ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿತ್ತು, ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತ ಮತ್ತು ಹಲವಾರು ಕಲ್ಯಾಣ ಯೋಜನೆಗಳ ಅನುಷ್ಠಾನಗಳ ಕುರಿತು ಮಾತನಾಡಿದರು. ಇಂದು ನಾವು ಬಿಜೆಪಿ ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಸಭೆ ನಡೆಸಿದ್ದೇವೆ, ನಾವು ಅಭಿವೃದ್ಧಿಯನ್ನು ವೇಗಗೊಳಿಸಲು ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು, ಮುಖ್ಯಮಂತ್ರಿಗಳಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ, ತ್ರಿಪುರಾದ ಮಾಣಿಕ್ ಸಹಾ ಹಾಗೂ ಅರುಣಾಚಲಪ್ರದೇಶದ ಪೆಮಾ ಖಂಡು ಸೇರಿದ್ದಾರೆ.
ಸಭೆಯಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹಾಗೂ ಬ್ರಜೇಶ್ ಪಾಠಕ್ ಕೂಡ ಉಪಸ್ಥಿತರಿದ್ದರು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ