ಯುದ್ಧದಿಂದ ಪಶ್ಚಿಮ ಏಷ್ಯಾ, ಉಕ್ರೇನ್ ಸಂಘರ್ಷಗಳ ಸಮಸ್ಯೆ ಪರಿಹಾರ ಅಸಾಧ್ಯ; ಜರ್ಮನಿ ಚಾನ್ಸೆಲರ್ ಜೊತೆ ಮೋದಿ ಭೇಟಿ

ಜರ್ಮನಿಯ ಚಾನ್ಸಲರ್ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾ, ಉಕ್ರೇನ್ ಸಂಘರ್ಷಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಯುದ್ಧದಿಂದ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳು ನಮ್ಮಿಬ್ಬರಿಗೂ ಕಳವಳಕಾರಿ ವಿಷಯವಾಗಿದೆ ಎಂದು ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರನ್ನು ಭೇಟಿಯಾದ ನಂತರ ಪ್ರಧಾನಿ ಮೋದಿ ಹೇಳಿದ್ದಾರೆ.

ಯುದ್ಧದಿಂದ ಪಶ್ಚಿಮ ಏಷ್ಯಾ, ಉಕ್ರೇನ್ ಸಂಘರ್ಷಗಳ ಸಮಸ್ಯೆ ಪರಿಹಾರ ಅಸಾಧ್ಯ; ಜರ್ಮನಿ ಚಾನ್ಸೆಲರ್ ಜೊತೆ ಮೋದಿ ಭೇಟಿ
ಜರ್ಮನಿ ಚಾನ್ಸೆಲರ್ - ಮೋದಿ ಭೇಟಿ
Follow us
ಸುಷ್ಮಾ ಚಕ್ರೆ
|

Updated on:Oct 25, 2024 | 4:17 PM

ನವದೆಹಲಿ: ಉಕ್ರೇನ್-ರಷ್ಯಾ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸಲು ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಪುನರುಚ್ಚರಿಸಿದ್ದಾರೆ. “ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳು ನಮ್ಮಿಬ್ಬರಿಗೂ ಕಳವಳಕಾರಿ ವಿಷಯವಾಗಿದೆ. ಯುದ್ಧದಿಂದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ಯಾವಾಗಲೂ ನಂಬುತ್ತದೆ. ಶಾಂತಿಯ ಮರುಸ್ಥಾಪನೆಗಾಗಿ ಸಾಧ್ಯವಿರುವ ಎಲ್ಲ ಸಹಾಯ ನೀಡಲು ಭಾರತ ಸಿದ್ಧವಾಗಿದೆ ಎಂದು ದೆಹಲಿಯಲ್ಲಿ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಭೇಟಿ ಮಾಡಿದ ನಂತರ ಪ್ರಧಾನಿ ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ನಡೆದ ಜರ್ಮನ್ ಬಿಸಿನೆಸ್ 2024 ರ 18ನೇ ಏಷ್ಯಾ-ಪೆಸಿಫಿಕ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಬೆಳವಣಿಗೆಯ ಪ್ರಯಾಣದಲ್ಲಿ ಭಾಗವಹಿಸಲು ಜಾಗತಿಕ ವ್ಯವಹಾರಗಳಿಗೆ ಇದು “ಪರಿಪೂರ್ಣ ಸಮಯ” ಎಂದು ಹೇಳಿದ್ದಾರೆ. ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಹಾಯ; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು

ರಕ್ಷಣಾ ಮತ್ತು ಭದ್ರತಾ ವಲಯಗಳಲ್ಲಿ ಬೆಳೆಯುತ್ತಿರುವ ಸಹಕಾರವು ನಮ್ಮ ಆಳವಾದ ಪರಸ್ಪರ ನಂಬಿಕೆಯ ಸಂಕೇತವಾಗಿದೆ. ವರ್ಗೀಕೃತ ಮಾಹಿತಿಯ ವಿನಿಮಯದ ಒಪ್ಪಂದವು ಈ ದಿಕ್ಕಿನಲ್ಲಿ ಹೊಸ ಹೆಜ್ಜೆಯಾಗಿದೆ. ಇಂದು ತೀರ್ಮಾನಿಸಲಾದ ಪರಸ್ಪರ ಕಾನೂನು, ಸಹಾಯಕ ಒಪ್ಪಂದವು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಅಂಶಗಳನ್ನು ಎದುರಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಗೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಉಕ್ರೇನ್ ಸಂಘರ್ಷವನ್ನು ಪರಿಹರಿಸಲು ಭಾರತವು ಯಾವುದೇ ಪಾತ್ರವನ್ನು ವಹಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಗಡಿಯಲ್ಲಿ ಶಾಂತಿಗೆ ಆದ್ಯತೆ ನೀಡಬೇಕು; ರಷ್ಯಾದಲ್ಲಿ ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

“ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ವಿಷಯದ ಬಗ್ಗೆ ನಾನು ನಿಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನಾನು ಮೊದಲೇ ಹೇಳಿದಂತೆ, ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಪರಿಹರಿಸಬೇಕು ಎಂದು ನಾವು ನಂಬುತ್ತೇವೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಸ್ಥಾಪನೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ನಮ್ಮ ಎಲ್ಲಾ ಪ್ರಯತ್ನಗಳು ಮಾನವೀಯತೆಗೆ ಆದ್ಯತೆ ನೀಡುತ್ತವೆ. ಮುಂದಿನ ದಿನಗಳಲ್ಲಿ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಭಾರತ ಸಿದ್ಧವಾಗಿದೆ” ಎಂದು ಪ್ರಧಾನಿ ರಷ್ಯಾದ ಕಜಾನ್‌ನಲ್ಲಿ ಹೇಳಿದ್ದರು.

“ಇಂದಿನ ದಿನ ಬಹಳ ವಿಶೇಷವಾಗಿದೆ. ನನ್ನ ಸ್ನೇಹಿತ ಓಲಾಫ್ ಸ್ಕೋಲ್ಜ್ ಅವರು ನಾಲ್ಕನೇ ಬಾರಿಗೆ ಭಾರತಕ್ಕೆ ಬಂದಿದ್ದಾರೆ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಗಮನವನ್ನು ತೋರಿಸುತ್ತದೆ. 12 ವರ್ಷಗಳ ನಂತರ ಭಾರತವು ಜರ್ಮನ್ ವ್ಯಾಪಾರದ ಏಷ್ಯಾ ಪೆಸಿಫಿಕ್ ಸಮ್ಮೇಳನವನ್ನು ಆಯೋಜಿಸುತ್ತಿದೆ. ಒಂದು ಕಡೆ, ಸಿಇಒ ಫೋರಮ್‌ಗಳ ಸಭೆ ನಡೆಯುತ್ತಿದೆ. ಪ್ರತಿ ಹಂತದಲ್ಲೂ ಭಾರತ-ಜರ್ಮನಿ ಸಂಬಂಧಗಳು ಬಲಗೊಳ್ಳುತ್ತಿವೆ. ಇದು ಭಾರತ-ಜರ್ಮನಿಯ ಕಾರ್ಯತಂತ್ರದ ಪಾಲುದಾರಿಕೆಯ 25ನೇ ವರ್ಷವಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Fri, 25 October 24

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ