ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

TV9kannada Web Team

| Edited By: Sushma Chakre

Dec 29, 2021 | 4:28 PM

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

Follow us on

Related Stories

Most Read Stories

Click on your DTH Provider to Add TV9 Kannada