New Parliament Building: ಸಂಸತ್ತಿನಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ, ಪ್ರಧಾನಿ ಮೋದಿಯಿಂದ ಸಾಷ್ಟಾಂಗ ನಮಸ್ಕಾರ, ಸೆಂಗೋಲ್​ನ ಮಹತ್ವ ಏನು?

|

Updated on: May 28, 2023 | 8:23 AM

​ ನೂತನ ಸಂಸತ್ ಭವನ(Parliament Building) ದ ಉದ್ಘಾಟನಾ ಕಾರ್ಯಕ್ರಮ ಇಂದು( ಮೇ28)ನೆರವೇರಲಿದ್ದು,ಅ ದಕ್ಕೂ ಮುನ್ನ ಸಂಸತ್​ ಭವನದಲ್ಲಿ ಸೆಂಗೋಲ್(ರಾಜದಂಡ) ಪ್ರತಿಷ್ಠಾಪನಾ ಕಾರ್ಯ ನೆರವೇರಿತು.

New Parliament Building: ಸಂಸತ್ತಿನಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ, ಪ್ರಧಾನಿ ಮೋದಿಯಿಂದ ಸಾಷ್ಟಾಂಗ ನಮಸ್ಕಾರ, ಸೆಂಗೋಲ್​ನ ಮಹತ್ವ ಏನು?
ಪ್ರಧಾನಿ ಮೋದಿ
Follow us on

​ ನೂತನ ಸಂಸತ್ ಭವನ(Parliament Building) ದ ಉದ್ಘಾಟನಾ ಕಾರ್ಯಕ್ರಮ ಇಂದು( ಮೇ28)ನೆರವೇರಲಿದ್ದು,ಅ ದಕ್ಕೂ ಮುನ್ನ ಸಂಸತ್​ ಭವನದಲ್ಲಿ ಸೆಂಗೋಲ್(ರಾಜದಂಡ) ಪ್ರತಿಷ್ಠಾಪನಾ ಕಾರ್ಯ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಸೆಂಗೋಲ್​ಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ನೂತನ ಸಂಸತ್ ಭವನದ ಉದ್ಘಾಟನೆಗೆ ಮುನ್ನ ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹೊಸ ಸಂಸತ್ ಭವನದಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದ ಆರಂಭದಲ್ಲಿ, ವೇದ-ಮಂತ್ರ ಘೋಷಗಳ ನಡುವೆ ಮಧುರೈ ಅಧೀನಂ ಪೀಠಾಧಿಪತಿ ಸೆಂಗೋಲ್ ಅಂದರೆ ರಾಜದಂಡವನ್ನು ಪ್ರಧಾನಿ ಮೋದಿಯವರಿಗೆ ನೀಡಿದರು. ರಾಜದಂಡವನ್ನು ಕೈಯಲ್ಲಿ ತೆಗೆದುಕೊಳ್ಳುವ ಮೊದಲು, ಪ್ರಧಾನಿ ಮೋದಿ ಸೆಂಗೋಲ್‌ಗೆ ನಮಸ್ಕರಿಸಿದರು. ಇದರ ನಂತರ, ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಹೊಸ ಸಂಸತ್ ಭವನದಲ್ಲಿ ಸೆಂಗೋಲ್ ಅನ್ನು ಸ್ಥಾಪಿಸಿದರು.

ಪೂಜೆಯೊಂದಿಗೆ ಸಮಾರಂಭ ಆರಂಭವಾಗಲಿದೆ. ಮಾಹಿತಿ ಪ್ರಕಾರ ಸುಮಾರು ಒಂದು ಗಂಟೆ ಕಾಲ ಈ ಪೂಜೆ ನಡೆಯಲಿದೆ. ಹೊಸ ಸಂಸತ್ತಿನಲ್ಲಿ ಸೆಂಗೋಲ್ ಅನ್ನು ಸ್ಥಾಪಿಸಿದ ನಂತರ, ಪ್ರಧಾನಿ ಮೋದಿ ಈ ಕಟ್ಟಡವನ್ನು ನಿರ್ಮಿಸಿದ ಕಾರ್ಮಿಕರನ್ನು ಭೇಟಿಯಾದರು. ಇದೇ ವೇಳೆ ಅವರು ಕಾರ್ಮಿಕರನ್ನು ಸನ್ಮಾನಿಸಿದರು.

ಸೆಂಗೋಲ್​ ಮಹತ್ವವೇನು?
ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಬ್ರಿಟಿಷ್ ಆಡಳಿತ ಹಸ್ತಾಂತರಿಸಿತ್ತು. ಈ ರಾಜದಂಡವನ್ನು ‘ಸೆಂಗೊಲ್’ ಎಂದು ಕರೆಯಲಾಗುತ್ತದೆ. ಇದು ತಮಿಳು ಪದ ‘ಸೆಮ್ಮೈ’ನಿಂದ ಬಂದಿದೆ.

ಸೆಂಗೋಲ್‌ನ ಇತಿಹಾಸ ಮತ್ತು ಮಹತ್ವ ಅನೇಕರಿಗೆ ತಿಳಿದಿಲ್ಲ. ಹೊಸ ಸಂಸತ್ತಿನಲ್ಲಿ ಇದನ್ನು ಸ್ಥಾಪಿಸುವುದರಿಂದ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನವಾಗುತ್ತದೆ. ಹೊಸ ಸಂಸತ್ತಿನಲ್ಲಿ ಸೆಂಗೋಲ್ ಅಳವಡಿಸುವ ಯೋಜನೆಯು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಸೆಂಗೊಲ್ ಈಗ ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿತ್ತು.

ಮತ್ತಷ್ಟು ಓದಿ: Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ಅಲ್ಲಿಂದ ಸಂಸತ್ತಿಗೆ ತಂದು ಪ್ರಧಾನಿ ಮೋದಿಯವರು ಸ್ಪೀಕರ್ ಸ್ಥಾನದ ಬಳಿ ಸ್ಥಾಪನೆ ಮಾಡಿದರು. ಬ್ರಿಟಿಷ್ ಇಂಡಿಯಾದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ನೆಹರೂ ಅವರ ಜೊತೆ ಯಾವ ರೀತಿ ಹಸ್ತಾಂತರ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿತ್ತು. ಈ ಸಂದರ್ಭದಲ್ಲಿ ಚೋಳರ ಇತಿಹಾಸವನ್ನು ತಿಳಿದಿದ್ದ ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ಸೆಂಗೊಲ್ ನೀಡುವ ಮೂಲಕ ಹಸ್ತಾಂತರಿಸಬಹುದು ಎಂದು ಸಲಹೆ ನೀಡಿದ್ದರು. ಈ ಸಲಹೆ ನೆಹರೂ ಅವರಿಗೆ ಇಷ್ಟವಾಯಿತು.

ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು. ಇವರು ತಮಿಳುನಾಡಿನ ಪ್ರಮುಖ ಮಠವಾದ ತಿರುವಾಡುತುರೈ ಅಧೀನಂ ಮಠವನ್ನು ಸಂಪರ್ಕಿಸಿದರು. ಆ ಮಠದ ಶ್ರೀಗಳು ಇದರ ಜವಾಬ್ದಾರಿಯನ್ನು ತೆಗೆದುಕೊಂಡರು. ಮದ್ರಾಸಿನ ಆಭರಣ ವ್ಯಾಪಾರಿಯಾಗಿದ್ದ ವುಮ್ಮಿಡಿ ಬಂಗಾರು ಚೆಟ್ಟಿ ಅವರು ಸೆಂಗೋಲನ್ನು ತಯಾರಿಸಿದ್ದು, ಇದು ಐದು ಅಡಿ ಉದ್ದ ಮತ್ತು ನ್ಯಾಯವನ್ನು ಸಂಕೇತಿಸುವ ‘ನಂದಿ’ಯನ್ನು ಹೊಂದಿರುವುದು ಇದರ ವಿಶೇಷತೆಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ