AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್​​ಗೆ ಪ್ರಧಾನಿ ಮೋದಿ ಅಭಿನಂದನೆ

ಜಗದೀಪ್ ಧನ್ಖರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಎನ್​ಡಿಎ ಅಭ್ಯರ್ಥಿಯನ್ನು ಘೋಷಿಸಿದೆ. ಬಿಜೆಪಿ ನಾಯಕರಾದ ಜೆಪಿ ನಡ್ಡಾ ಮತ್ತು ನರೇಂದ್ರ ಮೋದಿಯವರ ನಿರ್ಧಾರವೇ ಅಂತಿಮವೆಂದು ಹೇಳಿದ್ದ ಎನ್​ಡಿಎ ಬಣಗಳು ಉಪರಾಷ್ಟ್ರಪತಿ ಆಯ್ಕೆಯ ಜವಾಬ್ದಾರಿಯನ್ನು ಬಿಜೆಪಿಗೆ ನೀಡಿದ್ದವು. ಅದರಂತೆ ಬಿಜೆಪಿ ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್​​ಗೆ ಪ್ರಧಾನಿ ಮೋದಿ ಅಭಿನಂದನೆ
Modi Meets Cp Radhakrishnan
ಸುಷ್ಮಾ ಚಕ್ರೆ
|

Updated on: Aug 18, 2025 | 4:32 PM

Share

ನವದೆಹಲಿ, ಆಗಸ್ಟ್ 18: ಜಗದೀಪ್ ಧನ್ಖರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ಡಿಎಯ ಉಪರಾಷ್ಟ್ರಪತಿ (Vice President) ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು. ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಮತ್ತು ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ ಅವರನ್ನು ಭಾನುವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.

ರಾಧಾಕೃಷ್ಣನ್ ಅವರೊಂದಿಗಿನ ಸಭೆಯ ನಂತರ ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ತಿರು ಸಿಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ. ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲೂ ಪ್ರದರ್ಶಿಸಿದ ಅದೇ ಸಮರ್ಪಣೆ ಮತ್ತು ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್​​ ಎನ್​ಡಿಎ ಅಭ್ಯರ್ಥಿ

ಸಿ.ಪಿ ರಾಧಾಕೃಷ್ಣನ್ ಆಗಸ್ಟ್ 20ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 21ರಂದು ಜಗದೀಪ್ ಧನ್ಖರ್ ಅವರ ದಿಢೀರ್ ರಾಜೀನಾಮೆಯ ನಂತರ ಉಪರಾಷ್ಟ್ರಪತಿ ಸ್ಥಾನ ತೆರವಾಗಿತ್ತು. ಇದರಿಂದ ಚುನಾವಣೆ ಅನಿವಾರ್ಯವಾಗಿದೆ.

ಎನ್​ಡಿಎ ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಘೋಷಿಸಿರುವಂತೆ ವಿರೋಧ ಪಕ್ಷವೂ ತನ್ನ ಅಭ್ಯರ್ಥಿಯನ್ನು ಘೋಷಿಸಿದರೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: CP Radhakrishnan: ಎನ್​​ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಯಾರು?

ಸಿ.ಪಿ ರಾಧಾಕೃಷ್ಣನ್ ಯಾರು?:

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾದ ಸಿ.ಪಿ ರಾಧಾಕೃಷ್ಣನ್ ಅವರು ಪಕ್ಷವನ್ನು ಅದರ ಆರಂಭಿಕ ವರ್ಷಗಳಿಂದಲೂ ಬೆಂಬಲಿಸುತ್ತಿದ್ದಾರೆ. 1998 ಮತ್ತು 2004ರ ನಡುವೆ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ರಾಧಾಕೃಷ್ಣನ್ ತಮಿಳುನಾಡಿನಲ್ಲಿ ಪ್ರಭಾವಿ ಗೌಂಡರ್ ಜಾತಿಗೆ ಸೇರಿದವರು. ಇದು ಒಬಿಸಿ ಸಮುದಾಯವಾಗಿದೆ. ಕೊಯಮತ್ತೂರಿನ ಮಾಜಿ ಸಂಸದರಾದ ರಾಧಾಕೃಷ್ಣನ್ ಅವರನ್ನು 2023ರಲ್ಲಿ ಜಾರ್ಖಂಡ್ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ನಂತರ ಜುಲೈ 2024ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ಅವರನ್ನು ವರ್ಗಾಯಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ