AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building: ಮೇ 28 ರಂದು ನೂತನ ಸಂಸತ್ ಭವನ ಉದ್ಘಾಟನೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಈ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲವಾದರೂ, ಮೇ ಅಂತ್ಯದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಈ ಬಗ್ಗೆ ತಿಳಿದಿರುವ ಮೂಲಗಳು ಹೇಳುತ್ತವೆ.

New Parliament Building: ಮೇ 28 ರಂದು ನೂತನ ಸಂಸತ್ ಭವನ ಉದ್ಘಾಟನೆ ಸಾಧ್ಯತೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
| Edited By: |

Updated on:May 24, 2023 | 3:23 PM

Share

ಈ ತಿಂಗಳ ಅಂತ್ಯದ ವೇಳೆಗೆ ಅಂದರೆ ಮೇ 28ರಂದು ನೂತನ ಸಂಸತ್ ಭವನ (New Parliament Building) ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲವಾದರೂ, ಮೇ ಅಂತ್ಯದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಈ ಬಗ್ಗೆ ತಿಳಿದಿರುವ ಮೂಲಗಳು ಹೇಳುತ್ತವೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಮೇ 26 ರಂದು ಮೆಗಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಈ ಹಿಂದೆ ವರದಿಯಾಗಿತ್ತು.

ಸುಮಾರು 970 ಕೋಟಿ ಅಂದಾಜು ವೆಚ್ಚದಲ್ಲಿ ಸಂಸತ್ ಭವನ ನಿರ್ಮಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜುಲೈನಲ್ಲಿ ಪ್ರಾರಂಭವಾಗಲಿರುವ ಮುಂಬರುವ ಮುಂಗಾರು ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯುವ ಸಾಧ್ಯತೆಯಿಲ್ಲ.ಭಾರತವು 2023 ಕ್ಕೆ G20 ಅಧ್ಯಕ್ಷ ಸ್ಥಾನವನ್ನು ಹೊಂದಿರುವುದರಿಂದ, G20 ರಾಷ್ಟ್ರಗಳ ಸಂಸತ್ತಿನ ಸ್ಪೀಕರ್‌ಗಳ ಸಭೆಯು ಈ ವರ್ಷದ ಕೊನೆಯಲ್ಲಿ ಹೊಸ ಕಟ್ಟಡದಲ್ಲಿ ನಡೆಯಬಹುದು ಎಂದು ಹೇಳಲಾಗುತ್ತಿದೆ

ಹೇಗಿದೆ ನೂತನ ಸಂಸತ್ ಭವನ?

ತ್ರಿಕೋನ ಆಕಾರದಲ್ಲಿರುವ ಈ ಕಟ್ಟಡದ ನಿರ್ಮಾಣವು ಜನವರಿ 15, 2021 ರಂದು ಪ್ರಾರಂಭವಾಯಿತು. ಇದು ಆಗಸ್ಟ್ 2022 ರೊಳಗೆ ಪೂರ್ಣಗೊಳ್ಳಬೇಕಿತ್ತು. 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಹೊಸ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಇರಬಹುದಾಗಿದೆ. ಹೊಸ ಸಂಸತ್ತಿನ ಕಟ್ಟಡವು ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ, ಇವುಗಳಿಗೆ ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ.

ಈ ಕಟ್ಟಡವು ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳನ್ನು ಹೊಂದಿರುತ್ತದೆ. ಈ ಕಟ್ಟಡದ ಮತ್ತೊಂದು ವಿಶೇಷವೆಂದರೆ ಸಂವಿಧಾನ ಭವನ, ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ನಿರ್ಮಿಸಲಾಗಿದೆ. ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ.

ಇದು ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ.

ಹೊಸ ಸಂಸತ್ ಕಟ್ಟಡವು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಸ್ ಚಂದ್ರ ಬೋಸ್ ಮತ್ತು ದೇಶದ ಇತರ ಪ್ರಧಾನ ಮಂತ್ರಿಗಳ ಭಾವಚಿತ್ರಗಳನ್ನು ಹೊಂದಿರುತ್ತದೆ. ಕೋನಾರ್ಕ್‌ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Tue, 16 May 23