AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ

Arvind Kejriwal: ದೆಹಲಿ ವಿಧಾನಸಭೆಯ 2 ದಿನಗಳ ಅಧಿವೇಶನವು ಇಂದು ಪ್ರಾರಂಭವಾಯಿತು. ಇಂದಿನ ಅಧಿವೇಶನದಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಸ್ಪೀಕರ್ ಕಲಾಪವನ್ನು ಕೆಲಕಾಲ ಮುಂದೂಡಬೇಕಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ದೆಹಲಿ ಮಾಜಿ ಸಿಎಂ ಇಂದು ಸದನದಲ್ಲಿ ಭಾಷಣ ಮಾಡಿದ್ದಾರೆ.

ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ
ಕೇಜ್ರಿವಾಲ್
ಸುಷ್ಮಾ ಚಕ್ರೆ
|

Updated on: Sep 26, 2024 | 6:40 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಮಂತ್ರಿ ತುಂಬಾ ಶಕ್ತಿಶಾಲಿಯಾಗಿರಬಹುದು, ಆದರೆ ಅವರು ದೇವರಲ್ಲ ಎಂದು ಟೀಕಿಸಿದ್ದಾರೆ.

ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳಿಗೆ ಸದನದಲ್ಲಿ ಮನೀಷ್ ಸಿಸೋಡಿಯಾ ಮತ್ತು ನನ್ನನ್ನು ನೋಡಿ ಬೇಸರವಾಗಿರಬೇಕು. ಪಿಎಂ ಮೋದಿ ತುಂಬಾ ಶಕ್ತಿಶಾಲಿ ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದಾರೆ. ಆದರೆ ಮೋದಿ ದೇವರಲ್ಲ. ಆದರೆ ದೇವರು ನಮ್ಮೊಂದಿಗಿದ್ದಾನೆ ಎಂದು ನಾನು ಯಾವಾಗಲೂ ಹೇಳುತ್ತಿರುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಅವರ ಕುರ್ಚಿಯಲ್ಲಿ ಕೂರದೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ

“ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ, ಇಂದು ನಾನು ಮುಖ್ಯಮಂತ್ರಿಯೊಂದಿಗೆ ರಸ್ತೆ ತಪಾಸಣೆಗೆ ಹೋಗಿದ್ದೆ. ನಾನು ಜೈಲಿಗೆ ಹೋಗುವ ಮೊದಲು ದೆಹಲಿ ವಿಶ್ವವಿದ್ಯಾಲಯದ ರಸ್ತೆಗಳು ಉತ್ತಮವಾಗಿದ್ದವು. ಅಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಲು ಆದೇಶವನ್ನು ನೀಡುವಂತೆ ನಾನು ಕೇಳಿದೆ. 3-4 ದಿನಗಳ ಹಿಂದೆ ಬಿಜೆಪಿ ನಾಯಕರೊಬ್ಬರನ್ನು ಭೇಟಿಯಾಗಿದ್ದೆ. ನನ್ನನ್ನು ಜೈಲಿಗೆ ಕಳುಹಿಸುವುದರಿಂದ ಏನಾದರೂ ಪ್ರಯೋಜನವಿದೆಯೇ? ಎಂದು ಕೇಳಿದ್ದೆ. ಆಗ ಅವರು ನಾವು ಇಡೀ ದೆಹಲಿ ಸರ್ಕಾರವನ್ನು ಹಳಿತಪ್ಪಿಸಿದೆವು ಎಂದು ಒಪ್ಪಿಕೊಂಡಿದ್ದರು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಿವೃತ್ತಿ ನಿಯಮ ಮೋದಿಗೆ ಅನ್ವಯಿಸುವುದಿಲ್ಲವೇ?; ಆರ್​ಎಸ್​ಎಸ್​ಗೆ ಪತ್ರ ಬರೆದ ಕೇಜ್ರಿವಾಲ್

“ದೆಹಲಿಯಲ್ಲಿ ಯಾರೂ ಕೇಜ್ರಿವಾಲ್ ಅಪ್ರಾಮಾಣಿಕ ಎಂದು ಹೇಳುವುದಿಲ್ಲ. ಕೇಜ್ರಿವಾಲ್ ಅವರ ವಿರುದ್ಧ ನಕಲಿ ಪ್ರಕರಣಗಳು ದಾಖಲಾಗಿವೆ. ಬಿಜೆಪಿ ನಾಯಕರು ಎಎಪಿ ನಾಯಕರನ್ನು ಜೈಲಿಗೆ ಹಾಕಿದ್ದಾರೆ ಎಂದು ಜನರು ಹೇಳುತ್ತಾರೆ. ನಾನು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದೇನೆಯೇ ವಿನಃ ತಪ್ಪಿತಸ್ಥನೆಂಬ ಕಾರಣಕ್ಕಲ್ಲ” ಎಂದು ದೆಹಲಿ ಮಾಜಿ ಸಿಎಂ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ