Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ

ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಅತ್ಯಾಧುನಿಕ ಸೌಲಭ್ಯಗಳಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟನೆ: ಇದು ದೇಶದ ಪ್ರಗತಿಗೆ ದ್ಯೋತಕ ಎಂದ ಪ್ರಧಾನಿ ನರೇಂದ್ರ ಮೋದಿ
ಭೋಪಾಲ್​ನಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಮರು ನಿರ್ನಿಮಾಣಗೊಂಡಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 15, 2021 | 6:34 PM

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಗರದಲ್ಲಿ ಮಧ್ಯಪ್ರದೇಶದಲ್ಲಿಯೇ ಅತ್ಯಂತ ಅಧುನಿಕ ಎಂಬ ಶ್ರೇಯ ಹೊಂದಿರುವ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಈ ಮೊದಲು ಈ ನಿಲ್ದಾಣವನ್ನು ಹಬೀಬ್​ಗಂಜ್ ನಿಲ್ದಾಣ ಎಂದು ಕರೆಯುತ್ತಿದ್ದರು. ಗೋಂಡಾ ಬುಡಕಟ್ಟಿಗೆ ಸೇರಿದ ರಾಣಿ ಕಮಲಾಪತಿ ಅವರ ಸ್ಮರಣಾರ್ಥ ನಿಲ್ದಾಣದ ಹೆಸರು ಬದಲಿಸಲಾಗಿದೆ. ರಾಜ್ಯಪಾಲರಾದ ಮನ್​ಗುಭಾಯ್ ಪಟೇಲ್, ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಗಿನ್ನೋರ್​​ಗಡದ ರಾಣಿ ಕಮಲಾಪತಿ ಅವರ ಹೆಸರು ಇರಿಸಿದ ನಂತರ ನಿಲ್ದಾಣದ ಪ್ರಾಮುಖ್ಯತೆ ಹೆಚ್ಚಾಗಿದೆ. ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು.

ಹಬೀಬ್​ಗಂಜ್ ರೈಲು ನಿಲ್ದಾಣದ ಹೆಸರು ಬದಲಿಸುವಂತೆ ಮಧ್ಯಪ್ರದೇಶ ಸರ್ಕಾರವು ಕೇಂದ್ರ ಗೃಹ ಇಲಾಖೆಗೆ ಪತ್ರಬರೆದು ವಿನಂತಿಸಿತ್ತು. ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಅವರ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸುವ ಬುಡಕಟ್ಟು ಜನರ ಸಮಾವೇಶ ‘ಜನಜಾತೀಯ ಗೌರವ ದಿನಸ’ದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಭೋಪಾಲ್​ಗೆ ಬಂದಿದ್ದರು. ಇದೇ ಸಂದರ್ಭ ನವೀಕೃತ ರೈಲು ನಿಲ್ದಾಣಕ್ಕೂ ಚಾಲನೆ ನೀಡಿದರು. ‘ಈ ಮೊದಲು ಕೇವಲ ವಿಮಾನ ನಿಲ್ದಾಣಗಳಲ್ಲಿ ಮಾತ್ರ ದೊರೆಯುತ್ತಿದ್ದ ಸೌಲಭ್ಯಗಳು ಇದೀಗ ರೈಲು ನಿಲ್ದಾಣಗಳಲ್ಲಿ ಸಿಗುತ್ತಿವೆ. ಅತ್ಯುತ್ತಮ ವಾತಾನುಕೂಲ ಮತ್ತು ಹವಾನಿಯಂತ್ರಕ ವ್ಯವಸ್ಥೆ ಹೊಂದಿದೆ. ದೇಶವು ಹೇಗೆ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ ಎಂಬುದಕ್ಕೆ ಭಾರತೀಯ ರೈಲ್ವೆಯು ಉತ್ತಮ ಉದಾಹರಣೆ ಎಂದರು.

ರೈಲು ನಿಲ್ದಾಣವನ್ನು ₹ 450 ಕೋಟಿ ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಪರಿಸರ ಸ್ನೇಹಿ ಕಟ್ಟಡದಲ್ಲಿ ವಿಶ್ವದರ್ಜೆಯ ಸೌಲಭ್ಯಗಳು ಲಭ್ಯವಿದೆ. ಅಂಗವಿಕಲರಿಗೆ ಬೇಕಿರುವ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಬಹುಹಂತದ ಸಾರಿಗೆ ವ್ಯವಸ್ಥೆಯನ್ನೂ ಈ ನಿಲ್ದಾಣದಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ: Cryptocurrency: ಕ್ರಿಪ್ಟೋಕರೆನ್ಸಿ ಕುರಿತು ತಜ್ಞರ ಜೊತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ಇದನ್ನೂ ಓದಿ: ನರೇಂದ್ರ ಮೋದಿಯವರಿಗೆ ಸೀರೆ ಉಡುಗೊರೆ ಕೊಟ್ಟ ಪದ್ಮಶ್ರೀ ಪುರಸ್ಕೃತ; ಗಿಫ್ಟ್​ ನೋಡಿ ಪ್ರಧಾನಿಗೆ ಖುಷಿಯೋ ಖುಷಿ !

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !