AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಭಾರತೀಯ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ, ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಮೋದಿ ಸಾಧನೆಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಜಾಪ್ರಭುತ್ವದಲ್ಲಿ ಅತಿ ದೀರ್ಘಾವಧಿಗೆ ಚುನಾಯಿತರಾದ ಪ್ರಧಾನಿಯಾಗಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಜನ ಧನ್, ಆಯುಷ್ಮಾನ್ ಭಾರತ್, ಡಿಜಿಟಲ್ ಕ್ರಾಂತಿಯಂತಹ ಯೋಜನೆಗಳ ಮೂಲಕ ಬಡವರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿ ಸಾಧಿಸಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಹಾಗೂ 'ಆತ್ಮನಿರ್ಭರ ಭಾರತ' ನೀತಿಗಳಿಂದ ದೇಶ ಸದೃಢಗೊಂಡಿದೆ. ಅಂತರರಾಷ್ಟ್ರೀಯ ಪ್ರಶಸ್ತಿಗಳು, ವಿದೇಶಿ ಸಂಸತ್ ಭಾಷಣಗಳ ಮೂಲಕ ಭಾರತದ ಜಾಗತಿಕ ಸ್ಥಾನಮಾನವನ್ನು ಉನ್ನತೀಕರಿಸಿದ್ದಾರೆ.

PM Narendra Modi: ಭಾರತೀಯ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ, ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಮೋದಿ ಸಾಧನೆಗಳು
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on: Jun 10, 2026 | 10:04 AM

Share

ನವದೆಹಲಿ, ಜೂನ್ 10: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಅಪೂರ್ವ ಹಾಗೂ ಐತಿಹಾಸಿಕ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಜಹಾಹರಲಾಲ್ ನೆಹರು ಅವರ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕುವ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ.

ಸುಧಾರಣೆಯಿಂದ ಫಲಿತಾಂಶದವರೆಗೆ, ಬದಲಾದ ಭಾರತ

ಬಡವರ ಕಲ್ಯಾಣ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 50 ಕೋಟಿಗೂ ಅಧಿಕ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಜೋಡಿಸಲು ‘ಜನ ಧನ್ ಖಾತೆ’ಗಳನ್ನು ತೆರೆಯಲಾಯಿತು. ಜಗತ್ತಿನ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆಯಾದ ‘ಆಯುಷ್ಮಾನ್ ಭಾರತ’ ಅಡಿಯಲ್ಲಿ ಕೋಟ್ಯಂತರ ಕುಟುಂಬಗಳಿಗೆ ಉಚಿತ ವೈದ್ಯಕೀಯ ರಕ್ಷಣೆ ನೀಡಲಾಗಿದೆ.

ಡಿಜಿಟಲ್ ಮತ್ತು ತಾಂತ್ರಿಕ ಕ್ರಾಂತಿ: ಭಾರತದ ಹಳ್ಳಿ ಹಳ್ಳಿಗಳಿಗೂ ಅತಿ ಅಗ್ಗದ ದರದಲ್ಲಿ ಇಂಟರ್ನೆಟ್ ಸಂಪರ್ಕ ಒದಗಿಸಲಾಗಿದೆ. 2014 ರಲ್ಲಿ ಕೇವಲ 2 ಮೊಬೈಲ್ ತಯಾರಿಕಾ ಘಟಕಗಳನ್ನು ಹೊಂದಿದ್ದ ಭಾರತ, ಇಂದು ಜಗತ್ತಿನ 2ನೇ ಅತಿ ದೊಡ್ಡ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ಕೇವಲ 500 ರಷ್ಟಿದ್ದ ನವೋದ್ಯಮಗಳ (Startups) ಸಂಖ್ಯೆ ಇಂದು ಲಕ್ಷ ದಾಟಿದ್ದು, ಭಾರತವನ್ನು ಜಾಗತಿಕ ಸ್ಟಾರ್ಟ್‌ಅಪ್ ಹಬ್ ಅನ್ನಾಗಿ ಮಾಡಿದೆ.

ಮೂಲಸೌಕರ್ಯ ಮತ್ತು ಆರ್ಥಿಕತೆ: ದೇಶಾದ್ಯಂತ ಅತ್ಯಾಧುನಿಕ ಎಕ್ಸ್‌ಪ್ರೆಸ್‌ವೇಗಳು, ನೂರಾರು ಹೊಸ ವಿಮಾನ ನಿಲ್ದಾಣಗಳು ಹಾಗೂ ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಶೇ. 100 ರಷ್ಟು ರೈಲ್ವೆ ವಿದ್ಯುದೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ರಕ್ಷಣಾ ಇಲಾಖೆಯಲ್ಲಿ ‘ಆತ್ಮನಿರ್ಭರ ಭಾರತ’ ನೀತಿಯನ್ನು ಅಳವಡಿಸಿಕೊಂಡಿದ್ದರಿಂದ ಭಾರತದ ರಕ್ಷಣಾ ರಫ್ತು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಈ ಎಲ್ಲ ಸುಧಾರಣೆಗಳಿಂದಾಗಿ ದೇಶದ ಪ್ರತಿಯೊಬ್ಬ ನಾಗರಿಕನ ತಲಾವಾರು ಜಿಡಿಪಿ ಗಮನಾರ್ಹವಾಗಿ ವೃದ್ಧಿಸಿದೆ.

ಮತ್ತಷ್ಟು ಓದಿ: ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ

ರಾಜಕೀಯ ಜೀವನದ ಅಪ್ರತಿಮ ಹೆಗ್ಗುರುತುಗಳು

ಶೂನ್ಯ ಸೋಲುಗಳ ಅಪ್ರತಿಮ ದಾಖಲೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ (ಗುಜರಾತ್ ಮುಖ್ಯಮಂತ್ರಿಯಾದಾಗಿನಿಂದ ಹಿಡಿದು ಇಂದಿನವರೆಗೂ) ತಾವು ಎದುರಿಸಿದ ಯಾವುದೇ ಒಂದು ಚುನಾವಣೆಯಲ್ಲೂ ಸೋಲನ್ನೇ ಕಂಡಿಲ್ಲ.

ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ (ಸೆಪ್ಟೆಂಬರ್ 17, 1050) ಜನಿಸಿ, ದೇಶದ ಅತ್ಯುನ್ನತ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕ ಎಂಬ ಕೀರ್ತಿ ಇವರಿಗಿದೆ.

ಐತಿಹಾಸಿಕ ಸತತ ಅಧಿಕಾರ: ಜವಾಹರಲಾಲ್ ನೆಹರೂ ಅವರ ನಂತರ ದೇಶದ ಇತಿಹಾಸದಲ್ಲೇ ಸತತವಾಗಿ ಮೂರನೇ ಬಾರಿಗೆ (2014, 2019 ಮತ್ತು 2024) ಸಾರ್ವತ್ರಿಕ ಚುನಾವಣೆಗಳನ್ನು ಗೆದ್ದು ಯಶಸ್ವಿ ಆಡಳಿತ ನೀಡುತ್ತಿದ್ದಾರೆ.

ಜಾಗತಿಕ ರಂಗದಲ್ಲಿ ಭಾರತದ ವಿಶ್ವಗುರು ಸ್ಥಾನಮಾನ

ಪ್ರಧಾನಿ ಮೋದಿಯವರ ಮುತ್ಸದ್ದಿತನ ಮತ್ತು ಜಾಗತಿಕ ರಾಜತಾಂತ್ರಿಕತೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಜಗತ್ತಿನ ಸರ್ವೋಚ್ಚ ಶಿಖರಕ್ಕೆ ಕೊಂಡೊಯ್ದಿದೆ.

32 ಅಂತಾರಾಷ್ಟ್ರೀಯ ಗೌರವಗಳು: ಜಗತ್ತಿನ ವಿವಿಧ ಪ್ರಬಲ ರಾಷ್ಟ್ರಗಳು ಮತ್ತು ಜಾಗತಿಕ ಸಂಸ್ಥೆಗಳು ಪ್ರಧಾನಿ ಮೋದಿಯವರಿಗೆ ಇದುವರೆಗೆ ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಸೇರಿದಂತೆ ಬರೋಬ್ಬರಿ 32 ಅಂತರರಾಷ್ಟ್ರೀಯ ಗೌರವಗಳನ್ನು ನೀಡಿ ಪುರಸ್ಕರಿಸಿವೆ.

19 ವಿದೇಶಿ ಸಂಸತ್‌ಗಳಲ್ಲಿ ಭಾಷಣ: ಅಮೆರಿಕದ ಜಂಟಿ ಸಂಸತ್ ಅಧಿವೇಶನ ಸೇರಿದಂತೆ ವಿಶ್ವದ ವಿವಿಧ ಶಕ್ತಿಶಾಲಿ ದೇಶಗಳ 19 ವಿದೇಶಿ ಸಂಸತ್‌ಗಳನ್ನು ಉದ್ದೇಶಿಸಿ ಮಾತನಾಡುವ ಮೂಲಕ ಜಾಗತಿಕ ನೀತಿ ನಿರೂಪಣೆಯಲ್ಲಿ ಭಾರತದ ಪ್ರಭಾವವನ್ನು ಅವರು ಅತ್ಯಂತ ಯಶಸ್ವಿಯಾಗಿ ಮಂಡಿಸಿದ್ದಾರೆ.

ದಶಕದ ಸುಸ್ಥಿರ ಆಡಳಿತ, ಡಿಜಿಟಲ್ ಕ್ರಾಂತಿ, ಆರ್ಥಿಕ ಸ್ಥಿರತೆ ಮತ್ತು ಬಡವರ ಕಲ್ಯಾಣ ಯೋಜನೆಗಳ ಮೂಲಕ ನವ ಭಾರತದ ನಾಯಕನಾಗಿ ಹೊರಹೊಮ್ಮಿರುವ ಪ್ರಧಾನಿ ನರೇಂದ್ರ ಮೋದಿಯವರ ಈ ಯಶಸ್ಸು ಇಡೀ ದೇಶದ ಪ್ರಜಾಪ್ರಭುತ್ವದ ಶಕ್ತಿಗೆ ಹಿಡಿದ ಕೈಗನ್ನಡಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More