AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi in Kerala: ಕೊಚ್ಚಿ ವಾಟರ್ ಮೆಟ್ರೊ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Kochi's water metro: ಮೋದಿ ಇಂದು ತಿರುವನಂತಪುರಂ- ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅವರು 1,500 ಕೋಟಿ ವೆಚ್ಚದ ಡಿಜಿಟಲ್ ಸಯನ್ಸ್ ಪಾರ್ಕ್ ಗೆ ಅಡಿಗಲ್ಲು ಹಾಕಿದ್ದು, ಕೊಚ್ಚಿ ವಾಟರ್ ಮೆಟ್ರೊಗೆ ಚಾಲನೆ ನೀಡಿದ್ದಾರೆ.

Modi in Kerala: ಕೊಚ್ಚಿ ವಾಟರ್ ಮೆಟ್ರೊ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಚ್ಚಿ ವಾಟರ್ ಮೆಟ್ರೊಗೆ ಚಾಲನೆ ನೀಡಿದ ಪ್ರಧಾನಿ
ರಶ್ಮಿ ಕಲ್ಲಕಟ್ಟ
|

Updated on:Apr 25, 2023 | 2:05 PM

Share

ತಿರುವನಂತಪುರಂ: ಕೇರಳದಲ್ಲಿ (Kerala)ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಸರ್ಕಾರ ಕೇಂದ್ರವು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುತ್ತದೆ ಎಂದಿದ್ದಾರೆ. ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಿರ್ವಹಿಸಿದ ಪ್ರಧಾನಿ ಮೋದಿ ಕೇರಳ ಅಭಿವೃದ್ಧಿ ಆದರೆ ದೇಶ ವೇಗವಾಗಿ ಅಭಿವೃದ್ದಿ ಹೊಂದುತ್ತದೆ ಎಂದು ಹೇಳಿದ್ದಾರೆ. ಮೋದಿ ಇಂದು ತಿರುವನಂತಪುರಂ- ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅವರು 1,500 ಕೋಟಿ ವೆಚ್ಚದ ಡಿಜಿಟಲ್ ಸಯನ್ಸ್ ಪಾರ್ಕ್ ಗೆ ಅಡಿಗಲ್ಲು ಹಾಕಿದ್ದು, ಕೊಚ್ಚಿ ವಾಟರ್ ಮೆಟ್ರೊಗೆ (water metro) ಚಾಲನೆ ನೀಡಿದ್ದಾರೆ.

ಕೇರಳವು ಜಾಗೃತ ಮತ್ತು ವಿದ್ಯಾವಂತ ಜನರ ರಾಜ್ಯವಾಗಿದೆ, ಇಲ್ಲಿನ ಜನರ ಕಠಿಣ ಪರಿಶ್ರಮ ಮತ್ತು ನಮ್ರತೆ ಅವರ ಗುರುತಿನ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಿರುವನಂತಪುರಂನಲ್ಲಿ ಡಿಜಿಟಲ್ ಸೈನ್ಸ್ ಪಾರ್ಕ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಮೋದಿ

ಇದನ್ನೂ ಓದಿ: Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ಸೋಮವಾರ ಸಂಜೆ ಕೊಚ್ಚಿಗೆ ಬಂದಿಳಿದ ಮೋದಿಯವರು ಮೆಗಾ ರೋಡ್ ಶೋ ನಡೆಸಿದ್ದರು.ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ಹಾಗೂ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್‌ನ ವಿರುದ್ಧ ಟೀಕಾಪ್ರಹಾರ ನಡೆಸಿದ ಮೋದಿ ಈ ಪಕ್ಷಗಳು ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಯುವಂ 2023ರ ಸಮಾವೇಶದಲ್ಲಿ ಮಾತನಾಡಿದ ಮೋದಿ, ಬಿಜೆಪಿಯ ಕೆಲಸ,ಸರ್ಕಾರದ ಕಾರ್ಯ ವೈಖರಿಯನ್ನು ನೋಡಿ ಈಶಾನ್ಯ ರಾಜ್ಯಗಳು ಮತ್ತು ಗೋವಾ ಬಿಜೆಪಿಯನ್ನು ಒಪ್ಪಿಕೊಂಡಿತು. ಕೇರಳವೂ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ವೀಕರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಯುವಜನತೆಯೊಂದಿಗೆ ಕೆಲಸ ಮಾಡುತ್ತಿದೆ ಮತ್ತು ಅಭಿವೃದ್ಧಿಯನ್ನು ಸಾಕಾರಗೊಳಿಸುತ್ತಿದೆ. ಹಿಂದಿನ ಸರ್ಕಾರಗಳು ಹಗರಣಗಳಿಗೆ ಹೆಸರಾಗಿದ್ದರೆ, ಕಳೆದ ಒಂಬತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಂದು ಪಕ್ಷ ರಾಜ್ಯದ ಹಿತಾಸಕ್ತಿಗಿಂತ ತನ್ನ ರಾಜಕೀಯ ಹಿತಾಸಕ್ತಿಯನ್ನು ಉತ್ತೇಜಿಸಲು ಕೆಲಸ ಮಾಡುತ್ತಿದ್ದರೆ, ಇನ್ನೊಂದು ಕುಟುಂಬದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಈ ಎರಡು ರಾಜಕೀಯ ಸಿದ್ಧಾಂತಗಳನ್ನು ಸೋಲಿಸುವ ಸಮಯ ಬಂದಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Tue, 25 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್