ಪ್ರಧಾನಿ ಮೋದಿಯಿಂದ 3 ಪರಮ್ ರುದ್ರ ಸೂಪರ್ ಕಂಪ್ಯೂಟರ್‌ಗಳ ಬಿಡುಗಡೆ
ಪ್ರಧಾನಿ ಮೋದಿ ಇಂದು 3 ಪರಮ್ ರುದ್ರ ಸೂಪರ್ ಕಂಪ್ಯೂಟರ್‌ಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದ್ದಾರೆ. 130 ಕೋಟಿ ರೂ. ವೆಚ್ಚದಲ್ಲಿ ಭಾರತದಲ್ಲಿಯೇ ನಿರ್ಮಿಸಲಾದ ಪರಮ್ ರುದ್ರ ಸೂಪರ್ ಕಂಪ್ಯೂಟರ್‌ಗಳನ್ನು ಪುಣೆ, ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಪ್ರವರ್ತಕ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೂರು ಪರಮ್ ರುದ್ರ ((PARAM Rudra) ಸೂಪರ್‌ಕಂಪ್ಯೂಟರ್‌ಗಳಿಗೆ ಚಾಲನೆ ನೀಡಿದರು. ಇದು ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿದೆ. 130 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್‌ಕಂಪ್ಯೂಟರ್‌ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ನಿಯೋಜಿಸಲಾಗಿದೆ.
ತಂತ್ರಜ್ಞಾನ ಮತ್ತು ಕಂಪ್ಯೂಟಿಂಗ್ ಸಾಮರ್ಥ್ಯವನ್ನು ಅವಲಂಬಿಸದ ಯಾವುದೇ ಕ್ಷೇತ್ರವಿಲ್ಲ ಎಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ತಂತ್ರಜ್ಞಾನದ ಕ್ರಾಂತಿಯಲ್ಲಿ, ನಮ್ಮ ಪಾಲು ಬಿಟ್‌ಗಳು ಮತ್ತು ಬೈಟ್‌ಗಳಲ್ಲಿರಬಾರದು. ಅದರ ಬದಲು ಟೆರಾಬೈಟ್‌ಗಳು ಮತ್ತು ಪೆಟಾಬೈಟ್‌ಗಳಲ್ಲಿರಬೇಕು. ಆದ್ದರಿಂದ ನಾವು ಸರಿಯಾದ ದಿಕ್ಕಿನಲ್ಲಿ ಸರಿಯಾದ ವೇಗದಲ್ಲಿ ಸಾಗುತ್ತಿದ್ದೇವೆ ಎಂಬುದನ್ನು ಈ ಸಾಧನೆ ಸಾಬೀತುಪಡಿಸುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಮೋದಿ ದೇವರಲ್ಲ; ರಾಜೀನಾಮೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಮೊದಲ ವಿಧಾನಸಭಾ ಭಾಷಣ
“ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಎಚ್‌ಪಿಸಿ ಸಿಸ್ಟಮ್‌ನೊಂದಿಗೆ ಭಾರತವು ಕಂಪ್ಯೂಟಿಂಗ್‌ನಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆ ಇಡುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆವಿಷ್ಕಾರ ಮಾಡುತ್ತದೆ” ಎಂದು ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ನಡುವಿನ ಸಹಯೋಗದೊಂದಿಗೆ ಭಾರತದಾದ್ಯಂತ ಸುಧಾರಿತ ಕಂಪ್ಯೂಟಿಂಗ್ ಸಿಸ್ಟಮ್‌ಗಳ ಜಾಲವನ್ನು ರಚಿಸುವ ಗುರಿಯನ್ನು ಹೊಂದಲಾಗಿದೆ.
With Param Rudra Supercomputers and HPC system, India takes significant step towards self-reliance in computing and driving innovation in science and tech. https://t.co/ZUlM5EA3yw
— Narendra Modi (@narendramodi) September 26, 2024
ಉನ್ನತ ಕಾರ್ಯಕ್ಷಮತೆಯ ಕಂಪ್ಯೂಟಿಂಗ್‌ನಲ್ಲಿ (HPC) ಸ್ವಾವಲಂಬನೆಯನ್ನು ಸಾಧಿಸುವ ಭಾರತದ ಗುರಿಯ ಭಾಗವಾಗಿರುವ ಪರಮ್ ರುದ್ರ (PARAM Rudra) ಸೂಪರ್‌ಕಂಪ್ಯೂಟರ್‌ಗಳು ವಿವಿಧ ಕ್ಷೇತ್ರಗಳಲ್ಲಿ ವೈಜ್ಞಾನಿಕ ಸಂಶೋಧನೆಗಳನ್ನು ಬೆಂಬಲಿಸುತ್ತವೆ.
ಇದನ್ನೂ ಓದಿ: ದೀರ್ಘಾಯುಷ್ಯ ಸಿಗಲಿ; ಮನಮೋಹನ್ ಸಿಂಗ್ 92ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ಆರಂಭದಲ್ಲಿ ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಿ ಪರಮ್ ರುದ್ರ ಬಿಡುಗಡೆಗೆ ಪ್ಲಾನ್ ಮಾಡಿದ್ದರು. ಆದರೆ ಭಾರೀ ಮಳೆಯಿಂದಾಗಿ ಅವರು ತಮ್ಮ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು. ಹೀಗಾಗಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದ್ದಾರೆ.
ಪರಮ್ ರುದ್ರ ಸೂಪರ್‌ಕಂಪ್ಯೂಟರ್ ಎಂದರೇನು?:
ಪರಮ್ ರುದ್ರ ಎಂಬುದು ಭಗವಾನ್ ಶಿವನ ಉಗ್ರ ಅವತಾರದಿಂದ ಹೆಸರಿಸಲ್ಪಟ್ಟಿದೆ. ವಿವಿಧ ವೈಜ್ಞಾನಿಕ ಮತ್ತು ಎಂಜಿನಿಯರಿಂಗ್ ಡೊಮೇನ್‌ಗಳಲ್ಲಿ ಸಂಕೀರ್ಣವಾದ ಕಂಪ್ಯೂಟೇಶನಲ್ ಸವಾಲುಗಳನ್ನು ನಿಭಾಯಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ ಅಡಿಯಲ್ಲಿ ಸ್ಥಳೀಯವಾಗಿ 130 ಕೋಟಿ ರೂ. ವೆಚ್ಚದಲ್ಲಿ ಮೂರು ಪರಮ ರುದ್ರ ಸೂಪರ್‌ಕಂಪ್ಯೂಟರ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ