ದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರು ಬುಧವಾರ ರವಿದಾಸ್ ಜಯಂತಿಯ (Ravidas Jayanti) ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭ ಹಾರೈಸಿದರು. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ರಾಷ್ಟ್ರಪತಿ ಕೋವಿಂದ್, ಸಂತರು ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಆಧಾರದ ಮೇಲೆ ಸಮಾಜವನ್ನು ನಿರ್ಮಿಸಲು ದೇಶದ ಜನತೆಗೆ ಕೊಡುಗೆ ನೀಡುವಂತೆ ಕೋರಿದ್ದಾರೆ. ಗುರು ರವಿದಾಸ್ ಜಯಂತಿಯಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಯಾವುದೇ ತಾರತಮ್ಯವಿಲ್ಲದೆ ಪರಸ್ಪರ ಪ್ರೀತಿ ಮತ್ತು ಸಮಾನತೆಯನ್ನು ಕಾಣುವ ಸಂದೇಶವನ್ನು ಮಹಾನ್ ಸಂತ ಗುರು ರವಿದಾಸ್ ಜೀ ನೀಡಿದರು. ಗುರು ರವಿದಾಸ್ ಜಿ ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ಸಮಾನತೆ, ಸಾಮರಸ್ಯ ಮತ್ತು ಸಮನ್ವಯದ ಆಧಾರದ ಮೇಲೆ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೊಡುಗೆ ನೀಡೋಣ ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ. ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಾರ್ಥನೆ ಸಲ್ಲಿಸಿದರು. ಭಕ್ತರೊಂದಿಗೆ ಸಂವಾದ ನಡೆಸಿದ ಮೋದಿ ದೇವಸ್ಥಾನದಲ್ಲಿ ‘ಶಾಬಾದ್ ಕೀರ್ತನೆ’ಯಲ್ಲಿ ಭಾಗವಹಿಸಿದರು. ಸಂದರ್ಶಕರ ಪುಸ್ತಕದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ, ಗುರು ರವಿದಾಸ್ ಅವರ ಜೀವನವು ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
Very special moments at the Shri Guru Ravidas Vishram Dham Mandir in Delhi. pic.twitter.com/PM2k0LxpBg
— Narendra Modi (@narendramodi) February 16, 2022
ದೇವಾಲಯದಲ್ಲಿನ “ಅತ್ಯಂತ ವಿಶೇಷ ಕ್ಷಣಗಳ” ವಿಡಿಯೊವನ್ನು ಪ್ರಧಾನಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ರವಿದಾಸ್ ಜಯಂತಿಯಂದು ದೆಹಲಿ ಸರ್ಕಾರ ರಜೆ ಘೋಷಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಆದೇಶದ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಡುತ್ತವೆ.
ಗುರು ರವಿದಾಸ್ 15 ನೇ ಮತ್ತು 16 ನೇ ಶತಮಾನದಲ್ಲಿ ಭಕ್ತಿ ಚಳವಳಿಯ ಸಂತರಾಗಿದ್ದರು ಮತ್ತು ಅವರ ಸ್ತೋತ್ರಗಳನ್ನು ಗುರು ಗ್ರಂಥ ಸಾಹಿಬ್‌ನಲ್ಲಿ ಸೇರಿಸಲಾಗಿದೆ. ಅವರನ್ನು 21ನೇ ಶತಮಾನದ ರವಿದಾಸ್ಸಿಯಾ ಧರ್ಮದ ಸ್ಥಾಪಕ ಎಂದು ಪರಿಗಣಿಸಲಾಗಿದೆ.
ರವಿದಾಸ್ ಜಯಂತಿಯನ್ನು ಮಾಘ ಪೂರ್ಣಿಮೆಯಂದು ಆಚರಿಸಲಾಗುತ್ತದೆ, ಇದು ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಘ ತಿಂಗಳ ಹುಣ್ಣಿಮೆಯ ದಿನವಾಗಿದೆ.
ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 ಶತಮಾನದಲ್ಲಿ ಜನಿಸಿದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಗುರು ರವಿದಾಸ್ ಅವರು ತಮ್ಮ ಜಾತಿಯನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನತೆ ಮತ್ತು ಘನತೆಯನ್ನು ಪ್ರತಿಪಾದಿಸಿದರು. ಅವರು ಲಿಂಗ ಸಮಾನತೆಯನ್ನು ಉತ್ತೇಜಿಸಿದರು ಮತ್ತು ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದರು. ಅವರು ಇನ್ನೊಬ್ಬ ಪ್ರಮುಖ ಭಕ್ತಿ ಚಳುವಳಿ ಕವಿಯತ್ರಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.
ಇದನ್ನೂ ಓದಿ: Chennaveera Kanavi Death: ‘ವ್ಯಕ್ತಿಗೀತೆ’; ಬೇಂದ್ರೆಯವರಿಗೆ ಎಪ್ಪತ್ತು ತುಂಬಿದಾಗ ಕಣವಿಯವರು ಬರೆದ ಧೀಮಂತ ಕವಿತೆ
Published On - 11:40 am, Wed, 16 February 22