PM Modi Interview: ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ದೇಶಕ್ಕೇ ಸವಾಲಾಗಿದೆ; ಮೋದಿ ಟೀಕೆ

ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ್ಯಾಂಶಗಳು ಇಲ್ಲಿವೆ.

Follow us
ಸುಷ್ಮಾ ಚಕ್ರೆ
| Updated By: ರಮೇಶ್ ಬಿ. ಜವಳಗೇರಾ

Updated on:May 02, 2024 | 10:31 PM

ನವದೆಹಲಿ: ಟಿವಿ9 ನೆಟ್​ವರ್ಕ್ (TV9 Network) ಸಂಪಾದಕರು ನಡೆಸಿರುವ ದುಂಡು ಮೇಜಿನ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi Interview) ಪಶ್ಚಿಮ ಬಂಗಾಳದ ರಾಜಕಾರಣದ ವಿರುದ್ಧ ಕಿಡಿ ಕಾರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನ ಬಿಜೆಪಿಯನ್ನು ಮೆಚ್ಚುತ್ತಿದ್ದಾರೆ. ಬಂಗಾಳ ಬಿಜೆಪಿಯನ್ನು ಮನಃಪೂರ್ವಕವಾಗಿ ಒಪ್ಪಿಕೊಂಡಿದೆ. ಚುನಾವಣಾ ಸಮಯದಲ್ಲಿ ಅಮಾನವೀಯ ಘಟನೆಗಳು ಬಂಗಾಳ (West Bengal) ಅಥವಾ ಕೇರಳದಲ್ಲಿ (Kerala) ನಡೆಯುತ್ತವೆ. ಅಲ್ಲಿ ನಡೆಯುವ ರೀತಿಯ ಘಟನೆಗಳು ಬೇರೆಲ್ಲಿಯೂ ನಡೆಯುವುದಿಲ್ಲ. ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಸವಾಲಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭದ್ರತೆಯೇ ದೊಡ್ಡ ಸಮಸ್ಯೆಯಾಗಿದೆ. ಸಂದೇಶಖಾಲಿಯ ಮಹಿಳೆಯರ ಮಾತು ಕೇಳಿ ನನಗೆ ಕಣ್ಣಲ್ಲಿ ನೀರು ಬಂದಿತು. ಯಾವ ಸಂದರ್ಭದಲ್ಲೂ ಸರ್ಕಾರ ಅವರ ಮಾತು ಕೇಳೋಕೆ ತಯಾರಿಲ್ಲ. ಬಂಗಾಳದಲ್ಲಿ ಮಹಿಳೆಯರ ದಬ್ಬಾಳಿಕೆ ದೊಡ್ಡ ವಿಷಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Interview: 25 ವರ್ಷದ ರಾಜಕೀಯದಲ್ಲಿ ನನಗೆ ಒಂದೂ ಕಪ್ಪು ಚುಕ್ಕಿ ಅಂಟಿಲ್ಲ; ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ಧಿ ಮಾಡಲು ಕೆಲವು ರಾಜ್ಯಗಳು ಸಾಕಷ್ಟು ಸಾಮರ್ಥ್ಯವನ್ನು ಹೊಂದಿವೆ. ಪಶ್ಚಿಮ ಬಂಗಾಳವು ಅವುಗಳಲ್ಲಿ ಪ್ರಮುಖವಾಗಿದೆ. ನಾವು ಭಾರತದ ಇತಿಹಾಸವನ್ನು ನೋಡಿದರೆ, ಸಾಮಾಜಿಕವಾಗಿ ಸೈದ್ಧಾಂತಿಕ ಕ್ರಾಂತಿ, ಸ್ವಾತಂತ್ರ್ಯ, ಜಾಗತಿಕ ಅಸ್ಮಿತೆಗಾಗಿ ಪಶ್ಚಿಮ ಬಂಗಾಳದಲ್ಲಿ ಹಲವು ಕ್ರಾಂತಿ ನಡೆದಿದೆ. ಟಿಎಂಸಿ ಜನರು ಕಳೆದ 50 ವರ್ಷಗಳಲ್ಲಿ ಈ ಸಂಪ್ರದಾಯವನ್ನು ನಾಶಪಡಿಸಿದರು. ದೇಶ ಮುನ್ನಡೆಯಬೇಕಾದರೆ ಬಂಗಾಳದ ಪುನರುತ್ಥಾನ ಅಗತ್ಯ ಎಂದು ಮೋದಿ ಭವಿಷ್ಯ ನುಡಿದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿದ ಮೋದಿ, ಇತ್ತೀಚಿನ ದಿನಗಳಲ್ಲಿ, ಅನೇಕ ಯುವ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷವು ಮಾವೋವಾದಿಗಳ ವಶವಾಗಿದೆ. ಈಗ ಅವರು ಎಲ್ಲದರಲ್ಲೂ ಅದೇ ಸಿದ್ಧಾಂತವನ್ನು ತರಲು ಬಯಸುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Thu, 2 May 24

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್