ಇಟಾನಗರ: 2014ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಪ್ರತಿ ಹಳ್ಳಿಗೆ ವಿದ್ಯುತ್ ನೀಡುವ ಅಭಿಯಾನವನ್ನು ಪ್ರಾರಂಭಿಸಲಾಯಿತು. ಅರುಣಾಚಲ ಪ್ರದೇಶದ (Arunachal Pradesh) ಹಲವಾರು ಗ್ರಾಮಗಳು ಇದರಿಂದ ಪ್ರಯೋಜನ ಪಡೆದಿವೆ. ಗಡಿ ಭಾಗದಲ್ಲಿರುವ ಗ್ರಾಮಗಳನ್ನು ದೇಶದ ಮೊದಲ ಗ್ರಾಮವೆಂದು ಪರಿಗಣಿಸಿ ನಮ್ಮ ಸರ್ಕಾರ ಕೆಲಸ ಮಾಡಿದೆ. ಗಡಿ ಭಾಗದಲ್ಲಿರುವ ಗ್ರಾಮಗಳನ್ನು ಬಲಪಡಿಸುವುದು ನಮ್ಮ ಪ್ರಯತ್ನವಾಗಿದೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.
ನಾನು 2019ರಲ್ಲಿ ಇದರ ಅಡಿಗಲ್ಲು ಹಾಕಿದಾಗ ರಾಜಕೀಯ ಟೀಕಾಕಾರರು ಚುನಾವಣೆಗಳು ನಡೆಯುತ್ತಿರುವುದರಿಂದಲೇ ಪ್ರಧಾನಿ ಮೋದಿ ಅರುಣಾಚಲ ಪ್ರದೇಶಕ್ಕೆ ಹೋಗುತ್ತಿದ್ದಾರೆ. ಅವರು ವಿಮಾನ ನಿಲ್ದಾಣವನ್ನು ನಿರ್ಮಿಸಲು ಹೋಗುತ್ತಿಲ್ಲ, ಕೇವಲ ಅಡಿಗಲ್ಲು ಹಾಕಲು ಹೋಗುತ್ತಿದ್ದಾರೆ ಎಂದು ಗಲಾಟೆ ಮಾಡಿದ್ದರು. ಇದೀಗ ಈ ವಿಮಾನ ನಿಲ್ದಾಣದ ಉದ್ಘಾಟನೆಯಿಂದ ಅವರಿಗೆ ಕಪಾಳಮೋಕ್ಷವಾಗಿದೆ ಎಂದು ದೋನಿ ಪೋಲೋ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಹೇಳಿದ್ದಾರೆ.
A new dawn of development for the Northeast! Launching connectivity & energy infrastructure projects in Arunachal Pradesh. https://t.co/kmPtgspIwr
— Narendra Modi (@narendramodi) November 19, 2022
ಇದನ್ನೂ ಓದಿ: Viral Photo: ಜಿ20 ಶೃಂಗಸಭೆ; ಪ್ರಧಾನಿ ನರೇಂದ್ರ ಮೋದಿಗೆ ಸೆಲ್ಯೂಟ್ ಹೊಡೆದ ಅಮೆರಿಕ ಅಧ್ಯಕ್ಷ ಜೋ ಬೈಡೆನ್
ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರುಣಾಚಲದ ಮೊದಲ “ಗ್ರೀನ್‌ಫೀಲ್ಡ್” ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ತಮ್ಮ ವಿರುದ್ಧದ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ.
ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಪ್ರಧಾನಿ ಮೋದಿಯವರು ದೋನಿ ಪೋಲೋ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಹೆಸರು ಈಶಾನ್ಯ ರಾಜ್ಯದಲ್ಲಿ ಸೂರ್ಯ (ಡೊನಿ) ಮತ್ತು ಚಂದ್ರ (ಪೊಲೊ)ಗೆ ಪ್ರಾಚೀನ ಹೆಸರಾಗಿದೆ. 640 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ವಿಮಾನ ನಿಲ್ದಾಣವು ಸಂಪರ್ಕವನ್ನು ಹೆಚ್ಚಿಸಲು ಮತ್ತು ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
Affording new avenues of connectivity.
Watch how Donyi Polo airport in Arunachal Pradesh will boost connectivity in the region. pic.twitter.com/hbqTme372V
— BJP (@BJP4India) November 19, 2022
ಇದನ್ನೂ ಓದಿ: Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಇದೇ ವೇಳೆ ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರು 600 ಮೆಗಾವ್ಯಾಟ್ ಕಮೆಂಗ್ ಜಲವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಅರುಣಾಚಲ ಪ್ರದೇಶವನ್ನು ವಿದ್ಯುತ್ ಹೆಚ್ಚುವರಿ ರಾಜ್ಯವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. 8,450 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ.