BRICS Summit: ರಾಷ್ಟ್ರಧ್ವಜಕ್ಕೆ ಗೌರವ; ಬ್ರಿಕ್ಸ್ ಶೃಂಗಸಭೆ ವೇಳೆ ನೆಲದಲ್ಲಿ ಬಿದ್ದಿದ್ದ ತ್ರಿವರ್ಣ ಧ್ವಜವನ್ನು ಎತ್ತಿ ಜೇಬಿಗೆ ಹಾಕಿದ ಪ್ರಧಾನಿ ಮೋದಿ

PM Modi Picks Up Tiranga: ಗ್ರೂಪ್ ಫೋಟೊಗಾಗಿ ವಿಶ್ವ ನಾಯಕರು ನಿಲ್ಲುವ ಸ್ಥಾನವನ್ನು ಗುರುತಿಸಲು ಧ್ವಜಗಳನ್ನು ಅಲ್ಲಿ ಗುರುತಿಗೆ ಎಂದು ಇರಿಸಲಾಗಿತ್ತು. ಆದರೆ, ಪ್ರಧಾನಿ ಮೋದಿ ವೇದಿಕೆಯನ್ನು ತಲುಪಿದ ತಕ್ಷಣ, ತ್ರಿವರ್ಣ ಧ್ವಜವು ನೆಲದ ಮೇಲೆ ಬಿದ್ದರುವುದನ್ನು ನೋಡಿ ಅದನ್ನು ಹೆಕ್ಕಿ ತಮ್ಮ ಜೇಬಿಗೆ ಹಾಕಿದರು. ಪ್ರಧಾನಿ ಮೋದಿ ಹೀಗೆ ಮಾಡುತ್ತಿರುವುದನ್ನು ನೋಡಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಸದಸ್ಯ ರಾಷ್ಟ್ರಗಳ ಧ್ವಜಗಳನ್ನು ಇರಿಸಲಾಗಿರುವ ವೇದಿಕೆಯಿಂದ ದಕ್ಷಿಣ ಆಫ್ರಿಕಾದ ರಾಷ್ಟ್ರಧ್ವಜವನ್ನು ಎತ್ತಿಕೊಂಡರು.

Follow us
ರಶ್ಮಿ ಕಲ್ಲಕಟ್ಟ
|

Updated on:Aug 23, 2023 | 10:50 PM

ಜೋಹಾನ್ಸ್‌ಬರ್ಗ್ ಆಗಸ್ಟ್ 23: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಬುಧವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆಲದಲ್ಲಿ ಬಿದ್ದಿದ್ದ ತ್ರಿವರ್ಣ ಧ್ವಜವನ್ನು ಎತ್ತಿಕೊಂಡು ‘ತಿರಂಗಾ’ಗೆ ಗೌರವ ಸೂಚಿಸಿದರು. ಭಾರತ, ದಕ್ಷಿಣ ಆಫ್ರಿಕಾ, ಚೀನಾ, ರಷ್ಯಾ ಮತ್ತು ಬ್ರೆಜಿಲ್‌ನ ನಾಯಕರನ್ನು ಒಳಗೊಂಡ ವೇದಿಕೆಯ ವೇದಿಕೆಯಲ್ಲಿ ಸದಸ್ಯ ರಾಷ್ಟ್ರಗಳು ಗುಂಪು ಫೋಟೋಗಾಗಿ ನಿಲ್ಲಲು ಸಿದ್ಧತೆ ನಡೆಸುತ್ತಿದ್ದರು. ಗ್ರೂಪ್ ಫೋಟೊಗಾಗಿ ವಿಶ್ವ ನಾಯಕರು ನಿಲ್ಲುವ ಸ್ಥಾನವನ್ನು ಗುರುತಿಸಲು ಧ್ವಜಗಳನ್ನು ಅಲ್ಲಿ ಗುರುತಿಗೆ ಎಂದು ಇರಿಸಲಾಗಿತ್ತು. ಆದರೆ, ಪ್ರಧಾನಿ ಮೋದಿ ವೇದಿಕೆಯನ್ನು ತಲುಪಿದ ತಕ್ಷಣ, ತ್ರಿವರ್ಣ ಧ್ವಜವು ನೆಲದ ಮೇಲೆ ಬಿದ್ದರುವುದನ್ನು ನೋಡಿ ಅದನ್ನು ಹೆಕ್ಕಿ ತಮ್ಮ ಜೇಬಿಗೆ ಹಾಕಿದರು.

ಪ್ರಧಾನಿ ಮೋದಿ ಹೀಗೆ ಮಾಡುತ್ತಿರುವುದನ್ನು ನೋಡಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಸದಸ್ಯ ರಾಷ್ಟ್ರಗಳ ಧ್ವಜಗಳನ್ನು ಇರಿಸಲಾಗಿರುವ ವೇದಿಕೆಯಿಂದ ದಕ್ಷಿಣ ಆಫ್ರಿಕಾದ ರಾಷ್ಟ್ರಧ್ವಜವನ್ನು ಎತ್ತಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ 15 ನೇ ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಬಂದಿಳಿದರು. ಬ್ರಿಕ್ಸ್ ಶೃಂಗಸಭೆಯು ಜೋಹಾನ್ಸ್‌ಬರ್ಗ್‌ನಲ್ಲಿ ಆಗಸ್ಟ್ 22 ರಿಂದ 24 ರವರೆಗೆ ನಡೆಯಲಿದೆ. BRICS ಎಂದು ಕರೆಯಲ್ಪಡುವ ದೇಶಗಳ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಇದೆ. ಈ ವರ್ಷದ BRICS ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿದೆ ಆಫ್ರಿಕನ್ ದೇಶವು ಜನವರಿ 1 ರಂದು ಬ್ರಿಕ್ಸ್‌ನ ಅಧ್ಯಕ್ಷತೆ ವಹಿಸಿಕೊಂಡಿತ್ತು.

ಬ್ರಿಕ್ಸ್ ಶೃಂಗಸಭೆಯ ಮುಕ್ತ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ತನ್ನ ಜಿ 20 ಅಧ್ಯಕ್ಷತೆಯಲ್ಲಿ ಜಾಗತಿಕ ದಕ್ಷಿಣದ ದೇಶಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಬ್ರಿಕ್ಸ್ ಶೃಂಗಸಭೆಗೆ ಆತಿಥ್ಯ ವಹಿಸಿದ ದಕ್ಷಿಣ ಆಫ್ರಿಕಾವನ್ನು ಅವರು ಶ್ಲಾಘಿಸಿದ್ದಾರೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್‌ನಲ್ಲಿ ಜಾಗತಿಕ ದಕ್ಷಿಣದ ದೇಶಗಳಿಗೆ ವಿಶೇಷ ಪ್ರಾಮುಖ್ಯತೆ ನೀಡುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಭಾರತವು ತನ್ನ ಜಿ 20 ಅಧ್ಯಕ್ಷತೆಯಲ್ಲಿ ಈ ವಿಷಯಕ್ಕೆ ಪ್ರಾಮುಖ್ಯತೆ ನೀಡಿದೆ ಎಂದು ಮೋದಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ಎರಡು ದಶಕಗಳಲ್ಲಿ ಬ್ರಿಕ್ಸ್ ಸುದೀರ್ಘ ಮತ್ತು ಅದ್ಭುತವಾದ ಪ್ರಯಾಣವನ್ನು ಆರಂಭಿಸಿದೆ. ಗ್ಲೋಬಲ್ ಸೌತ್‌ನಲ್ಲಿ ಅಭಿವೃದ್ಧಿಶೀಲ ಚಟುವಟಿಕೆಗಳನ್ನು ಮುಂದಕ್ಕೆ ಸಾಗಿಸುವಲ್ಲಿ ಗುಂಪಿನ ಹೊಸ ಅಭಿವೃದ್ಧಿ ಬ್ಯಾಂಕ್ ಹೇಗೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಬ್ರಿಕ್ಸ್ ವಿಸ್ತರಣೆಗೆ ಭಾರತ ಸಂಪೂರ್ಣ ಬೆಂಬಲ ನೀಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ರೈಲ್ವೆ ಸಂಶೋಧನಾ ಜಾಲಗಳ ಕ್ಷೇತ್ರಗಳಲ್ಲಿ ಕ್ರಮಗಳನ್ನು ಮತ್ತು ಎಂಎಸ್‌ಎಂಇಗಳು ಮತ್ತು ಸ್ಟಾರ್ಟ್‌ಅಪ್‌ಗಳ ನಡುವಿನ ಸಹಕಾರವನ್ನು ಭಾರತ ಸೂಚಿಸಿದ್ದು, ಈ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ತಂತ್ರಜ್ಞಾನದ ಬಳಕೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ ಪ್ರಧಾನಿ ಮೋದಿ, ಬ್ರಿಕ್ಸ್ ದೇಶಗಳು ತಮ್ಮ ಸಮಾಜಗಳನ್ನು ಭವಿಷ್ಯಕ್ಕೆ ಸಿದ್ಧವಾಗುವಂತೆ ಮಾಡಬೇಕಾಗಿದೆ. ಈ ಪ್ರಯತ್ನಗಳಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ.

ಭಾರತದೊಂದಿಗೆ ಜೋಹಾನ್ಸ್‌ಬರ್ಗ್‌ನ ಗಾಢ ಮತ್ತು ಹಳೆಯ ಸಂಬಂಧಗಳು ಮತ್ತು ದಕ್ಷಿಣ ಆಫ್ರಿಕಾದೊಂದಿಗಿನ ಮಹಾತ್ಮ ಗಾಂಧಿಯವರ ಸಂಪರ್ಕ ಮತ್ತು ಉಭಯ ದೇಶಗಳ ನಡುವಿನ ಐತಿಹಾಸಿಕ ಸಂಪರ್ಕಗಳನ್ನು ಪ್ರಧಾನಿ ನೆನಪಿಸಿಕೊಂಡರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:49 pm, Wed, 23 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್