ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ವಿಶ್ವದ ಅತ್ಯಂತ ಬಲಿಷ್ಠ ಧ್ವಜವನ್ನಾಗಿ ಮಾಡಿದ್ದಾರೆ: ಅನುರಾಗ್ ಠಾಕೂರ್

ಈ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರು ನಿರ್ಣಾಯಕ ಪಾತ್ರವನ್ನು ವಹಿಸಬೇಕು ಎಂದು ಪ್ರಧಾನಿ ಹೇಳಿರುವುದನ್ನು ಪುನರುಚ್ಚರಿಸಿದ ಸಚಿವರು ಈ ನಿಟ್ಟಿನಲ್ಲಿ, ಭಾರತವು ಇಂದು ಸುಮಾರು ಒಂದು ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ನೂರಕ್ಕೂ ಹೆಚ್ಚು ಯುನಿಕಾರ್ನ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ವಿಶ್ವದ ಅತ್ಯಂತ ಬಲಿಷ್ಠ ಧ್ವಜವನ್ನಾಗಿ ಮಾಡಿದ್ದಾರೆ: ಅನುರಾಗ್  ಠಾಕೂರ್
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on:May 27, 2023 | 6:12 PM

9 ಸಾಲ್ (ಒಂಬತ್ತು ವರ್ಷ) – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ  ಸಚಿವ ಅನುರಾಗ್ ಠಾಕೂರ್ (Anurag Thakur) ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಮಾನ್ಯ ಜನರ ಜೀವನ ನಾಟಕೀಯ ಬದಲಾವಣೆಯನ್ನು ಕಂಡಿದೆ. ಸರ್ಕಾರದ ಸಾಧನೆಗಳು ಜನರ ನಿರೀಕ್ಷೆಗಳನ್ನು ಮೀರಿದೆ ಎಂದು ಹೇಳಿದರು. ಭಾರತವು ಹಿಂದೆ ಭ್ರಷ್ಟಾಚಾರದಿಂದ ಕೂಡಿದ ದುರ್ಬಲ ಆರ್ಥಿಕತೆಯಿಂದ ಕೂಡಿತ್ತು.ಆದರೆ ಇಂದು ಅದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಕೆಲವರಿಗೆ ಮಾತ್ರ ತಲುಪುತ್ತಿದ್ದವು, ಇಂದು ಸರ್ಕಾರ ಅಂತ್ಯೋದಯ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಅಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಕಟ್ಟಕಡೆಯ ವ್ಯಕ್ತಿಯ ಉನ್ನತಿಗೆ ಸರ್ಕಾರ ಬದ್ಧವಾಗಿದೆ.ಶೇ 27 ಜನರನ್ನು ಬಡತನದಿಂದ ಮೇಲೆತ್ತಿರುವ ನಮ್ಮ ಪ್ರಯತ್ನಗಳ ರಹಸ್ಯ ಇಲ್ಲಿದೆ ಎಂದು ಅವರು ಹೇಳಿದರು. ಸೇವೆಯ ಪ್ರಜ್ಞೆ, ದೊಡ್ಡ ಆಲೋಚನೆಗಳು, ಉತ್ತಮ ಆಡಳಿತ, ತಂತ್ರಜ್ಞಾನದ ಒಳಹರಿವು, ಮತ್ತು ವಿತರಣಾ ಕಾರ್ಯವಿಧಾನದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ನಿರ್ಮಿಸುವುದು, ಸಾರ್ವಜನಿಕ ಸೇವೆಗಳನ್ನು ಕೊನೆಯ ಹಂತದವರೆಗೆ ತಲುಪುವಂತೆ ಮಾಡುವುದು ಖಾತ್ರಿಪಡಿಸುವ ವಿಷಯಗಳಾಗಿವೆ.

ಈ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರು ನಿರ್ಣಾಯಕ ಪಾತ್ರವನ್ನು ವಹಿಸಬೇಕು ಎಂದು ಪ್ರಧಾನಿ ಹೇಳಿರುವುದನ್ನು ಪುನರುಚ್ಚರಿಸಿದ ಸಚಿವರು ಈ ನಿಟ್ಟಿನಲ್ಲಿ, ಭಾರತವು ಇಂದು ಸುಮಾರು ಒಂದು ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ನೂರಕ್ಕೂ ಹೆಚ್ಚು ಯುನಿಕಾರ್ನ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸುವ ವಿಪಕ್ಷಗಳ ನಿಲುವು ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವದ ನೀತಿಗೆ ಅವಮಾನ: ಅನುರಾಗ್ ಠಾಕೂರ್

ಒಂದು ಕಡೆ ಹರ್ ಘರ್ ತಿರಂಗಾಕ್ಕಾಗಿ ಪ್ರಧಾನಿಯವರ ಕರೆಗೆ ದೇಶವು ಉತ್ತರಿಸಿದರೆ, ಅದೇ ತ್ರಿವರ್ಣವನ್ನು ಇತರ ದೇಶಗಳ ವಿದ್ಯಾರ್ಥಿಗಳು ಆಪರೇಷನ್ ಗಂಗಾ ಕಾರ್ಯಾಚರಣೆಯ ಸಮಯದಲ್ಲಿ ಸಂಘರ್ಷದ ವಲಯದಿಂದ ಹೊರಬರಲು ಬಳಸಿದರು. ಸಮೀಕ್ಷೆಗಳು ಅವರನ್ನು ಅತ್ಯಂತ ಜನಪ್ರಿಯ ನಾಯಕ ಎಂದು ಕರೆದಿದ್ದರೂ, ಪ್ರಧಾನಿ ಮೋದಿ, ತ್ರಿವರ್ಣ ಧ್ವಜವನ್ನು ವಿಶ್ವದ ಪ್ರಬಲ ಧ್ವಜವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Sat, 27 May 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು