PM Surya Ghar Yojana: ಸೂರ್ಯ ಘರ್ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಭಾರತದ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ಗುಜರಾತ್​ನಲ್ಲಿ ವಿವಿಧ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

Follow us
|

Updated on: Sep 18, 2024 | 11:56 AM

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರು ಬೆಳಗ್ಗೆ 10 ಗಂಟೆಗೆ ವಾವೋಲ್‌ನಲ್ಲಿರುವ ಶಾಲಿನ್-2 ಸೊಸೈಟಿಯನ್ನು ತಲುಪಿದರು ಮತ್ತು ಫೆಬ್ರವರಿ 29 ರಂದು ಪ್ರಾರಂಭಿಸಲಾದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 75,021 ಕೋಟಿ ರೂ. ಯೋಜನೆಯಡಿಯಲ್ಲಿ ತಮ್ಮ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿರುವ ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದರು.

ಸುಮಾರು 20 ನಿಮಿಷಗಳ ಕಾಲ ಈ ವಸತಿ ಸಂಕೀರ್ಣದಲ್ಲಿ ಪ್ರಧಾನಿ ತಂಗಿದ್ದರು. ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಸತಿ ಗೃಹಗಳು ತಮ್ಮ ಸ್ವಂತ ವಿದ್ಯುತ್ ಉತ್ಪಾದಿಸಲು ಅನುವು ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ.

ಸರ್ಕಾರಕ್ಕೆ ಒಟ್ಟು ವಿದ್ಯುತ್ ವೆಚ್ಚದಲ್ಲಿ ಉಳಿತಾಯವಾಗುತ್ತದೆ, ನವೀಕರಿಸಬಹುದಾದ ಶಕ್ತಿಯ ಸದ್ಬಳಕೆಯಾಗುವುದು, ಮನೆಗಳಿಗೆ ಉಚಿತ ವಿದ್ಯುತ್ ಸಿಗುವುದು. ಪ್ರಧಾನಿ ಮೋದಿ ಈ ಕುರಿತು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದು, ನಾನು ಇತ್ತೀಚೆಗೆ ಗುಜರಾತ್​ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆ ಅದರ ಹೈಲೈಟ್ಸ್​ ಇಲ್ಲಿದೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಯೋಜನೆಯ ಪ್ರಯೋಜನ ಪಡೆಯಲು ಮಾನದಂಡಗಳು ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು. ಸೌರ ಫಲಕಗಳನ್ನು ಅಳವಡಿಸಲು ಸೂಕ್ತವಾದ ಮೇಲ್ಛಾವಣಿಯನ್ನು ಹೊಂದಿರುವ ಮನೆಯನ್ನು ಹೊಂದಿರಬೇಕು. ಮನೆಯು ಮಾನ್ಯವಾದ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು. ಮನೆಯವರು ಸೋಲಾರ್ ಪ್ಯಾನೆಲ್‌ಗಳಿಗೆ ಬೇರೆ ಯಾವುದೇ ಸಬ್ಸಿಡಿಯನ್ನು ಪಡೆದಿರಬಾರದು.

1 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 30,000 ರೂ. ಸಬ್ಸಿಡಿ ದೊರೆಯುತ್ತಿದ್ದು, 2 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 60,000 ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. 3 ಕಿಲೋ ವ್ಯಾಟ್‌ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ 78,000 ರೂ. ದೊರೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ