AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building Inauguration: ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

New Parliament Building Inauguration: ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 28, 2023 | 9:18 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ನೂತನ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆಸನದ ಬಳಿ ಐತಿಹಾಸಿಕ ರಾಜದಂಡ ಸೆಂಗೋಲ್​ ಸ್ಥಾಪಿಸಲಾಯಿತು. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು. ನೂತನ ಕಟ್ಟಡದ ಸ್ಮರಣ ಫಲಕವನ್ನು ಅನಾವರಣಗೊಳಿಸಿದರು. ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಅಧೀನಂ ಗಣ್ಯರು ಉಪಸ್ಥಿತರಿದ್ದರು.

ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಮೋದಿ ಅವರು ಸಂಸತ್ತಿನ ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಕಾಲಿಟ್ಟರು ಮತ್ತು ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು.

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸನ್ಮಾನ ಮಾಡಿದರು. ಸಾಂಪ್ರದಾಯಿಕ ಶಾಲು ಹೊದಿಸಿ, ಸ್ಮರಣಿಕೆ ನೀಡುವ ಮೂಲಕ ಕಾರ್ಮಿಕರಿಗೆ ಪ್ರಧಾನಿ ಮೋದಿಯವರು ಗೌರವ ಸಲ್ಲಿಸಿದರು. ಆಗಸ್ಟ್ 14, 1947 ರಂದು ಬ್ರಿಟಿಷ್ ಗುಲಾಮಗಿರಿ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸೂಚಕವಾಗಿ ಸಂಗೋಲ್ ಅನ್ನು ಭಾರತೀಯಕರಿಗೆ ಬ್ರಿಟೀಷರು ನೀಡಿದ್ದರು.

ಮತ್ತಷ್ಟು ಓದಿ: New Parliament Building: ಸಂಸತ್ತಿನಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ, ಪ್ರಧಾನಿ ಮೋದಿಯಿಂದ ಸಾಷ್ಟಾಂಗ ನಮಸ್ಕಾರ, ಸೆಂಗೋಲ್​ನ ಮಹತ್ವ ಏನು?

ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಬ್ರಿಟೀಷರಿಂದ ಈ ಸೆಂಗೋಲ್’ನ್ನು ಪಡೆದಿದ್ದರು. ಸೆಂಗೋಲ್ ಆಡಳಿತಗಾರನು ಕಾನೂನಿನ ಅಡಿಯಲ್ಲಿರುತ್ತಾನೆ ಎಂಬುದರ ಸಂಕೇತವಾಗಿದೆ. ಜಗತ್ತನ್ನು ಸಂಕೇತಿಸುವ ಸೆಂಗೋಲ್‌ನ ಮಂಡಲವು ಶಿವನ ಪವಿತ್ರ ಗೂಳಿಯಾದ ನಂದಿಯ ಕೆತ್ತನೆಯಿಂದ ಒಳಗೊಂಡಿದೆ. ಚಿನ್ನದ ರಾಜದಂಡದ ಮೂಲವು ಚೋಳ ಸಾಮ್ರಾಜ್ಯದಲ್ಲಿ ಅದರ ಮೂಲವನ್ನು ಹೊಂದಿದೆ. ಒಬ್ಬ ರಾಜನಿಂದ ಮತ್ತೊಬ್ಬ ರಾಜನಿಗೆ ಅಧಿಕಾರದ ವರ್ಗಾವಣೆಯು ನ್ಯಾಯದ ಸಂಕೇತವಾದ ನಂದಿಯ ಕೆತ್ತನೆಯನ್ನು ಹೊಂದಿರುವ ಚಿನ್ನದ ಕೋಲು ಸೆಂಗೋಲ್ ನ್ನು ಹಸ್ತಾಂತರಿಸುವ ಮೂಲಕ ಗುರುತಿಸಲ್ಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:09 am, Sun, 28 May 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?