ಮೇಡ್ ಇನ್ ಇಂಡಿಯಾ ಚಿಪ್ ದೇಶವನ್ನು ಆತ್ಮನಿರ್ಭರ ಮತ್ತು ಆಧುನಿಕತೆಯತ್ತ ಕೊಂಡೊಯ್ಯುತ್ತದೆ: ಮೋದಿ

ಗುಜರಾತ್‌ನ ಧೋಲೇರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಸೌಲಭ್ಯ, ಅಸ್ಸಾಂನ ಮೊರಿಗಾಂವ್ ಮತ್ತು ಗುಜರಾತ್‌ನ ಸಾನಂದ್‌ನಲ್ಲಿ ಔಟ್ ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ ಸೌಲಭ್ಯ ಈ ಮೂರು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ.

ಮೇಡ್ ಇನ್ ಇಂಡಿಯಾ ಚಿಪ್ ದೇಶವನ್ನು ಆತ್ಮನಿರ್ಭರ ಮತ್ತು ಆಧುನಿಕತೆಯತ್ತ ಕೊಂಡೊಯ್ಯುತ್ತದೆ: ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 13, 2024 | 1:48 PM

ದೆಹಲಿ ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ (PM Narendra Modi) ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸುಮಾರು ₹1.25 ಲಕ್ಷ ಕೋಟಿ ಮೌಲ್ಯದ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ (semiconductor projects)ಶಂಕುಸ್ಥಾಪನೆ ನೆರವೇರಿಸಿದರು. ಗುಜರಾತ್‌ನ(Gujarat) ಧೋಲೇರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (DSIR) ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಸೌಲಭ್ಯ, ಅಸ್ಸಾಂನ ಮೊರಿಗಾಂವ್ ಮತ್ತು ಗುಜರಾತ್‌ನ ಸಾನಂದ್‌ನಲ್ಲಿ ಔಟ್ ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯ ಈ ಮೂರು ನಿರ್ಣಾಯಕ ಯೋಜನೆಗಳಿಗೆ ಮೋದಿ ಅಡಿಪಾಯ ಹಾಕಿದ್ದಾರೆ.

13ನೇ ಮಾರ್ಚ್ 2024 – ಸೆಮಿಕಂಡಕ್ಟರ್‌ಗಳ ಕೇಂದ್ರವಾಗಲು ಭಾರತದ ಪ್ರಯತ್ನಗಳಲ್ಲಿ ವಿಶೇಷ ದಿನ. ನಾಳೆ, ‘India’s Techade: Chips for Viksit Bharat’ ಕಾರ್ಯಕ್ರಮದಲ್ಲಿ ಭಾಗವಹಿಸಿ 1.25 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಮೂರು ಸೆಮಿಕಂಡಕ್ಟರ್ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ “ಈ ಕಾರ್ಯಕ್ರಮದಲ್ಲಿ 60,000 ಕ್ಕೂ ಹೆಚ್ಚು ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಯುವಕರು ಮತ್ತು ವಿಶೇಷವಾಗಿ ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರು ನಾಳೆಯ ಕಾರ್ಯಕ್ರಮಕ್ಕೆ ಸೇರಲು ನಾನು ಒತ್ತಾಯಿಸುತ್ತೇನೆ, ”ಎಂದು ಮೋದಿ ನಿನ್ನೆ (ಮಂಗಳವಾರ) ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾರ್ಯಕ್ರಮದ ವಿಡಿಯೊ

ಭಾರತವು ಪ್ರಮುಖ ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವಾಗಲು ಸಜ್ಜಾಗಿದೆ. ಮೂರು ಸೌಲಭ್ಯಗಳು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುತ್ತವೆ  ಎಂದು ಮೋದಿ ಸಮಾರಂಭದ ವಿಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗಾಗಿ ಭಾರತವನ್ನು ಪ್ರಮುಖ ಜಾಗತಿಕ ಕೇಂದ್ರವಾಗಿ ಇರಿಸುವ ಪ್ರಧಾನ ಮಂತ್ರಿಯವರ ದೃಷ್ಟಿಗೆ ಅನುಗುಣವಾಗಿ ಈ ಯೋಜನೆಗಳು ದೇಶದ ಯುವಕರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಮೋದಿ ಮಾತು

‘ಇಂಡಿಯಾಸ್ ಟೆಕೇಡ್: ಚಿಪ್ಸ್ ಫಾರ್ ವಿಕಸಿತ್ ಭಾರತ್’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದೇಶಾದ್ಯಂತದ ಸಾವಿರಾರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಇಂದು ನಾವು ಇತಿಹಾಸವನ್ನು ಪುನಃ ಬರೆಯುವುದು ಮಾತ್ರವಲ್ಲದೆ ಉಜ್ವಲ ಭವಿಷ್ಯದತ್ತ ದಾಪುಗಾಲು ಇಡುತ್ತಿದ್ದೇವೆ. “ಈ ಐತಿಹಾಸಿಕ ದಿನ ಭಾರತವು ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗಲು ಸಹಾಯ ಮಾಡುತ್ತದೆ. ಈ ಮಹತ್ವದ ಸಂದರ್ಭದಲ್ಲಿ ನಾನು ಎಲ್ಲಾ ನಾಗರಿಕರನ್ನು ಅಭಿನಂದಿಸುತ್ತೇನೆ. 60,000 ಕ್ಕೂ ಹೆಚ್ಚು ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಸಂಸ್ಥೆಗಳು ವರ್ಚುವಲ್ ಆಗಿ ಈ ಕಾರ್ಯಕ್ರಮದ ಭಾಗವಾಗಿವೆ ”ಎಂದು ಹೇಳಿದ್ದಾರೆ.  “21 ನೇ ಶತಮಾನದ ಉನ್ನತ-ಮಟ್ಟದ ಚಿಪ್ಸ್ ಇಲ್ಲದೆ ಯೋಚಿಸಲಾಗುವುದಿಲ್ಲ. ಉದ್ಯಮ 4.0 ಕ್ರಾಂತಿಯಲ್ಲಿ ಸ್ಪೆಕ್ಟ್ರಮ್​​ನಾದ್ಯಂತ ಸೆಮಿಕಂಡಕ್ಟರ್ ಒದಗಿಸುವಲ್ಲಿ ಭಾರತವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

ಸೆಮಿಕಂಡಕ್ಟರ್ ಉದ್ಯಮವನ್ನು ‘ಫೌಂಡೇಶನಲ್ ಉದ್ಯಮ’ ಎಂದ ಅಶ್ವಿನಿ ವೈಷ್ಣವ್

ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸೆಮಿಕಂಡಕ್ಟರ್ ಉದ್ಯಮವನ್ನು “ಫೌಂಡೇಶನಲ್ ಉದ್ಯಮ” ಎಂದು ಹೇಳಿದ್ದಾರೆ, ಫ್ಯಾನ್‌ಗಳು, ಫ್ರಿಜ್‌ಗಳು, ಟಿವಿಗಳು, ರೈಲುಗಳು, ಕಂಪ್ಯೂಟರ್‌ಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಎಲ್ಲ ವಸ್ತುಗಳು  ಈ ಚಿಪ್‌ಗಳಲ್ಲಿ ಆನ್ ಮತ್ತು ಆಫ್ ಆಗುತ್ತದೆ. ಈಶಾನ್ಯ ಪ್ರದೇಶಕ್ಕೆ ಇದು ಒಂದು ದೊಡ್ಡ ಕ್ಷಣ ಎಂದು ಬಣ್ಣಿಸಿದ ಸಚಿವರು, ಪ್ರಧಾನಿ ಮೋದಿಯವರ ಆತ್ಮ ನಿರ್ಭರ್ ಭಾರತ್ ಮಿಷನ್‌ನಲ್ಲಿ ಸೆಮಿಕಂಡಕ್ಟರ್ ಉದ್ಯಮವು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಕಾರುಗಳು ಮತ್ತು ಲ್ಯಾಪ್‌ಟಾಪ್‌ಗಳು ಮೇಡ್ ಇನ್ ಇಂಡಿಯಾ ಚಿಪ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಭಾರತದಲ್ಲಿ ಮುಂಬರುವ ನಾಲ್ಕು ಘಟಕಗಳಲ್ಲಿ ಒಂದನ್ನು ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸ್ಥಾಪಿಸಲಾಗುತ್ತಿದೆ. ಇನ್ನೆರಡು ಫ್ಯಾಬ್ ಘಟಕಗಳು ಗುಜರಾತ್‌ನ ಧೋಲೇರಾ ಮತ್ತು ಸಾನಂದ್‌ನಲ್ಲಿ ಬರಲಿವೆ.

ಇದನ್ನೂ ಓದಿ: Padmakar Valvi: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ

ದೇಶದಲ್ಲಿ ನಾಲ್ಕು ಸೆಮಿಕಂಡಕ್ಟರ್ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ನಾಲ್ಕು ಸೆಮಿಕಂಡಕ್ಟರ್ ಘಟಕಗಳಲ್ಲಿ ಒಂದು ಅಸ್ಸಾಂನಲ್ಲಿ ಬರುತ್ತಿದೆ. ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಅತ್ಯಂತ ವೇಗದಲ್ಲಿ ಕೆಲಸ ಮಾಡಲಾಗುತ್ತಿದೆ ಎಂಬುದಕ್ಕೆ ನಾಲ್ಕು ಸ್ಥಾವರಗಳು ಉದಾಹರಣೆಯಾಗಿದೆ. ಕ್ಯಾಬಿನೆಟ್ 29 ಫೆಬ್ರವರಿ 2024 ರಂದು ಟಾಟಾ ಮತ್ತು ಸಿಜಿ ವಿದ್ಯುತ್ ಸ್ಥಾವರಗಳಿಗೆ ಅನುಮೋದನೆ ನೀಡಿತು. 15 ದಿನಗಳಲ್ಲಿ ಪ್ರಧಾನಿ ಮೋದಿ ಅವರು ಇದರ ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Wed, 13 March 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ