PM Modi in West Bengal: ಪಶ್ಚಿಮ ಬಂಗಾಳದಲ್ಲಿ ವಿವಿಧ ಯೋಜನೆಗಳಿಗೆ ಮೋದಿ ಚಾಲನೆ, ಟಿಎಂಸಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ: ನಾಡಿಯಾ ಜಿಲ್ಲೆಯ ಕೃಷ್ಣಾ ನಗರದಲ್ಲಿ ಪ್ರಧಾನಿ ಮೋದಿ ಸಾವಿರಾರು ಕೋಟಿ ರೂಪಾಯಿಗಳ ಮಹತ್ವದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯಕ್ಕೆ ಭೇಟಿ ನೀಡಿರುವ ಮೋದಿ, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಆರಂಭಿಸಿದ್ದಾರೆ.

PM Modi in West Bengal: ಪಶ್ಚಿಮ ಬಂಗಾಳದಲ್ಲಿ ವಿವಿಧ ಯೋಜನೆಗಳಿಗೆ ಮೋದಿ ಚಾಲನೆ, ಟಿಎಂಸಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ
ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ
Follow us
|

Updated on:Mar 02, 2024 | 12:26 PM

ಕೋಲ್ಕತ್ತ, ಮಾರ್ಚ್​ 1: ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯ ಕೃಷ್ಣಾ ನಗರದಲ್ಲಿ (Krishna Nagar) 15 ಸಾವಿರ ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು. ಶುಕ್ರವಾರವಷ್ಟೇ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯ ಅರಾಂಬಾಗ್‌ನಲ್ಲಿ 7,200 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು.

ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 21ನೇ ಶತಮಾನದ ಭಾರತವು ಕ್ಷಿಪ್ರಗತಿಯಲ್ಲಿ ಮುನ್ನಡೆಯುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದಿದ್ದಾರೆ.

ಹಲ್ದಿಯಾ-ಬರೌನಿ ಕಚ್ಚಾ ತೈಲ ಪೈಪ್‌ಲೈನ್‌ಗೆ ಚಾಲನೆ ನೀಡಿದ ಮೋದಿ, ಪರಿಸರದೊಂದಿಗೆ ಸಾಮರಸ್ಯ ಸಾಧಿಸುವುದರ ಜತೆಗೇ ಅಭಿವೃದ್ಧಿಯನ್ನು ಹೇಗೆ ಮಾಡಬಹುದು ಎಂಬುದನ್ನು ಭಾರತವು ಜಗತ್ತಿಗೆ ತೋರಿಸಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಅಗತ್ಯತೆಗಳನ್ನು ಪೂರೈಸಲು ಪಶ್ಚಿಮ ಮೇದಿನಿಪುರ ಜಿಲ್ಲೆಯ ಖರಗ್‌ಪುರದಲ್ಲಿ ಎಲ್‌ಪಿಜಿ ಬಾಟ್ಲಿಂಗ್ ಘಟಕವನ್ನು ಉದ್ಘಾಟಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ತ್ಯಾಜ್ಯ ನೀರು ಸಂಸ್ಕರಣೆ ಮತ್ತು ಒಳಚರಂಡಿಗೆ ಸಂಬಂಧಿಸಿದ ಮೂರು ಯೋಜನೆಗಳನ್ನು ಅವರು ಉದ್ಘಾಟಿಸಿದ್ದಾರೆ. ಈ ಪ್ರದೇಶದಲ್ಲಿ ರೈಲು ಸಾರಿಗೆ ಸೌಲಭ್ಯಗಳನ್ನು ವಿಸ್ತರಿಸುವ ಹಲವಾರು ರೈಲ್ವೆ ಯೋಜನೆಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಇದಕ್ಕೂ ಮುನ್ನ ಮೋದಿ, ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಸಿಂದ್ರಿಯಲ್ಲಿ 35,700 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ಯೋಜನೆಗಳು ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.

ಮೋದಿ ರೋಡ್​ ಶೋ

ಕೃಷ್ಣಾ ನಗರದಲ್ಲಿ ಬಿಜೆಪಿಯ ವಿಜಯ ನಿರ್ಣಯ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ, ರೋಡ್ ಶೋ ನಡೆಸಿದರು. ಬೆಂಬಲಿಗರತ್ತ ಕೈ ಬೀಸಿ ಶುಭಾಶಯ ಕೋರಿದರು.

ಟಿಎಂಸಿ ಸರ್ಕಾರಕ್ಕೆ ‘ಕಮಿಷನ್ ಮೊದಲು, ನಂತರ ಅನುಮೋದನೆ’: ಮೋದಿ ವ್ಯಂಗ್ಯ

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂಬುದಕ್ಕೆ ಬಂಗಾಳದ ಮೊದಲ ಏಮ್ಸ್ ಉದಾಹರಣೆಯಾಗಿದೆ. ಏಮ್ಸ್ ನಿರ್ಮಾಣಕ್ಕೆ ಅನುಮತಿಗೆ ಅವರು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ (ಟಿಎಂಸಿ) ಮೊದಲು ಕಮಿಷನ್ ನೀಡಬೇಕು. ನಂತರವಷ್ಟೇ ಅನುಮತಿ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಏಮ್ಸ್ ನಿರ್ಮಿಸುವುದು ಮೋದಿಯವರ ಗ್ಯಾರಂಟಿ. ಇದು ಈಡೇರುವುದು ಗ್ಯಾರಂಟಿ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಬಂಗಾಳಿ ಭಾಷೆಯಲ್ಲಿ ಮೋದಿ ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

ಏಮ್ಸ್ ಅನ್ನು ಸ್ಥಾಪಿಸುವಲ್ಲಿ ಸಮಸ್ಯೆಗಳಿವೆ. ಇದಕ್ಕೆ ಅನುಮತಿ ಏಕೆ ತೆಗೆದುಕೊಂಡಿಲ್ಲ ಎಂದು ರಾಜ್ಯ ಸರ್ಕಾರ ಪ್ರಶ್ನಿಸುತ್ತಿದೆ. ಪುಂಡ ಪೋಕರಿಗಳಿಗೆ ಕುಮ್ಮಕ್ಕು ನೀಡುವ ಈ ಸರ್ಕಾರ ಇಷ್ಟು ದೊಡ್ಡ ಆಸ್ಪತ್ರೆಗೆ ಅನುಮತಿ ಪಡೆದಿಲ್ಲ ಎನ್ನುತ್ತಿದೆ. ಕಮಿಷನ್ ನೀಡದಿದ್ದರೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Sat, 2 March 24

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್