ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ
ರಾಷ್ಟ್ರಪತಿ ಭವನದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮದ ಪೋಸ್ಟ್ ಮೂಲಕ ಭಾರತೀಯರೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಹಬ್ಬದ ಸಮಯದಲ್ಲಿ ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯನ್ನು ಅವರು ಒತ್ತಿ ಹೇಳಿದ್ದಾರೆ.

ನವದೆಹಲಿ, ಅಕ್ಟೋಬರ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಸೋಮವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ರಾಷ್ಟ್ರಪತಿಗಳಿಗೆ ಹೂವಿನ ಬೊಕ್ಕೆ ನೀಡಿ, ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು. ರಾಷ್ಟ್ರಪತಿಯ ಕಚೇರಿಯು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಈ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಹೂವಿನ ಪುಷ್ಪಗುಚ್ಛವನ್ನು ನೀಡುತ್ತಿರುವುದನ್ನು ನೋಡಬಹುದು.
“ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭಾಶಯಗಳನ್ನು ಹಂಚಿಕೊಂಡರು” ಎಂದು ರಾಷ್ಟ್ರಪತಿ ಭವನ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಇದು ಸೌಹಾರ್ದಯುತ ಸಂವಾದವನ್ನು ಎತ್ತಿ ತೋರಿಸಿದೆ.
Prime Minister Narendra Modi called on President Droupadi Murmu at Rashtrapati Bhavan and shared Diwali greetings.
(Pic Source: Rashtrapati Bhavan) pic.twitter.com/a6BTOX0J3U
— ANI (@ANI) October 20, 2025
ಇದನ್ನೂ ಓದಿ: ಐಎನ್ಎಸ್ ವಿಕ್ರಾಂತ್ನಿಂದ ಪಾಕಿಸ್ತಾನದ ನಿದ್ರೆ ಹಾರಿಹೋಯಿತು; ನೌಕಾಪಡೆಗೆ ಪ್ರಧಾನಿ ಮೋದಿ ಮೆಚ್ಚುಗೆ
ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ರಾಷ್ಟ್ರಕ್ಕೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ. “ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ಬೆಳಕಿನ ಹಬ್ಬವು ನಮ್ಮ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಚೈತನ್ಯ ಮೇಲುಗೈ ಸಾಧಿಸಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಐಎನ್ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿ ಮೋದಿಗಾಗಿ ಆಪರೇಷನ್ ಸಿಂಧೂರ್ ಹಾಡು ಹಾಡಿದ ನೌಕಾಪಡೆಯ ಸಿಬ್ಬಂದಿ
ದೀಪಾವಳಿ ಹಬ್ಬದ ಅದ್ಧೂರಿ ಆಚರಣೆಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಭಾರತದ ಸ್ಥಳೀಯವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್‌ನಲ್ಲಿ ದೀಪಾವಳಿಯನ್ನು ಆಚರಿಸಿದರು. ಐಎನ್ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿಯವರ ದೀಪಾವಳಿ ಆಚರಣೆಯು ಭಾರತದ ಬೆಳೆಯುತ್ತಿರುವ ಕಡಲ ಶಕ್ತಿ ಮತ್ತು ಅದರ ಸಶಸ್ತ್ರ ಪಡೆಗಳ ಸಮರ್ಪಣೆಯನ್ನು ಸಂಕೇತಿಸುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




