AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು ಬಿಪಿನ್ ರಾವತ್; ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಮೋದಿ

Bipin Rawat ಸಿಡಿಎಸ್ ರಾವತ್ ಅವರೊಂದಿಗೆ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ ಪ್ರಧಾನಿ, ಜನರಲ್ ರಾವತ್ ಅವರು ನಿಜವಾದ ದೇಶಭಕ್ತರಾಗಿದ್ದರು, ಅವರು "ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು ಬಿಪಿನ್ ರಾವತ್; ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಮೋದಿ
ಬಿಪಿನ್ ರಾವತ್ ಜತೆ ನರೇಂದ್ರ ಮೋದಿ
TV9 Web
| Edited By: |

Updated on: Dec 08, 2021 | 7:37 PM

Share

ದೆಹಲಿ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಜನರಲ್ ಬಿಪಿನ್ ರಾವತ್ (Bipin Rawat) ಮತ್ತು ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಮಂದಿ ಸಾವಿಗೀಡಾಗಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ (helicopter crash) ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಅತ್ಯಂತ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ನನ್ನ ಪ್ರಾರ್ಥನೆ ದುಃಖಿತ ಕುಟುಂಬಗಳೊಂದಿಗೆ ಇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.  ಹೆಲಿಕಾಪ್ಟರ್‌ನಲ್ಲಿ ಜನರಲ್ ರಾವತ್  ಮತ್ತು ಇತರ ಸಿಬ್ಬಂದಿ ಸೇರಿದಂತೆ 13 ಪ್ರಯಾಣಿಕರಿದ್ದರು. ಕೂನೂರು ಬಳಿ ಅಪಘಾತ ಸಂಭವಿಸಿದೆ ಎಂದು ಐಎಎಫ್ ಖಚಿತಪಡಿಸಿದೆ. ಜನರಲ್ ರಾವತ್ ಅವರು ಅಧ್ಯಾಪಕರು ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ವೆಲ್ಲಿಂಗ್ಟನ್ (ನೀಲಗಿರಿ ಹಿಲ್ಸ್) ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡುವವರಿದ್ದರು. ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನಲ್ಲಿ ಸಿಬ್ಬಂದಿಯನ್ನು ನಿರ್ದೇಶಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಸ್‌ಸಿ, Mi-17V5 ಚಾಪರ್ ಒಳಗೊಂಡ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದು, ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ತಿಳಿಸಿದೆ.

ಸಿಡಿಎಸ್ ರಾವತ್ ಅವರೊಂದಿಗೆ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ ಪ್ರಧಾನಿ, ಜನರಲ್ ರಾವತ್ ಅವರು ನಿಜವಾದ ದೇಶಭಕ್ತರಾಗಿದ್ದರು, ಅವರು “ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪೂರ್ಣ ಮೂರು ವರ್ಷಗಳ ಅವಧಿಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ರಾವತ್ ಅವರು ಡಿಸೆಂಬರ್ 31, 2019 ರಂದು ಭಾರತದ ಮೊದಲ ರಕ್ಷಣಾ ಸಿಬ್ಬಂದಿಯಾಗಿ ಅಧಿಕಾರ ವಹಿಸಿಕೊಂಡರು.  ಜನರಲ್ ರಾವತ್ ಅವರ ಸಾವಿನ ಸುದ್ದಿ ಹೊರಬಿದ್ದ ತಕ್ಷಣ, ಹಿರಿಯ ಸಚಿವರು ಮತ್ತು ರಾಜಕೀಯ ಮುಖಂಡರು ದುರ್ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CDS Bipin Rawat: ಅತಿಸೂಕ್ಷ್ಮ ಹುದ್ದೆ ನಿರ್ವಹಿಸುತ್ತಿರುವ ಸಮರ್ಥ ವ್ಯಕ್ತಿ ಸಿಡಿಎಸ್ ಬಿಪಿನ್ ರಾವತ್ 

ಇದನ್ನೂ ಓದಿ: CDS Bipin Rawat ಸಿಡಿಎಸ್ ಬಿಪಿನ್ ರಾವತ್ ವೃತ್ತಿಜೀವನ: ಸರ್ಜಿಕಲ್ ಸ್ಟ್ರೈಕ್ ಕಾರ್ಯಗತಗೊಳಿಸಿದ್ದ ಗುಡ್ಡಗಾಡು ಸಂಘರ್ಷ ಪರಿಣಿತ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್