ಜೂನ್ 18ರಂದು ವಾರಾಣಸಿಯಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ವಾರಾಣಸಿಯಲ್ಲಿ ಜೂನ್ 18ರಂದು ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಮೋದಿಯವರ ಸಂಸದೀಯ ಕ್ಷೇತ್ರವಾಗಿದ್ದು, ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಯಲ್ಲಿ ಜೂನ್ 18ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿಯವರು ವಾರಾಣಸಿಗೆ ನೀಡಿದ ಮೊದಲ ಭೇಟಿ ಇದಾಗಿದೆ.
ರೊಹಾನಿಯಾ ಅಥವಾ ಸೇವಾಪುರಿ ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಾವೇಶಕ್ಕೆ ಸ್ಥಳವನ್ನು ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರ ಮುಂಬರುವ ವಾರಾಣಸಿ ಭೇಟಿಗೆ ಸಂಬಂಧಿಸಿದಂತೆ ಗುಲಾಬ್ ಬಾಗ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಮಹಾನಗರ ಮತ್ತು ಜಿಲ್ಲಾ ಅಧಿಕಾರಿಗಳ ಸಭೆ ನಡೆಯಿತು.
ಬಿಜೆಪಿ ಕಾಶಿ ವಲಯದ ಅಧ್ಯಕ್ಷ ದಿಲೀಪ್ ಪಟೇಲ್ ಮಾತನಾಡಿ, ಪ್ರಧಾನಿ ಮೋದಿ ಅವರು ವಾರಾಣಸಿಗೆ ಭೇಟಿ ನೀಡುವ ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಮತ್ತು ಅದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ ಎಂದು ತಿಳಿಸಿದರು.
ಮತ್ತಷ್ಟು ಓದಿ: ಅಧಿಕಾರ ಅಥವಾ ಹುದ್ದೆಗಾಗಿ ಇಲ್ಲಿ ಇರುವುದು ನನ್ನ ಅಜೆಂಡಾ ಅಲ್ಲ: ಪಿಎಂ ನರೇಂದ್ರ ಮೋದಿ
ವಾರಾಣಸಿಗೆ ಪ್ರಧಾನಿ ಮೋದಿಯವರ ಭವ್ಯ ಸ್ವಾಗತಕ್ಕೆ ಸಿದ್ಧರಾಗುವಂತೆ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಕೇಳಲಾಗಿದೆ ಎಂದು ಪಟೇಲ್ ಹೇಳಿದರು. ರೈತ ಸಮಾವೇಶಕ್ಕೆ ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ತಿಳಿಸಿದರು.
2024 ರ ಲೋಕಸಭಾ ಚುನಾವಣೆಯಲ್ಲಿ, ಪಿಎಂ ಮೋದಿ ಸತತ ಮೂರನೇ ಬಾರಿಗೆ ತಮ್ಮ ವಾರಣಾಸಿ ಸ್ಥಾನವನ್ನು ಉಳಿಸಿಕೊಂಡರು ಮತ್ತು ಕಾಂಗ್ರೆಸ್‌ನ ಅಜಯ್ ರೈ ಅವರನ್ನು 1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ