ದೆಹಲಿ: ಸೆಪ್ಟೆಂಬರ್ 23ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಸೆಪ್ಟೆಂಬರ್ 24ರಂದು ವಾಷಿಂಗ್ಟನ್ನ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಮತ್ತು ಸೆಪ್ಟೆಂಬರ್ 25ರಂದು ವಾಷಿಂಗ್ಟನ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂರು ದಿನಗಳ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ರನ್ನೂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದಲ್ಲಿ ಜೋ ಬೈಡನ್ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್ ನಡುವೆ ಫೋನ್ನಲ್ಲಿ ಮಾತುಕತೆ ನಡೆದಿದ್ದು ಬಿಟ್ಟರೆ ಮುಖತಃ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದೆ. ಹಾಗೇ, ಭಾರತ ಮೂಲದ ಕಮಲಾ ಹ್ಯಾರಿಸ್ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.
ಇನ್ನು ಕ್ವಾಡ್ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಹಾಗೇ, ಇಂಡೋ-ಪ್ಯಾಸಿಫಿಕ್, ಕೊವಿಡ್ 19 ಸಾಂಕ್ರಾಮಿಕ ಮತ್ತು ಹವಾಮಾನ ಬಿಕ್ಕಟ್ಟಿನ ಬಗ್ಗೆ ಕೂಡ ಮಾತುಕತೆ ನಡೆಯಲಿದೆ. ಇನ್ನು ಸೆಪ್ಟೆಂಬರ್ 23ರಂದು ಪ್ರಧಾನಿ ಮೋದಿಯವರು ಜಪಾನ್ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕೂಡ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ದೆಹಲಿ ಮೂಲಗಳು ತಿಳಿಸಿವೆ. ಯುಎಸ್, ಇಂಡಿಯಾ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳನ್ನು ಈ ಕ್ವಾಡ್ ಶೃಂಗಸಭೆ ಒಳಗೊಳ್ಳಲಿದೆ.
ಈ ಬಾರಿ ಮಾರ್ಚ್ನಲ್ಲಿ ಜೋ ಬೈಡನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದರು. ಇದೀಗ ನಾಲ್ಕೂ ರಾಷ್ಟ್ರಗಳ ನಾಯಕರು ಮುಖತಃ ಭೇಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈ ಶೃಂಗಸಭೆಯಲ್ಲಿ ನಾಯಕರು ಜಾಗತಿಕ ಸಮಸ್ಯೆಗಳಾದ, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಸಮುದ್ರ ಭದ್ರತೆ, ಮಾನವೀಯ ನೆರವು/ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ದೃಷ್ಟಿಕೋನ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಅದರೊಂದಿಗೆ ಪ್ರಮುಖವಾಗಿ ಕೊವಿಡ್ 19 ಹೋರಾಟದ ಬಗ್ಗೆಯೂ ವ್ಯಾಪಕ ವಿಮರ್ಶೆ ನಡೆಯಲಿದೆ ಎನ್ನಲಾಗಿದೆ.
Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್ಮ್ಯಾನ್ ರೋಹಿತ್ ಶರ್ಮಾ