ಅಸ್ಸಾಂನಲ್ಲಿ ಪ್ರಧಾನಿ ಮೋದಿ ರೋಡ್​ ಶೋ, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಅಸ್ಸಾಂ ತಲುಪಿದ್ದು, ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ಇದಂಉ ಅವರು 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ನರೇಂದ್ರ ಮೋದಿ ಅಸ್ಸಾಂ ಭೇಟಿ ಮಹತ್ವ ಪಡೆದುಕೊಂಡಿದೆ.

ಅಸ್ಸಾಂನಲ್ಲಿ ಪ್ರಧಾನಿ ಮೋದಿ ರೋಡ್​ ಶೋ, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿImage Credit source: Times Of India
Follow us
ನಯನಾ ರಾಜೀವ್
|

Updated on:Feb 04, 2024 | 1:30 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಗುವಾಹಟಿಯಲ್ಲಿ ರೋಡ್​ ಶೋ ನಡೆಸಿದ್ದಾರೆ, ಅಷ್ಟೇ ಅಲ್ಲದೆ 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.  ಗುವಾಹಟಿಯ ಖಾನಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಒಂದು ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿದರು.

ಪ್ರಧಾನಿ ಶನಿವಾರ ಸಂಜೆ 6.30 ರ ಸುಮಾರಿಗೆ ಒಡಿಶಾದಿಂದ ಗುವಾಹಟಿಯ ಪ್ರಸಿದ್ಧ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದರು. ಇಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ಅವರನ್ನು ಸ್ವಾಗತಿಸಿದರು.

ಇದಾದ ನಂತರ ಕೊಯಿನಾಧೋರಾ ರಾಜ್ಯ ಅತಿಥಿ ಗೃಹಕ್ಕೆ ತೆರಳಿದರು. ಅಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿಯನ್ನು ಭೇಟಿಯಾದ ಮೋದಿ ಪಕ್ಷದ ವಿಷಯಗಳ ಬಗ್ಗೆ ಚರ್ಚಿಸಿದರು.

11 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಸ್ಸಾಂ ಹಾಗೂ ಈಶಾನ್ಯ ದಕ್ಷಿಣ ಏಷ್ಯಾದ ಇತರೆ ದೇಶಗಳೊಂದಿಗೆ ಸಂಪರ್ಕವನ್ನು ಬಲಪಡಿಸುತ್ತದೆ. ತಾಯಿ ಕಾಮಾಕ್ಯ ಆಶೀರ್ವಾದಿಂದ ಮತ್ತೊಮ್ಮೆ ಅಸ್ಸಾಂ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡುವ ಅವಕಾಶ ಸಿಕ್ಕಿದೆ ಎಂದರು.

-ಕಾಮಾಕ್ಯ ದೇವಸ್ಥಾನ ಕಾರಿಡಾರ್ – 498 ಕೋಟಿ ರೂ -ಗುವಾಹಟಿಯ ಹೊಸ ವಿಮಾನ ನಿಲ್ದಾಣದಿಂದ ಆರು ಪಥದ ರಸ್ತೆ – 358 ಕೋಟಿ ರೂ -ನೆಹರು ಸ್ಟೇಡಿಯಂ ಅನ್ನು ಫಿಫಾ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು – 831 ಕೋಟಿ ರೂ -ಚಂದ್ರಾಪುರದಲ್ಲಿ ಹೊಸ ಕ್ರೀಡಾ ಸಂಕೀರ್ಣ – 300 ಕೋಟಿ ರೂ -ಅಸೋಮ್ ಮಾಲಾ ರಸ್ತೆಗಳ ಎರಡನೇ ಆವೃತ್ತಿಗೂ ಪ್ರಧಾನಿ ಚಾಲನೆ ನೀಡಿದ್ದಾರೆ. ಈ ಹಂತದಲ್ಲಿ 43 ಹೊಸ ರಸ್ತೆಗಳು ಮತ್ತು 38 ಕಾಂಕ್ರೀಟ್ ಸೇತುವೆಗಳು ಸೇರಿದಂತೆ ಒಟ್ಟು 3,444 ಕೋಟಿ ರೂ. -3,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಮಗ್ರ ನೂತನ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. -ಪ್ರಧಾನಿಯವರು ಉದ್ದೇಶಿತ ಕರೀಂಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ. 578 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. -ಗುವಾಹಟಿಯಲ್ಲಿ 297 ಕೋಟಿ ರೂಪಾಯಿ ಮೌಲ್ಯದ ಯೂನಿಟಿ ಮಾಲ್ ಅನ್ನು ಸ್ಥಾಪಿಸಲಿದೆ. -1,451 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಿಸ್ವನಾಥ್ ಚರಿಯಾಲಿಯಿಂದ ಗೋಪುರದವರೆಗೆ ಹೊಸದಾಗಿ ನಿರ್ಮಿಸಲಾದ ಚತುಷ್ಪಥ ರಸ್ತೆ ಮತ್ತು 592 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಡೋಲಬರಿಯಿಂದ ಜಮುಗುರಿವರೆಗಿನ ಮತ್ತೊಂದು ಚತುಷ್ಪಥ ರಸ್ತೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:01 pm, Sun, 4 February 24

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ