AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಉಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ
ನಯನಾ ರಾಜೀವ್
|

Updated on: May 29, 2023 | 10:33 AM

Share

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿತ್ತು, ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತ ಮತ್ತು ಹಲವಾರು ಕಲ್ಯಾಣ ಯೋಜನೆಗಳ ಅನುಷ್ಠಾನಗಳ ಕುರಿತು ಮಾತನಾಡಿದರು. ಇಂದು ನಾವು ಬಿಜೆಪಿ ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಸಭೆ ನಡೆಸಿದ್ದೇವೆ, ನಾವು ಅಭಿವೃದ್ಧಿಯನ್ನು ವೇಗಗೊಳಿಸಲು ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು, ಮುಖ್ಯಮಂತ್ರಿಗಳಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ, ತ್ರಿಪುರಾದ ಮಾಣಿಕ್ ಸಹಾ ಹಾಗೂ ಅರುಣಾಚಲಪ್ರದೇಶದ ಪೆಮಾ ಖಂಡು ಸೇರಿದ್ದಾರೆ.

ಮತ್ತಷ್ಟು ಓದಿ: New Parliament Building: ಭಾರತ ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುವುದು, ಭಾರತ ಪ್ರಜಾತಂತ್ರ ರಾಷ್ಟ್ರ ಮಾತ್ರವಲ್ಲ ಪ್ರಜಾತಂತ್ರದ ಜನನಿ ಕೂಡ: ಮೋದಿ

ಸಭೆಯಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್ ಮೌರ್ಯ ಹಾಗೂ ಬ್ರಜೇಶ್​ ಪಾಠಕ್ ಕೂಡ ಉಪಸ್ಥಿತರಿದ್ದರು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು