SUBHADRA Scheme: ಒಡಿಶಾದಲ್ಲಿ ‘ಸುಭದ್ರಾ’ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಒಡಿಶಾ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಸುಭದ್ರಾಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಇದು ಒಡಿಶಾ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಪ್ರತಿ ವರ್ಷ 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳಾ ಫಲಾನುಭವಿಗಳ ರಾಜ್ಯ ಖಾತೆಗೆ 10,000 ರೂ. ಕೊಡಲಾಗುತ್ತದೆ.

SUBHADRA Scheme: ಒಡಿಶಾದಲ್ಲಿ ‘ಸುಭದ್ರಾ’ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: PTI
Follow us
ನಯನಾ ರಾಜೀವ್
|

Updated on: Sep 17, 2024 | 2:08 PM

ಪ್ರಧಾನಿ ನರೇಂದ್ರ ಮೋದಿ ಒಡಿಶಾ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಸುಭದ್ರಾ ಯೋಜನೆಗೆ ಚಾಲನೆ ನೀಡಿದರು. ಒಂದು ಕೋಟಿಗಿಂತಲೂ ಅಧಿಕ ಮಹಿಳೆಯರು ಈ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಇದು ಒಡಿಶಾ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಪ್ರತಿ ವರ್ಷ 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳಾ ಫಲಾನುಭವಿಗಳ ರಾಜ್ಯ ಖಾತೆಗೆ 10,000 ರೂ. ಕೊಡಲಾಗುತ್ತದೆ.

ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಈ ಯೋಜನೆ ಪ್ರಾರಂಭಿಸಲಾಗಿದೆ. ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ಯೋಜನೆಯನ್ನು ಪ್ರಸ್ತಾಪಿಸಿತ್ತು. ಈ ಯೋಜನೆಯಡಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ ಒಟ್ಟು ಹತ್ತು ಸಾವಿರ ರೂ. ನೀಡುತ್ತದೆ.

ಸುಭದ್ರಾ ಯೋಜನೆಯ ಸಮ್ಮಾನ್ ಮೊತ್ತದ ಕಂತನ್ನು ರಾಖಿ ಪೂರ್ಣಿಮಾ ಮತ್ತು ಮಹಿಳಾ ದಿನಾಚರಣೆಯಂದು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು. ಒಡಿಶಾದ ಮಹಿಳೆಯರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ.

ಮತ್ತಷ್ಟು ಓದಿ: ನರೇಂದ್ರ ಮೋದಿ ವಿದೇಶಾಂಗ ನೀತಿ ಸೂಪರ್​ಹಿಟ್; ಭಾರತಕ್ಕೆ ಹೆಚ್ಚಾದ ಜಾಗತಿಕ ಮಾನ್ಯತೆ

ಸುಭದ್ರಾ ಯೋಜನೆಯು ಪ್ರಸಕ್ತ ಹಣಕಾಸು ವರ್ಷ 2024-25 ರಿಂದ 2028-29 ರ ಆರ್ಥಿಕ ವರ್ಷಕ್ಕೆ ಅನ್ವಯಿಸುತ್ತದೆ. ಈ ಯೋಜನೆಗೆ ಸಚಿವ ಸಂಪುಟವು 55825 ಕೋಟಿ ರೂ. ಮೀಸಲಿಟ್ಟಿದೆ.

ಸುಭದ್ರಾ ಯೋಜನೆಯ ಲಾಭ ಯಾರಿಗೆ ಸಿಗುತ್ತದೆ ಆರ್ಥಿಕವಾಗಿ ದುರ್ಬಲರಾಗಿರುವ ಮಹಿಳೆಯರು ಮಾತ್ರ ಸುಭದ್ರಾ ಯೋಜನೆಯ ಲಾಭ ಪಡೆಯುತ್ತಾರೆ. ಸರ್ಕಾರಿ ಉದ್ಯೋಗ ಮಾಡುವ ಮತ್ತು ಆದಾಯ ತೆರಿಗೆ ಪಾವತಿಸುವ ಮಹಿಳೆಯರು ಈ ಯೋಜನೆಗೆ ಒಳಪಡುವುದಿಲ್ಲ. ಮಹಿಳೆಯು ಯಾವುದೇ ಇತರ ಸರ್ಕಾರಿ ಯೋಜನೆಗಳಿಂದ ಪ್ರತಿ ವರ್ಷ ರೂ 15,000 ಅಥವಾ ಅದಕ್ಕಿಂತ ಹೆಚ್ಚಿನ ಲಾಭವನ್ನು ಪಡೆದರೆ, ಆಕೆಯನ್ನು ಈ ಯೋಜನೆಗೆ ಅನ್ವಯವಾಗುವುದಿಲ್ಲ.

ಸುಭದ್ರಾ ಡೆಬಿಟ್ ಕಾರ್ಡ್ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟು ಉತ್ತೇಜಿಸಲು ಮಹಿಳೆಯರಿಗೆ ‘ಸುಭದ್ರಾ ಡೆಬಿಟ್ ಕಾರ್ಡ್’ ಕೂಡ ಸಿಗಲಿದೆ. ಈ ಯೋಜನೆಯ ಫಲಾನುಭವಿಗಳ ಪೈಕಿ ಡಿಜಿಟಲ್ ವಹಿವಾಟು ನಡೆಸುತ್ತಿರುವ 100 ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹೆಚ್ಚುವರಿಯಾಗಿ 500 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.

ಫಾರ್ಮ್​ ಎಲ್ಲಿ ಲಭ್ಯ? ಸುಭದ್ರ ಯೋಜನೆಯ ಲಾಭ ಪಡೆಯಲು ಅಂಗನವಾಡಿ ಕೇಂದ್ರಗಳು, ಬ್ಲಾಕ್ ಕಚೇರಿ ಮತ್ತು ಸಾರ್ವಜನಿಕ ಸೇವಾ ಕೇಂದ್ರಗಳಿಂದ ಮಹಿಳೆಯರು ಉಚಿತವಾಗಿ ಫಾರ್ಮ್​ ಪಡೆಯಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಯೋಜನೆಯ ಮೇಲ್ವಿಚಾರಣೆಗಾಗಿ ಸುಭದ್ರಾ ಸೊಸೈಟಿ ರಚಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್