Syama Prasad Mookerjee ಶ್ಯಾಮ ಪ್ರಸಾದ್ ಮುಖರ್ಜಿ 120 ನೇ ಜನ್ಮ ದಿನಾಚರಣೆ: ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Syama Prasad Mookerjee Birth Anniversary: ನಾನು ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜಯಂತಿಯಂದು ನಮಸ್ಕರಿಸುತ್ತೇನೆ. ಅವರ ಉನ್ನತ ಆದರ್ಶಗಳು ನಮ್ಮ ರಾಷ್ಟ್ರದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ. ಡಾ. ಮುಖರ್ಜಿ ಅವರು ಭಾರತದ ಏಕತೆ ಮತ್ತು ಪ್ರಗತಿಯತ್ತ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ಮೋದಿ ಟ್ವೀಟ್

Syama Prasad Mookerjee ಶ್ಯಾಮ ಪ್ರಸಾದ್ ಮುಖರ್ಜಿ 120 ನೇ ಜನ್ಮ ದಿನಾಚರಣೆ: ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 06, 2021 | 12:16 PM

ದೆಹಲಿ: ಭಾರತೀಯ ಜನ ಸಂಘ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ 120 ನೇ ಜನ್ಮದಿನಾಚರಣೆಯಾದ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ವಿದ್ವಾಂಸ ಮುಖರ್ಜಿ ಅವರನ್ನು ನೆನಪಿಸಿಕೊಂಡ ಪ್ರಧಾನಿ ಭಾರತದ ಐಕ್ಯತೆ ಮತ್ತು ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಅವರು ಎಂದಿದ್ದಾರೆ. “ನಾನು ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜಯಂತಿಯಂದು ನಮಸ್ಕರಿಸುತ್ತೇನೆ. ಅವರ ಉನ್ನತ ಆದರ್ಶಗಳು ನಮ್ಮ ರಾಷ್ಟ್ರದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ. ಡಾ. ಮುಖರ್ಜಿ ಅವರು ಭಾರತದ ಏಕತೆ ಮತ್ತು ಪ್ರಗತಿಯತ್ತ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ತಮ್ಮನ್ನು ತಾವು ಗಮನಾರ್ಹ ವಿದ್ವಾಂಸರು ಮತ್ತು ಬುದ್ಧಿಜೀವಿಗಳೆಂದು ಗುರುತಿಸಿಕೊಂಡಿದ್ದಾರೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣ ತಜ್ಞರಾಗಿದ್ದ ಮುಖರ್ಜಿ (1901-1953) ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸಂಪುಟದಲ್ಲಿ ಕೈಗಾರಿಕೆ ಮತ್ತು ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು.

1951 ರಲ್ಲಿ ಭಾರತೀಯ ಜನ ಸಂಘವನ್ನು ಸ್ಥಾಪಿಸಿದ್ದರು ಶ್ಯಾಮಾ ಪ್ರಸಾದ್ ಮುಖರ್ಜಿ. ಮುಖರ್ಜಿ ಆರ್ಟಿಕಲ್ 370 ರ ವಿರುದ್ಧ ಅಭಿಯಾನವನ್ನು ಮುನ್ನಡೆಸಿದರು, ಇದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಜೂನ್ 23, 1953ರಲ್ಲಿ ಇವರು ಮರಣ ಹೊಂದಿದರು.

ಭಾರತೀಯ ಜನ ಸಂಘದ ಸಂಸ್ಥಾಪಕರ ಬಗ್ಗೆ

ಶ್ಯಾಮ ಪ್ರಸಾದ್ ಮುಖರ್ಜಿ ಕೋಲ್ಕತ್ತಾದ ಭವಾನಿಪುರದಲ್ಲಿ ಮಿತ್ರ ಸಂಸ್ಥೆಯಲ್ಲಿ ಆರಂಭಿಕ ಶಿಕ್ಷಣವನ್ನು ಪೂರೈಸಿದರು. ಶಾಲೆ ಮುಗಿದ ನಂತರ, ಈಗ ವಿಶ್ವವಿದ್ಯಾಲಯದಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿಗೆ ಪ್ರವೇಶ ಪಡೆದರು. ಇವರು 1916 ರಲ್ಲಿ ನಡೆದ ಅಂತರ ಕಲಾ ಪರೀಕ್ಷೆಯಲ್ಲಿ 17 ನೇ ರ್ಯಾಂಕ್ ಪಡೆದರು.

1924 ರಲ್ಲಿ, ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇರಿಕೊಂಡರು, ಮತ್ತು 1934 ರಲ್ಲಿ, 33 ನೇ ವಯಸ್ಸಿನಲ್ಲಿ, ಮುಖರ್ಜಿ ಕಲ್ಕತ್ತಾ ವಿಶ್ವವಿದ್ಯಾಲಯದ ಕಿರಿಯ ಉಪಕುಲಪತಿಯಾದರು. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಅಧಿಕಾರಾವಧಿಯಲ್ಲಿ ಬಂಗಾಳಿಯಲ್ಲಿ ವಿಶ್ವವಿದ್ಯಾಲಯದ ಸಮಾವೇಶ ಭಾಷಣ ಮಾಡಿದರು. ಇದೇ ಮೊದಲ ಬಾರಿಗೆ ಇದೇ ರೀತಿ ಸಂಭವಿಸಿದೆ.

1951 ರಲ್ಲಿ ಮುಖರ್ಜಿ ಭಾರತೀಯ ಜನ ಸಂಘವನ್ನು ಸ್ಥಾಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಎಂ.ಎಸ್.ಗೋಲ್ವಾಲ್ಕರ್ ಅವರನ್ನು ಸಂಪರ್ಕಿಸಿದ ನಂತರ ಅವರು ಈ ಸಂಘವನ್ನು ಮಾಡಿದ್ದಾರೆ.

ಮುಖರ್ಜಿ ಕ್ವಿಟ್ ಇಂಡಿಯಾ ಚಳವಳಿಯ ವಿರುದ್ಧ ಇದ್ದರು. ಅದನ್ನು ತಡೆಯುವ ಸಲುವಾಗಿ ಅವರು ಬ್ರಿಟಿಷ್  ಗವರ್ನರ್​​ಗೆ ಹಲವಾರು ಪತ್ರಗಳನ್ನು ಬರೆದರು. ಅಖಿಲ್ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ಇದನ್ನು ಮಾಡಿದರು. ಕ್ವಿಟ್ ಇಂಡಿಯಾ ಚಳುವಳಿ ಸಮಾಜದ ಸಮಗ್ರತೆಯನ್ನು ಹಾಳು ಮಾಡುತ್ತದೆ ಎಂದು ಮುಖರ್ಜಿ ಮತ್ತು ಮಹಾಸಭೆಯ ಇತರ ಸದಸ್ಯರು ಭಾವಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಟೆಕ್‌ ಸಮಿಟ್‌ ದಿನಾಂಕ ನಿಗದಿ; ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ಗೆ ಆಹ್ವಾನ

(PM Narendra Modi paid tribute to Bharatiya Jana Sangh founder Syama Prasad Mookerjee on his 120th birth anniversary)

Published On - 12:10 pm, Tue, 6 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್