ಕ್ರಿಪ್ಟೊಕರೆನ್ಸಿ ಮೂಲಕ ಅಕ್ರಮ ವಹಿವಾಟು, ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಮಾಡುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ

| Updated By: ganapathi bhat

Updated on: Nov 13, 2021 | 10:36 PM

Narendra Modi: ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮೋದಿ ಸಭೆ ಮಾಡಿದ್ದಾರೆ.

ಕ್ರಿಪ್ಟೊಕರೆನ್ಸಿ ಮೂಲಕ ಅಕ್ರಮ ವಹಿವಾಟು, ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಮಾಡುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ
Follow us on

ದೆಹಲಿ: ಬಿಟ್ ​ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 13) ಮಹತ್ವದ ಸಭೆ ನಡೆಸಿದ್ದಾರೆ. ಅನಿಯಂತ್ರಿತ ಕ್ರಿಪ್ಟೋ ಕರೆನ್ಸಿ ಮಾರ್ಕೆಟ್‌ನಿಂದ ಆಗುವ ಪರಿಣಾಮ, ಕ್ರಿಪ್ಟೋ ಕರೆನ್ಸಿ ಮೂಲಕ ಅಕ್ರಮ ಹಣದ ವಹಿವಾಟು ಹಾಗೂ ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಬಗ್ಗೆ ಚರ್ಚೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಸಂಬಂಧ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಕ್ರಿಪ್ಟೋ ಕರೆನ್ಸಿ ವಹಿವಾಟು ಬಗ್ಗೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಡಲಿದೆ. ತಜ್ಞರ ಜತೆ ನಿರಂತರ ಸಂಪರ್ಕದಲ್ಲಿದ್ದು ವಹಿವಾಟಿನ ಬಗ್ಗೆ ನಿಗಾ ವಹಿಸಲಾಗುವ ಬಗ್ಗೆ ಚರ್ಚೆ ಮಾಡಲಾಗಿದೆ. ಕ್ರಿಪ್ಟೋ ಕರೆನ್ಸಿ ವಹಿವಾಟು ದೇಶದ ಗಡಿ ಮೀರಿದ ವ್ಯವಸ್ಥೆ ಆಗಿದೆ. ಇದಕ್ಕೆ ಜಾಗತಿಕ, ಸಾಮೂಹಿಕ ಕಾರ್ಯತಂತ್ರಗಳ ಅಗತ್ಯ ಇದೆ. ಈ ಬಗ್ಗೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಮಹತ್ವದ ಚರ್ಚೆ ಮಾಡಲಾಗಿದೆ.

ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮೋದಿ ಸಭೆ ಮಾಡಿದ್ದಾರೆ.

ಮತ್ತೊಂದೆಡೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಜಗದೀಶ್ ಶೆಟ್ಟರ್ ಭೇಟಿಯಾಗಿದ್ದಾರೆ. ದೆಹಲಿಯ ಜೆ.ಪಿ. ನಡ್ಡಾ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಬಿಟ್‌ ಕಾಯಿನ್ ಕೇಸ್‌, ಪ್ರಸಕ್ತ ರಾಜಕೀಯ ವಿಚಾರ ಬಗ್ಗೆ ಚರ್ಚೆ ಮಾಡಲಾಗಿದೆ. ನಿನ್ನೆಯೇ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ನಡ್ಡಾ ಭೇಟಿ ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ರಾಹುಲ್ ಗಾಂಧಿ ಟೀಕೆ
ಬಿಟ್‌ಕಾಯಿನ್ ಹಗರಣ ಬಹಳ ದೊಡ್ಡದು. ಹಗರಣ ಮುಚ್ಚಿಡುತ್ತಿರುವುದು ಇನ್ನೂ ದೊಡ್ಡದು. ಯಾರದೋ ಹುಸಿ ವರ್ಚಸ್ಸನ್ನು ಮುಚ್ಚಿಡುವಂಥದ್ದು ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಟ್ವೀಟ್ ಮೂಲಕ ಪ್ರಕರಣದ ಬಗ್ಗೆ ಕುಟುಕಿದ್ದಾರೆ.

ಇದನ್ನೂ ಓದಿ: Bitcoin Case: ಡ್ರಗ್​ ಅಡಿಕ್ಟ್​​​ ಮಾತಿಗೆ ಇಷ್ಟು ಪ್ರಾಮುಖ್ಯತೆ ಬೇಕಾ? ಬಿಟ್​ಕಾಯಿನ್ ಪ್ರಕರಣದ ಬಗ್ಗೆ ಡಾ. ಸುಧಾಕರ್ ಸುದ್ದಿಗೋಷ್ಠಿ

ಇದನ್ನೂ ಓದಿ: ಬಿಟ್​ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ; ವಿವರ ಇಲ್ಲಿದೆ