AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ 5 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

Narendra Modi: ಕೊವಿಡ್​19 ಪರಿಸ್ಥಿತಿಯ ಕುರಿತಾಗಿ ಚರ್ಚಿಸಲು ಇಂದು ಪ್ರಧಾನಿ ಮೋದಿ 6 ರಾಜ್ಯಗಳ ಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದೆ.

ಕರ್ನಾಟಕ ಸೇರಿ 5 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ
PM Narendra Modi
TV9 Web
| Edited By: |

Updated on:Jul 16, 2021 | 10:11 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 6 ರಾಜ್ಯಗಳ ಮಂತ್ರಿಗಳ ಜತೆಗೆ ಸಭೆ ನಡೆಸಲಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ಮುಖ್ಯಮಂತ್ರಿಗಳೊಂದಿಗೆ ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ಸಂವಾದ ನಡೆಸಲಿದ್ದಾರೆ. ಕೊವಿಡ್​19 ಪರಿಸ್ಥಿತಿಯ ಕುರಿತಾಗಿ ಇಂದು ಸಭೆ ನಡೆಯಲಿದೆ. 

ದೇಶದ ಅನೇಕ ಭಾಗಗಳಲ್ಲಿ ಅದರಲ್ಲಿಯೂ ವಿಶೇಷವಾಗಿ ಗಿರಿಧಾಮಗಳಲ್ಲಿ ಜನಸಮೂಹವು ಮಾಸ್ಕ್​ ಧರಿಸದೇ, ಕೊವಿಡ್​ ನಿಯಂತ್ರಣ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ. ಈ 6 ರಾಜ್ಯಗಳಲ್ಲಿನ ಹಲವು ಜಿಲ್ಲೆಗಳಲ್ಲಿ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಈ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿಲ್ಲ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,806 ಹೊಸ ಕೊವಿಡ್​ ಪ್ರಕರಣಗಳು ದಾಖಲಾಗಿದೆ. ಒಟ್ಟು 3,09,78,880 ಕೊರೊನಾ ಪಾಸಿಟಿವ್​ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4,11,989 ಸಾವು ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 581 ಜನರು ಕೊವಿಡ್​ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈಗ 4,32,041 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳಲ್ಲಿ ಶೇ.1.39ರಷ್ಟಿದೆ.

ರೋಗನಿರೋಧಕ ಶಕ್ತಿ ಕ್ಷೀಣಿಸುತ್ತಿದೆ: ಡಾ. ರಣದೀಪ್​ ಗುಲೇರಿಯಾ

ಜನರಲ್ಲಿ ಕೊವಿಡ್​ ಕುರಿತಾದ ನಿರ್ಲಕ್ಷ್ಯ ಹೀಗೆ ಮುಂದುವರೆದಿದ್ದೇ ಆದರೆ 3ನೇ ಅಲೆ, ಈ ಹಿಂದೆ ಬಂದ ಎರಡನೇ ಅಲೆಯನ್ನೂ ಮೀರಿಸಿ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಹೀಗೆ ಕೊವಿಡ್​ ನಿಯಂತ್ರಣ ಮಾನದಂಡಗಳನ್ನು ಪಾಲಿಸುವುದು ಜತೆಗೆ ಲಸಿಕೆಗಳನ್ನು ಪಡೆದುಕೊಳ್ಳುವುದರ ಮೂಲಕ ಕೊವಿಡ್​ 3ನೇ ಅಲೆಯ ಹರಡುವಿಕೆಯನ್ನು ಕಡಿಮೆ ಮಾಡಬಹುದು ಎಂದು ಹೇಳಿದ್ದಾರೆ.

ಕೊವಿಡ್​19 ಹೊಸ ರೂಪಾಂತರಗಳು ಪ್ರಪಂಚದಾದ್ಯಂತ ಹರಡುವ ನಿರೀಕ್ಷೆಯಿದೆ. ಸಾಂಕ್ರಾಮಿಕ ರೋಗವನ್ನು ತಡೆಯುವುದು ಇನ್ನಷ್ಟು ಕಷ್ಟಕರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಜ್ಞರ ಸಮಿತಿ ಎಚ್ಚರಿಸಿದೆ. ಅಪಾಯಕಾರಿಯಾದ ವೈರಸ್ ಜಾಗತಿಕವಾಗಿ ಹರಡುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸುವುದು ದೊಡ್ಡ ಸವಾಲಾಗಬಹುದು ಎಂದು ತುರ್ತು ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:

ಸೆಪ್ಟೆಂಬರ್​ ಹೊತ್ತಿಗೆ ಮಕ್ಕಳಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆ: ಡಾ.ರಣದೀಪ್​ ಗುಲೇರಿಯಾ

ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ: ಡಾ.ರಣದೀಪ್​ ಗುಲೇರಿಯಾ

Published On - 9:40 am, Fri, 16 July 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ