮಾಹಿತಿಯಂತೆ, 11.47 ಕೋಟಿ ರೈತರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ

ಇದನ್ನೂ ಓದಿ: ಪ್ರತಿಭಟನಾ ಸ್ಥಳ ಖಾಲಿ ಮಾಡಿ ಎಂದು ಬ್ಯಾನರ್ ಹಚ್ಚಿದ ದೆಹಲಿ ಪೊಲೀಸರು; ರೈತ ಮುಖಂಡರ ಆಕ್ರೋಶ 

Published On - 2:37 pm, Wed, 24 February 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ