AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

Quad Summit: ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಯುಎಸ್​ ಪ್ರವಾಸ: ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ
ಕಮಲಾ ಹ್ಯಾರಿಸ್​
TV9 Web
| Edited By: |

Updated on: Sep 19, 2021 | 11:42 AM

Share

ದೆಹಲಿ: ಸೆಪ್ಟೆಂಬರ್​ 23ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದಾರೆ.  ಅವರು ಸೆಪ್ಟೆಂಬರ್​ 24ರಂದು ವಾಷಿಂಗ್ಟನ್​​ನ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಮತ್ತು ಸೆಪ್ಟೆಂಬರ್​ 25ರಂದು ವಾಷಿಂಗ್ಟನ್​​ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂರು ದಿನಗಳ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​​ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ರನ್ನೂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ಅಮೆರಿಕದಲ್ಲಿ ಜೋ ಬೈಡನ್​ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್​ ನಡುವೆ ಫೋನ್​ನಲ್ಲಿ ಮಾತುಕತೆ ನಡೆದಿದ್ದು ಬಿಟ್ಟರೆ ಮುಖತಃ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದೆ. ಹಾಗೇ, ಭಾರತ ಮೂಲದ ಕಮಲಾ ಹ್ಯಾರಿಸ್​ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.

ಇನ್ನು ಕ್ವಾಡ್​ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೇ, ಇಂಡೋ-ಪ್ಯಾಸಿಫಿಕ್​, ಕೊವಿಡ್​ 19 ಸಾಂಕ್ರಾಮಿಕ ಮತ್ತು ಹವಾಮಾನ ಬಿಕ್ಕಟ್ಟಿನ ಬಗ್ಗೆ ಕೂಡ ಮಾತುಕತೆ ನಡೆಯಲಿದೆ.  ಇನ್ನು ಸೆಪ್ಟೆಂಬರ್​ 23ರಂದು ಪ್ರಧಾನಿ ಮೋದಿಯವರು ಜಪಾನ್​ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕೂಡ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ. ಯುಎಸ್​, ಇಂಡಿಯಾ, ಜಪಾನ್​ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳನ್ನು ಈ ಕ್ವಾಡ್​ ಶೃಂಗಸಭೆ ಒಳಗೊಳ್ಳಲಿದೆ.

ಈ ಬಾರಿ ಮಾರ್ಚ್​ನಲ್ಲಿ ಜೋ ಬೈಡನ್​ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈ ಶೃಂಗಸಭೆಯಲ್ಲಿ ನಾಯಕರು ಜಾಗತಿಕ ಸಮಸ್ಯೆಗಳಾದ,  ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಸಮುದ್ರ ಭದ್ರತೆ, ಮಾನವೀಯ ನೆರವು/ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ದೃಷ್ಟಿಕೋನ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.  ಅದರೊಂದಿಗೆ ಪ್ರಮುಖವಾಗಿ ಕೊವಿಡ್​ 19 ಹೋರಾಟದ ಬಗ್ಗೆಯೂ ವ್ಯಾಪಕ ವಿಮರ್ಶೆ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 30,773 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3.32 ಲಕ್ಷಕ್ಕೆ ಇಳಿಕೆ

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್