Akhil Bharatiya Shiksha Samagam: ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕಿದೆ: ಮೋದಿ

ಸಮಾಜ ವಿಜ್ಞಾನದಿಂದ ಇಂಜಿನಿಯರಿಂಗ್ ವರೆಗೆ ಶಿಕ್ಷಣ ಈಗ ಭಾರತೀಯ ಭಾಷೆಗಳಲ್ಲಿ ಇರಲಿದೆ. ಇದು ಎನ್‌ಇಪಿಯಿಂದ ಸಾಧ್ಯವಾಗಿದ್ದು, ಎಲ್ಲಾ ಭಾಷೆಗಳಿಗೆ ಯೋಗ್ಯ ಗೌರವ ಸಿಗುತ್ತದೆ. ಅದೇ ವೇಳೆ ಪ್ರತಿಭೆಗಿಂತ ಮಾತೃಭಾಷೆಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ನಿರ್ಣಯಿಸುವುದು ಅವರಿಗೆ ಮಾಡುವ ಘೋರ ಅನ್ಯಾಯ ಎಂದು ಮೋದಿ ಹೇಳಿದ್ದಾರೆ.

Akhil Bharatiya Shiksha Samagam: ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕಿದೆ: ಮೋದಿ
ನರೇಂದ್ರ ಮೋದಿ
Follow us
|

Updated on:Jul 29, 2023 | 1:13 PM

ದೆಹಲಿ ಜುಲೈ 29: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಶನಿವಾರ) ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ್ (Akhil Bharatiya Shiksha Samagam) ಉದ್ಘಾಟಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿಯ (National Education Policy) ಮೂರನೇ ವಾರ್ಷಿಕೋತ್ಸವದ ಆಚರಣೆಯ ಸಲುವಾಗಿ ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮೋದಿ, 12 ಭಾಷೆಗಳಲ್ಲಿ 100 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ‘ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಇದೆ. ದೇಶವು ಯಾವ ಗುರಿಯೊಂದಿಗೆ ಮುನ್ನಡೆಯುತ್ತಿದೆಯೋ ಅದನ್ನು ಸಾಧಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರವನ್ನು ಹೊಂದಿದೆ. ನೀವು ಇದರ ಪ್ರತಿನಿಧಿಗಳು. ಅಖಿಲ ಭಾರತೀಯ ಶಿಕ್ಷಾ ಸಮಾಗಮ್‌ನ ಭಾಗವಾಗಲು ನನಗೂ ಇದು ಒಂದು ಅವಕಾಶ ಎಂದು ಹೇಳಿದ್ದಾರೆ.

ಭಾರತವನ್ನು ಸಂಶೋಧನೆ ಮತ್ತು ಆವಿಷ್ಕಾರದ ಕೇಂದ್ರವನ್ನಾಗಿ ಮಾಡುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿಯಾಗಿದೆ. NCERT ಎಲ್ಲಾ 22 ಭಾರತೀಯ ಭಾಷೆಗಳೊಂದಿಗೆ ಸುಮಾರು 130 ವಿಷಯಗಳಲ್ಲಿ ಶಿಕ್ಷಣಕ್ಕಾಗಿ ಹೊಸ ಪುಸ್ತಕಗಳನ್ನು ಸಿದ್ಧಪಡಿಸುತ್ತಿದೆ. ಸಮಾಜ ವಿಜ್ಞಾನದಿಂದ ಇಂಜಿನಿಯರಿಂಗ್ ವರೆಗೆ ಶಿಕ್ಷಣ ಈಗ ಭಾರತೀಯ ಭಾಷೆಗಳಲ್ಲಿ ಇರಲಿದೆ. ಇದು ಎನ್‌ಇಪಿಯಿಂದ ಸಾಧ್ಯವಾಗಿದ್ದು, ಎಲ್ಲಾ ಭಾಷೆಗಳಿಗೆ ಯೋಗ್ಯ ಗೌರವ ಸಿಗುತ್ತದೆ. ಅದೇ ವೇಳೆ ಪ್ರತಿಭೆಗಿಂತ ಮಾತೃಭಾಷೆಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ನಿರ್ಣಯಿಸುವುದು ಅವರಿಗೆ ಮಾಡುವ ಘೋರ ಅನ್ಯಾಯ ಎಂದು ಮೋದಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿಯವರು ಪ್ರಧಾನ ಮಂತ್ರಿ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ಅಖಿಲ ಭಾರತೀಯ ಶಿಕ್ಷಾ ಸಮಾಗಮ್ 2023, ಜುಲೈ 29 ಮತ್ತು 30 ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹದಿನಾರು ಗೋಷ್ಠಿಗಳು ಇರಲಿದೆ. ಇದರಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಆಡಳಿತದ ಪ್ರವೇಶ, ಸಮಾನ ಮತ್ತು ಅಂತರ್ಗತ ಶಿಕ್ಷಣ, ಭಾರತೀಯ ಜ್ಞಾನ ವ್ಯವಸ್ಥೆ, ಶಿಕ್ಷಣವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ಗುಂಪಿನ ಸಮಸ್ಯೆಗಳು, ರಾಷ್ಟ್ರೀಯ ಸಂಸ್ಥೆಗಳ ಶ್ರೇಯಾಂಕ ಚೌಕಟ್ಟು ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ: Maharashtra Bus Accident: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಬಸ್ ಅಪಘಾತ; 6 ಮಂದಿ ಸಾವು

ಮೋದಿ ಭಾಷಣದ ಮುಖ್ಯಾಂಶಗಳು

  1. ಕಾಶಿಯ ರುದ್ರಾಕ್ಷಿಯಿಂದ ಆಧುನಿಕ ಭಾರತದ ಈ ಮಂಟಪದವರೆಗೆ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಪಯಣದಲ್ಲಿ ಸಂದೇಶವಿದೆ. ಅದು ಪ್ರಾಚೀನತೆ ಮತ್ತು ಆಧುನಿಕತೆಯ ಸಂಗಮವಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯು ಭಾರತದ ಸಂಪ್ರದಾಯಗಳನ್ನು ಕಾಪಾಡಿಕೊಳ್ಳುವುದರ ಜತೆಯಲ್ಲೇ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿಯೂ ಮುಂದೆ ಸಾಗುತ್ತಿದೆ.
  2. ಯುವ ಜನಾಂಗದ ಪ್ರತಿಭೆಯ ಬದಲಿಗೆ ಅವರ ಭಾಷೆಯ ಆಧಾರದ ಮೇಲೆ ಅವರನ್ನು ನಿರ್ಣಯಿಸುವುದು ದೊಡ್ಡ ಅನ್ಯಾಯವಾಗಿದೆ. ಪ್ರಪಂಚದಲ್ಲಿ ವಿವಿಧ ಭಾಷೆಗಳಿವೆ. ಎಲ್ಲಾ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಅಭಿವೃದ್ಧಿ ಹೊಂದಿದ ದೇಶಗಳು ತಮ್ಮ ಮಾತೃಭಾಷೆಯ ಆಧಾರದ ಮೇಲೆ ಪ್ರಗತಿ ಸಾಧಿಸಿವೆ. ನಾವು ಹಲವು ಸ್ಥಳೀಯ ಭಾಷೆಗಳನ್ನು ಹೊಂದಿದ್ದರೂ ಅವುಗಳನ್ನು ಹಿಂದುಳಿದವು ಎಂಬಂತೆ ನಾವು ನೋಡುತ್ತೇವೆ.
  3. ಎನ್‌ಇಪಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಭವಿಷ್ಯದ ತಂತ್ರಜ್ಞಾನಕ್ಕೆ ಸಮತೋಲಿತ ರೀತಿಯಲ್ಲಿ ನೀಡಿದೆ. ಸಂಶೋಧನಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು, ದೇಶದ ಶಿಕ್ಷಣತಜ್ಞರು ತುಂಬಾ ಶ್ರಮಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳು ಹೊಸ ವ್ಯವಸ್ಥೆಯ ಬಗ್ಗೆ ಅರಿವು ಹೊಂದಿದ್ದಾರೆ. 10+2 ಶಿಕ್ಷಣ ವ್ಯವಸ್ಥೆಯ ಬದಲಿಗೆ 5+3+3+4 ಅನ್ನು ತರಲಾಗುತ್ತಿದೆ ಎಂದು ಅವರಿಗೆ ತಿಳಿದಿದೆ.
  4. ಸಾಫ್ಟ್‌ವೇರ್ ತಂತ್ರಜ್ಞಾನದ ವಿಷಯಕ್ಕೆ ಬಂದಾಗ ಭವಿಷ್ಯವು ಭಾರತಕ್ಕೆ ಸೇರಿದೆ ಎಂದು ಜಗತ್ತಿಗೆ ತಿಳಿದಿದೆ. ಬಾಹ್ಯಾಕಾಶ ತಂತ್ರಜ್ಞಾನದ ವಿಷಯಕ್ಕೆ ಬಂದಾಗ, ಭಾರತದ ಸಾಮರ್ಥ್ಯದೊಂದಿಗೆ ಸ್ಪರ್ಧಿಸುವುದು ಸುಲಭವಲ್ಲ. ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಎಂಬ ಭಾರತದ ಮಾದರಿ ಪ್ರಶಂಸೆ ಗಳಿಸಿದೆ.
  5. ಅಖಿಲ ಭಾರತ ಶಿಕ್ಷಣ ಸಮ್ಮೇಳನದ ಈ ಪ್ರಯಾಣದಲ್ಲಿ ಗುಪ್ತವಾದ ಸಂದೇಶವೊಂದಿದೆ.ಇದು ಪ್ರಾಚೀನತೆ ಮತ್ತು ಆಧುನಿಕತೆಯ ಸಂಗಮದ ಸಂದೇಶ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sat, 29 July 23

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ