ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ; 3,400 ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಬಣ್ಣನೆ
ಸೂರತ್ ಏಕತೆಗೆ ಉತ್ತಮ ಉದಾಹರಣೆಯಾಗಿದೆ. ಸೂರತ್‌ನಲ್ಲಿ ಭಾರತದಾದ್ಯಂತ ಜನರು ವಾಸಿಸುತ್ತಿದ್ದಾರೆ. ಇದು ಮಿನಿ ಇಂಡಿಯಾವಾಗಿದೆ. ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.
ಸೂರತ್: ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸೂರತ್‌ನಲ್ಲಿ 3,400 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎರಡು ದಿನಗಳ ಕಾಲ ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಮೋದಿ ಗುಜರಾತ್‌ನಲ್ಲಿ (Gujarat) ಪ್ರಥಮ ಬಾರಿಗೆ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಗುಜರಾತಿನಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾದ ನಂತರ ಮನೆಗಳ ನಿರ್ಮಾಣವೂ ಚುರುಕುಗೊಂಡಿದ್ದು, ಸೂರತ್‌ನಲ್ಲಿ (Surat) ಬಡ ಮತ್ತು ಮಧ್ಯಮ ವರ್ಗದವರಿಗೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ, ದೇಶದಲ್ಲಿ ಇದುವರೆಗೆ ಸುಮಾರು 4 ಕೋಟಿ ಬಡ ರೋಗಿಗಳು ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನವರಾತ್ರಿಯ ಆಚರಣೆಗಳ ಸಂದರ್ಭದಲ್ಲಿ ಗುಜರಾತ್‌ನಲ್ಲಿ ಮೂಲಸೌಕರ್ಯ, ಕ್ರೀಡೆ ಮತ್ತು ಆಧ್ಯಾತ್ಮಿಕ ತಾಣಗಳಿಗೆ ಅಡಿಪಾಯ ಹಾಕುವುದು ನನ್ನ ಸೌಭಾಗ್ಯ. ಸೂರತ್ ಏಕತೆಗೆ ಉತ್ತಮ ಉದಾಹರಣೆಯಾಗಿದೆ. ಸೂರತ್‌ನಲ್ಲಿ ಭಾರತದಾದ್ಯಂತ ಜನರು ವಾಸಿಸುತ್ತಿದ್ದಾರೆ. ಇದು ಮಿನಿ ಇಂಡಿಯಾವಾಗಿದೆ. ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.
#WATCH | Prime Minister Narendra Modi greets the crowd as he arrives in Surat, Gujarat
PM Modi will lay the foundation stone and dedicate various projects worth more than Rs. 3,400 crores here
(Source: DD) pic.twitter.com/59qMKQ5VV8
— ANI (@ANI) September 29, 2022
ಸೂರತ್ ನಗರವು ಜನರ ಒಗ್ಗಟ್ಟು ಮತ್ತು ಸಾರ್ವಜನಿಕ ಸಹಭಾಗಿತ್ವ ಎರಡಕ್ಕೂ ಅದ್ಭುತ ಉದಾಹರಣೆಯಾಗಿದೆ. ಇಲ್ಲಿ ಭಾರತದ ಎಲ್ಲ ಭಾಗಗಳ ಜನರು ಕೂಡ ವಾಸಿಸುತ್ತಿರುವುದು ವಿಶೇಷ ಎಂದು ಮೋದಿ ಹೇಳಿದ್ದಾರೆ. ಸೂರತ್ ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಎಂದು ಶ್ಲಾಘಿಸಿದ ಪ್ರಧಾನಿ ಮೋದಿ, “ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿಯಾಗಲಿದೆ. ಸೂರತ್ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಕೆಲಸ ಮಾಡುತ್ತಿದೆ. ಇಲ್ಲಿ 500ಕ್ಕೂ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುವುದು” ಎಂದಿದ್ದಾರೆ.
सूरत शहर लोगों की एकजुटता औऱ जनभागीदारी, दोनों का बहुत ही शानदार उदाहरण है।
हिन्दुस्तान का कोई प्रदेश ऐसा नहीं होगा, जिसके लोग सूरत की धरती पर न रहते हों।
सूरत की सबसे बड़ी खासियत ये है कि ये शहर श्रम का सम्मान करने वाला शहर है।
– पीएम @narendramodi pic.twitter.com/gGYO3Jy4Fq
— BJP (@BJP4India) September 29, 2022
2 ದಿನಗಳ ಕಾಲ ತಮ್ಮ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಗುಜರಾತ್ನ ಸೂರತ್, ಭಾವನಗರ, ಅಹಮದಾಬಾದ್ ಮತ್ತು ಅಂಬಾಜಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸುಮಾರು 29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಈಗಾಗಲೇ ಭಾವನಗರಕ್ಕೆ ಪ್ರಯಾಣ ಬೆಳೆಸಿರುವ ಮೋದಿ ಅಲ್ಲಿ 5,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.
ಇದನ್ನೂ ಓದಿ: PM Modi Gujarat Visit: ಇಂದಿನಿಂದ 2 ದಿನ ಪ್ರಧಾನಿ ಮೋದಿ ಗುಜರಾತ್ ಭೇಟಿ; 29,000 ಕೋಟಿ ರೂ. ಯೋಜನೆಗಳಿಗೆ ಚಾಲನೆ
ಮೋದಿ ಅವರು ಡಾ. ಹೆಡ್ಗೆವಾರ್ ಸೇತುವೆಯಿಂದ ಭೀಮರಾಡ್-ಬಮ್ರೋಲಿ ಸೇತುವೆಯವರೆಗೆ 87 ಹೆಕ್ಟೇರ್‌ನಲ್ಲಿ ನಿರ್ಮಿಸಲಾಗುತ್ತಿರುವ ಜೀವವೈವಿಧ್ಯ ಉದ್ಯಾನವನದ ಶಂಕುಸ್ಥಾಪನೆ ಮತ್ತು ಸೂರತ್‌ನ ವಿಜ್ಞಾನ ಕೇಂದ್ರದಲ್ಲಿ ಖೋಜ್ ಮ್ಯೂಸಿಯಂ ಅನ್ನು ಉದ್ಘಾಟಿಸಲಿದ್ದಾರೆ. ಮೋದಿ ನಂತರ ಭಾವನಗರಕ್ಕೆ ಪ್ರಯಾಣಿಸಲಿದ್ದು, ಅಲ್ಲಿ 5,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅವರು ವಿಶ್ವದ ಮೊದಲ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಟರ್ಮಿನಲ್ ಮತ್ತು ಬ್ರೌನ್‌ಫೀಲ್ಡ್ ಬಂದರಿನ ಭಾವನಗರದಲ್ಲಿ 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಭಾವನಗರದಲ್ಲಿ 20 ಎಕರೆ ಪ್ರದೇಶದಲ್ಲಿ 100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಮೋದಿ ಉದ್ಘಾಟಿಸಲಿದ್ದಾರೆ. ಇಂದು ಸಂಜೆ ಅಹಮದಾಬಾದ್‌ಗೆ ತೆರಳಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ದೇಶಾದ್ಯಂತದ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ, ಅವರು ದೇಸಾರ್‌ನಲ್ಲಿ ಸ್ವರ್ಣಿಮ್ ಗುಜರಾತ್ ಕ್ರೀಡಾ ವಿಶ್ವವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಅಹಮದಾಬಾದ್‌ನ ಜಿಎಂಡಿಸಿ ಮೈದಾನದಲ್ಲಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.