ವಾರಣಾಸಿ ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ (Varanasi) ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium)ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಭಾಷಣಕ್ಕೂ ಮುನ್ನ ಪ್ರಧಾನಿ ಮೋದಿ ಅವರಿಗೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಲಾಗಿದೆ.
‘ಹರಹರ್ ಮಹಾದೇವ್’ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಕ್ರೀಡಾಂಗಣವನ್ನು ‘ಮಹಾದೇವ್’ಗೆ ಸಮರ್ಪಿಸಲಾಗುವುದು ಎಂದು ಹೇಳಿದರು. ‘ಮಹಾದೇವ’ ನಗರದ ಈ ಕ್ರೀಡಾಂಗಣವನ್ನು ‘ಮಹಾದೇವ’ನಿಗೆ ಸಮರ್ಪಿಸಲಾಗುವುದು. ಕಾಶಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದಿಂದ ಇಲ್ಲಿನ ಕ್ರೀಡಾ ಪಟುಗಳಿಗೆ ಅನುಕೂಲವಾಗಲಿದೆ ಎಂದ ಅವರು, ಈ ಕ್ರೀಡಾಂಗಣ ಪೂರ್ವಾಂಚಲ ಪ್ರದೇಶದ ಸ್ಟಾರ್ ಆಗಲಿದೆ ಎಂದು ಹೇಳಿದ್ದಾರೆ.
Speaking at foundation stone laying ceremony of International Cricket Stadium in Varanasi. It will help popularise sports and nurture sporting talent among youngsters. https://t.co/mcWhBvdTr7
— Narendra Modi (@narendramodi) September 23, 2023
ಒಂದು ಕಾಲದಲ್ಲಿ ಪೋಷಕರು ಮಕ್ಕಳು ಆಟವಾಡುತ್ತಿದ್ದದ್ದಕ್ಕೆ ಬೈಯುತ್ತಿದ್ದರು, ಆದರೆ ಅದು ಇನ್ನು ಮುಂದೆ ಹಾಗಾಗುವುದಿಲ್ಲ , ಒಂದು ಪ್ರದೇಶದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ನಿರ್ಮಿಸಿದಾಗ, ಅದು ಯುವ ಕ್ರೀಡಾ ಪ್ರತಿಭೆಗಳಿಗೆ ಮಾತ್ರವಲ್ಲದೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಸರಳ ರೀತಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಮೋದಿ
“ಪ್ರಥಮ ಬಾರಿಗೆ ಉತ್ತರ ಪ್ರದೇಶದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರಾಣಸಿಯ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ಕ್ರೀಡಾ ಉತ್ಸಾಹಿ ಪರವಾಗಿ ನಾನು ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತೇನೆ” ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:12 pm, Sat, 23 September 23